ಟೊಯೊಟಾ ಕಾರು ಭಸ್ಮ  
ರಾಜ್ಯ

ಬೆಂಗಳೂರು: ಕಮಿಷನರ್ ಕಚೇರಿ ಹೊರಗೆ ಚಲಿಸುತ್ತಿದ್ದ ಕಾರಿಗೆ ಆಕಸ್ಮಿಕ ಬೆಂಕಿ, ಹೊತ್ತಿ ಉರಿದ ಟೊಯೋಟಾ ಕಾರು

ಶಬ್ಬೀರ್ ಎಂಬುವವರು ತಮ್ಮ ಟೊಯೋಟಾ ಕಂಪನಿಯ 'ಟೈಸರ್' (Toyota Taisor) ಮಾಡೆಲ್ ಕೆಂಪು ಬಣ್ಣದ ಕಾರಿನಲ್ಲಿ ಇನ್‌ಫೆಂಟ್ರಿ ರಸ್ತೆಯ ಮಾರ್ಗವಾಗಿ ಪ್ರಯಾಣ ಮಾಡುತ್ತಿದ್ದರು.

ಬೆಂಗಳೂರು: ನಗರದ ಪೊಲೀಸ್ ಕಮಿಷನರ್ ಕಚೇರಿಯ ಹೊರಗೆ ಚಲಿಸುತ್ತಿದ್ದ ಕಾರೊಂದರ ಇಂಜಿನ್‌ನಲ್ಲಿ ದಿಢೀರನೆ ಭೀಕರ ಬೆಂಕಿ ಕಾಣಿಸಿಕೊಂಡು ಭಾಗಶಃ ಸುಟ್ಟು ಹೋದ ಘಟನೆ ಇನ್‌ಫೆಂಟ್ರಿ ರಸ್ತೆಯಲ್ಲಿ ಇಂದು ಶನಿವಾರ ಬೆಳಗ್ಗೆ ನಡೆದಿದೆ. ಸಮಯಪ್ರಜ್ಞೆಯಿಂದ ಚಾಲಕ ತಕ್ಷಣವೇ ಕಾರಿನಿಂದ ಕೆಳಗಿಳಿದ ಕಾರಣ ಜೀವಾಪಾಯದಿಂದ ಪಾರಾಗಿದ್ದಾರೆ.

ಶಬ್ಬೀರ್ ಎಂಬುವವರು ತಮ್ಮ ಟೊಯೋಟಾ ಕಂಪನಿಯ 'ಟೈಸರ್' (Toyota Taisor) ಮಾಡೆಲ್ ಕೆಂಪು ಬಣ್ಣದ ಕಾರಿನಲ್ಲಿ ಇನ್‌ಫೆಂಟ್ರಿ ರಸ್ತೆಯ ಮಾರ್ಗವಾಗಿ ಪ್ರಯಾಣ ಮಾಡುತ್ತಿದ್ದರು. ಕಾರಿನಲ್ಲಿ ಒಬ್ಬರೇ ಇದ್ದರು. ಕಮಿಷನರ್ ಕಚೇರಿ ಮುಂಭಾಗ ಬರುತ್ತಿದ್ದಂತೆ ಕಾರಿನ ಇಂಜಿನ್ ಭಾಗದಿಂದ ದಿಢೀರನೆ ದಟ್ಟ ಹೊಗೆ ಮತ್ತು ಬೆಂಕಿ ಕಾಣಿಸಿಕೊಂಡಿತು. ಇಂಜಿನ್‌ನಲ್ಲಿ ಬೆಂಕಿ ಕಾಣಿಸಿಕೊಂಡ ತಕ್ಷಣವೇ ಅಪಾಯವನ್ನು ಅರಿತ ಮಾಲೀಕ ಶಬ್ಬೀರ್, ತಡಮಾಡದೇ ಕಾರನ್ನು ರಸ್ತೆ ಬದಿಗೆ ನಿಲ್ಲಿಸಿ ತಕ್ಷಣ ಕೆಳಗಿಳಿದು ಸಹಾಯಕ್ಕಾಗಿ ಕೇಳಿಕೊಂಡರು.

ನಡುರಸ್ತೆಯಲ್ಲಿ ಕಾರು ಹೊತ್ತಿ ಉರಿಯುತ್ತಿದ್ದನ್ನು ಕಂಡ ತಕ್ಷಣವೇ ಕರ್ತವ್ಯದಲ್ಲಿದ್ದ ಸಂಚಾರ ಪೊಲೀಸ್ ಸಿಬ್ಬಂದಿ, ಸಾರ್ವಜನಿಕರು ಹಾಗೂ ಸಮೀಪದಲ್ಲಿದ್ದ ಸ್ಪರ್ಶ್ ಆಸ್ಪತ್ರೆಯ ಸಿಬ್ಬಂದಿ ಧಾವಿಸಿ ಬಂದರು. ಆಸ್ಪತ್ರೆ ಹಾಗೂ ಸುತ್ತಮುತ್ತಲ ಕಟ್ಟಡಗಳಲ್ಲಿ ಇದ್ದ 'ಫೈರ್ ಎಕ್ಸ್‌ಟಿಂಗ್ಯುಷರ್' ಬಳಸಿ ಬೆಂಕಿಯನ್ನು ಸಂಪೂರ್ಣವಾಗಿ ಹತೋಟಿಗೆ ತರಲಾಯಿತು.

ಇಂಜಿನ್ ಸಂಪೂರ್ಣ ಭಸ್ಮ-ಚಾಲಕ ಸುರಕ್ಷಿತ

ಸಮಯಕ್ಕೆ ಸರಿಯಾಗಿ ಬೆಂಕಿ ನಂದಿಸಿದ್ದರಿಂದ ಅಕ್ಕಪಕ್ಕದ ವಾಹನಗಳಿಗೆ ಹಾಗೂ ಸಾರ್ವಜನಿಕರಿಗೆ ಅನಾಹುತ ಸಂಭವಿಸಿಲ್ಲ. ಈ ಬೆಂಕಿ ಅವಘಡದಲ್ಲಿ ಕಾರಿನ ಮುಂಭಾಗದ ಇಂಜಿನ್ ಸಂಪೂರ್ಣವಾಗಿ ಸುಟ್ಟು ಕರಕಲಾಗಿದ್ದು, ಭಾರೀ ಹಾನಿಯಾಗಿದೆ. ಇಂಜಿನ್‌ನಲ್ಲಿ ಶಾರ್ಟ್ ಸರ್ಕ್ಯೂಟ್ ಅಥವಾ ತಾಂತ್ರಿಕ ದೋಷದಿಂದ ಬೆಂಕಿ ಕಾಣಿಸಿಕೊಂಡಿರಬಹುದು ಎಂದು ಶಂಕಿಸಲಾಗಿದ್ದು, ಘಟನೆಗೆ ಸಂಬಂಧಿಸಿದಂತೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Delhi CJP Protest: ಅಭಿಜೀತ್ ದೀಪ್ಕೆ, ಸೌರವ್ ದಾಸ್, ಆಶುತೋಷ್ ರಂಕಾ,ಯೂಟ್ಯೂಬರ್ ಧ್ರುವ್ ರಾಠಿ ಸೇರಿ 200ಕ್ಕೂ ಹೆಚ್ಚು ಮಂದಿ ಪೊಲೀಸ್ ವಶಕ್ಕೆ; Video

CEC ಜ್ಞಾನೇಶ್ ಕುಮಾರ್ ವಜಾಕ್ಕೆ ಆಗ್ರಹಿಸಿ CJP ಪ್ರತಿಭಟನೆ: ದೆಹಲಿಯಲ್ಲಿ ಬಂಧನ ಪ್ರಕ್ರಿಯೆ ಆರಂಭ, ತೀವ್ರ ಭದ್ರತೆ; Video

‘ಪ್ರೇಮದ ಊರಲಿ’ ಭರ್ಜರಿ ಕಲೆಕ್ಷನ್: ಬಾಕ್ಸ್ ಆಫೀಸ್‌ನಲ್ಲಿ ಬರೋಬ್ಬರಿ 39 ಕೋಟಿ ರೂ. ಗಳಿಕೆ!

‘ಕಾನೂನು ಸುವ್ಯವಸ್ಥೆಗೆ ಗಂಭೀರ ಅಪಾಯವಿದೆ’: ಸಿಜೆಪಿ ಪ್ರತಿಭಟನೆಗೆ ಕೆಲವೇ ಗಂಟೆ ಮೊದಲು ರಾಜ್ಯಗಳಿಗೆ ಪತ್ರ ಬರೆದು MHA ಹೇಳಿದ್ದೇನು?

ನವೆಂಬರ್‌ನಲ್ಲಿ ಕರ್ನಾಟಕ ಬಿಜೆಪಿಗೆ ಮೇಜರ್ ಸರ್ಜರಿ: ಬಿವೈ ವಿಜಯೇಂದ್ರ, ಆರ್ ಅಶೋಕಗೆ ಗೇಟ್ ಪಾಸ್?; ಹೊಸ ಮುಖಗಳಿಗೆ ಮಣೆ!