ಭೂಮಿಕಾ - ಕಿರಣ್ 
ರಾಜ್ಯ

ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌‌ವೇಯಲ್ಲಿ ಅಪಘಾತಕ್ಕೆ ಬಿಗ್ ಟ್ವಿಸ್ಟ್: ಸ್ನೇಹಿತನಿಂದಲೇ ಭೂಮಿಕಾ ಕೊಲೆ?

ಚನ್ನಪಟ್ಟಣ ತಾಲೂಕಿನ ಸಂಕಲಗೆರೆ ಬಳಿ ರಸ್ತೆ ದಾಟುತ್ತಿದ್ದ ಭೂಮಿಕಾಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಅವರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ ಎಂದು ಆರಂಭದಲ್ಲಿ ಹೇಳಲಾಗಿತ್ತು.

ರಾಮನಗರ: ಕಳೆದ ಶುಕ್ರವಾರ ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ ವೇಯಲ್ಲಿ ಸಂಭವಿಸಿದ ಭೀಕರ ಅಪಘಾತದಲ್ಲಿ ಯುವತಿಯೊಬ್ಬರು ಮೃತಪಟ್ಟ ಪ್ರಕರಣ ಇದೀಗ ಹೊಸ ತಿರುವು ಪಡೆದುಕೊಂಡಿದೆ. ಇದು ಕೇವಲ ಅಪಘಾತವಲ್ಲ, ಇದು ಕೊಲೆ ಎಂದು ಮೃತ ಯುವತಿ ಭೂಮಿಕಾ ಪೋಷಕರು ಆರೋಪಿಸಿದ್ದಾರೆ.

ಚನ್ನಪಟ್ಟಣ ತಾಲೂಕಿನ ಸಂಕಲಗೆರೆ ಬಳಿ ರಸ್ತೆ ದಾಟುತ್ತಿದ್ದ ಭೂಮಿಕಾಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಅವರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ ಎಂದು ಆರಂಭದಲ್ಲಿ ಹೇಳಲಾಗಿತ್ತು. ಆದರೆ ಈ ಅಪಘಾತಕ ಬಗ್ಗೆ ಅನುಮಾನ ವ್ಯಕ್ತಪಡಿಸಿದ ಯುತಿಯ ಪೋಷಕರು, ಭೂಮಿಕಾ ಅವರ ಸ್ನೇಹಿತನ ವಿರುದ್ಧ ಚನ್ನಪಟ್ಟಣ ಟೌನ್‌ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಅಪಘಾತಕ್ಕೂ ಮುನ್ನ ಕುಂಬಳಗೂಡು ಸಮೀಪದ ರಾಮೋಹಳ್ಳಿ ಗ್ರಾಮದ ಭೂಮಿಕಾ(22) ಮೇಲೆ ಹಲ್ಲೆ ನಡೆದಿತ್ತು ಎಂಬ ಆರೋಪವೂ ಕೇಳಿಬಂದಿದ್ದು, ಪ್ರಕರಣ ಈಗ ಕುತೂಹಲ ಮೂಡಿಸಿದೆ.

ಆರಂಭದಲ್ಲಿ ಭೂಮಿಕಾ ತಮ್ಮ ಸ್ನೇಹಿತರೊಂದಿಗೆ ಚನ್ನಪಟ್ಟಣಕ್ಕೆ ಆಗಮಿಸಿದ್ದರು. ತಡರಾತ್ರಿ ಸಂಕಲಗೆರೆ ಬಳಿ ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌‌ವೇ ರಸ್ತೆ ದಾಟಲು ಯತ್ನಿಸುತ್ತಿದ್ದಾಗ, ಅತಿ ವೇಗವಾಗಿ ಬಂದ ಕಾರೊಂದು ಡಿಕ್ಕಿ ಹೊಡೆದಿದೆ ಎಂದು ಹೇಳಲಾಗಿತ್ತು. ಚನ್ನಪಟ್ಟಣ ಸಂಚಾರಿ ಪೊಲೀಸ್‌ ಠಾಣೆಯಲ್ಲಿ ರಸ್ತೆ ಅಪಘಾತ ಪ್ರಕರಣ ದಾಖಲಾಗಿತ್ತು. ಆದರೆ, ಮಗಳ ಸಾವು ಅಪಘಾತದಿಂದ ಆಗಿದ್ದಲ್ಲ, ಇದರ ಹಿಂದೆ ಬೇರೆ ಕಾರಣವಿದೆ ಎಂದು ಪೋಷಕರು ಆರೋಪಿಸಿದ್ದಾರೆ.

ಕಿರಣ್ ಭೇಟಿಗೆ ಬಂದಿದ್ದ ಭೂಮಿಕಾ

ಭೂಮಿಕಾ ಬೆಂಗಳೂರಿನಿಂದ ಕಿರಣ್‌ ಎಂಬಾತನನ್ನು ಭೇಟಿಯಾಗಲು ಚನ್ನಪಟ್ಟಣಕ್ಕೆ ಬಂದಿದ್ದರು. ಇಬ್ಬರ ನಡುವೆ ಪ್ರೀತಿ ಇತ್ತು ಎಂದು ಹೇಳಲಾಗಿದ್ದು, ಯಾವುದೋ ವಿಚಾರಕ್ಕೆ ಇಬ್ಬರ ನಡುವೆ ಗಲಾಟೆ ನಡೆದಿತ್ತು ಎಂದು ಪೋಷಕರು ದೂರಿನಲ್ಲಿ ಉಲ್ಲೇಖಿಸಿದ್ದಾರೆ. ಈ ವೇಳೆ ಕಿರಣ್‌ ತನ್ನ ಸಹೋದರ ಆಶಿತ್‌ ಜೊತೆ ಸೇರಿ ಭೂಮಿಕಾ ಮೇಲೆ ಹಲ್ಲೆ ನಡೆಸಿದ್ದಾನೆ ಎಂಬುದು ಅವರು ಆರೋಪಿಸಿದ್ದಾರೆ.

ಭೂಮಿಕಾ ಬೆಂಗಳೂರಿನಿಂದ ಕಾರಿನಲ್ಲಿ ಬಂದಿದ್ದರೂ, ಎಕ್ಸ್‌ಪ್ರೆಸ್‌ವೇಯಲ್ಲಿ ಬೈಕ್‌ನಲ್ಲಿ ಪ್ರಯಾಣಿಸಿದ್ದು ಯಾಕೆ? ಬೈಕ್‌ನಿಂದ ಇಳಿದು ರಸ್ತೆ ದಾಟುವಾಗ ಕೆಳಗೆ ಬಿದ್ದ ಭೂಮಿಕಾಳನ್ನು ಬಿಟ್ಟು ಜೊತೆಗಿದ್ದವರು ಸ್ಥಳದಿಂದ ತೆರಳಿದ್ದು ಯಾಕೆ? ಎಂಬ ಪ್ರಶ್ನೆಗಳನ್ನು ಪೋಷಕರು ಎತ್ತಿದ್ದಾರೆ.

ದೂರಿನ ಆಧಾರದ ಮೇಲೆ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಕೈಗೊಂಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಇಂದಿರಾ ಗಾಂಧಿ ಕೂಡ ಹೀಗೆ ಮಾಡಿರಲಿಲ್ಲ': ದೆಹಲಿ ವಿಮಾನ ನಿಲ್ದಾಣದಲ್ಲಿ ವಶಕ್ಕೆ ಪಡೆಯುವ ಮುನ್ನ ಅಭಿಜಿತ್ ದೀಪ್ಕೆ; ವಿಡಿಯೋ ಹಂಚಿಕೊಂಡ CJP

ದೇಶವಿರೋಧಿ ಶಕ್ತಿಗಳಿಂದ ಅಶಾಂತಿ ಸೃಷ್ಟಿಗೆ ಯತ್ನ; CJP ಪ್ರತಿಭಟನೆಯಿಂದ ದೂರವಿರಿ: ಮುಸ್ಲಿಮರಿಗೆ ಇಮಾಮ್‌ ಮುಖ್ಯಸ್ಥ ಕರೆ

CJP ಪ್ರತಿಭಟನೆ: ದೆಹಲಿ ಪೊಲೀಸರ ವಿರುದ್ಧ ಸುಪ್ರೀಂ ಕೋರ್ಟ್‌ನಲ್ಲಿ ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಕೆ!

Delhi CJP Protest: ಅಭಿಜೀತ್ ದೀಪ್ಕೆ, ಸೌರವ್ ದಾಸ್, ಆಶುತೋಷ್ ರಂಕಾ,ಯೂಟ್ಯೂಬರ್ ಧ್ರುವ್ ರಾಠಿ ಸೇರಿ 200ಕ್ಕೂ ಹೆಚ್ಚು ಮಂದಿ ಪೊಲೀಸ್ ವಶಕ್ಕೆ; Video

ಸ್ಟಾರ್‌ಲಿಂಕ್ ವಿವಾದ: ಭಾರತ ವಸಾಹತಲ್ಲ- Elon Musk ಗೆ ಕಮಲ್ ಹಾಸನ್ ತಿರುಗೇಟು