ಮೃತ ರೈತ ಶಿವಸ್ವಾಮಿ 
ರಾಜ್ಯ

ಬೆಂಗಳೂರು ದಕ್ಷಿಣ ಜಿಲ್ಲೆ: ಮಾಗಡಿ ಬಳಿ ಚಿರತೆ ದಾಳಿಗೆ ಪ್ರಾಣ ಬಿಟ್ಟ ರೈತ!

ಚಿರತೆ ದಾಳಿಗೆ ರೈತನೊಬ್ಬ ಬಲಿಯಾಗಿರುವ ಘಟನೆ ಮಾಗಡಿ ತಾಲೂಕಿನ ಕಲ್ಲುದೇವನಹಳ್ಳಿ ಗ್ರಾಮದಲ್ಲಿ ಸೋಮವಾರ ನಡೆದಿದೆ.

ಮಾಗಡಿ: ಬೆಂಗಳೂರು ದಕ್ಷಿಣ ಜಿಲ್ಲೆಯಲ್ಲಿ ಚಿರತೆ ಹಾವಳಿ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಅಹಾರ ಅರಸಿ ಕಾಡಿನಿಂದ ನಾಡಿಗೆ ಬರುತ್ತಿರುವ ವನ್ಯಜೀವಿಗಳು, ಮನುಷ್ಯರನ್ನು ಬಲಿಪಡೆಯುತ್ತಿವೆ.

ಚಿರತೆ ದಾಳಿಗೆ ರೈತನೊಬ್ಬ ಬಲಿಯಾಗಿರುವ ಘಟನೆ ಮಾಗಡಿ ತಾಲೂಕಿನ ಕಲ್ಲುದೇವನಹಳ್ಳಿ ಗ್ರಾಮದಲ್ಲಿ ಸೋಮವಾರ ನಡೆದಿದೆ. ಗ್ರಾಮದ ಮಹಾದೇಶ್ವರ ಸ್ವಾಮಿ ದೇವಾಲಯದ ಅರ್ಚಕ ಹಾಗೂ ಪ್ರಗತಿ ಪರ ರೈತ ಶಿವಸ್ವಾಮಿ ಮೃತ ದುರ್ದೈವಿ.

ತಮ್ಮ ತೋಟದಲ್ಲಿ ಕಾಕಡ ಹೂ ಬಿಡಿಸಲು ಸೋಮವಾರ ಮುಂಜಾನೆ ತೆರಳಿದಾಗ ಇವರ ಮೇಲೆ ಚಿರತೆಯೊಂದು ಹಠಾತ್ ಎರಗಿದೆ. ಇದರಿಂದ ತೀವ್ರವಾಗಿ ಗಾಯಗೊಂಡ ಶಿವಸ್ವಾಮಿ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.

ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ವೇಳೆ ಪ್ರತಿಭಟನೆ ನಡೆಸಿದ ಸ್ಥಳೀಯ ರೈತರು, ಜಿಲ್ಲಾಧಿಕಾರಿ ಸ್ಥಳಕ್ಕೆ ಬರಬೇಕು ಎಂದು ರೈತರು ಆಗ್ರಹಿಸಿದರು.ಮಾಗಡಿ ತಾಲೂಕಿನಲ್ಲಿ ಚಿರತೆ ಹಾವಳಿಯಿಂದ ಮೃತಪಡುವವರ ಸಂಖ್ಯೆ ಹೆಚ್ಚಾಗುತ್ತಿದ್ದರೂ ಅರಣ್ಯ ಇಲಾಖೆ ಕ್ರಮ ವಹಿಸುತ್ತಿಲ್ಲ ಎಂದು ಸ್ಥಳೀಯರು ಆರೋಪಿಸಿದರು.

ವಿಷಯ ತಿಳಿಯುತ್ತಿದ್ದಂತೆಯೇ ಮಾಜಿ ಶಾಸಕ ಎ. ಮಂಜುನಾಥ್, ಬಿಡಿಸಿಸಿ ಬ್ಯಾಂಕ್ ಅಧ್ಯಕ್ಷ ಅಶೋಕ್ ಕುಟುಂಬ ಸದಸ್ಯರಿಗೆ ಸಾಂತ್ವನ ತಿಳಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Chalo Supreme Court: ಭೇಟಿ ಮನವಿ ತಿರಸ್ಕರಿಸಿದ CJI ಸೂರ್ಯಕಾಂತ್; ಸುಪ್ರೀಂ ಕೋರ್ಟ್‌ನತ್ತ ಇಂಡಿಯಾ ಬ್ಲಾಕ್ ಮೆರವಣಿಗೆ!

ಸರ್ಕಾರದ 200 ಅಧಿಕಾರಿಗಳು ವಿರೋಧ ಪಕ್ಷದ ಸಂಪರ್ಕದಲ್ಲಿ: ಪ್ರತಿಭಟನಾ ಜಾಥಾಕ್ಕೂ ಮುನ್ನ ರಾಹುಲ್ ಗಾಂಧಿ ಹೊಸಬಾಂಬ್!

'ಕೈ ಮುಗೀತೀನಿ ಬಿಟ್ ಬಿಡ್ರೋ': ಫ್ರೀ ಗಿಫ್ಟ್ ಕೇಳಿದ್ದೇ ತಪ್ಪಾಯ್ತು, ಮನೆಗೆ ಬಂತು 70 ಕೋಟಿ ರೂ.ಮಿಲಿಟರಿ ಟ್ಯಾಂಕ್ ಆರ್ಡರ್; ನೆಟ್ಟಿಗರ ಕಾಟಕ್ಕೆ ವ್ಯಕ್ತಿ ಹೈರಾಣ!-Video

'ಸುಪ್ರೀಂ ಕೋರ್ಟ್‌ಗೆ ಅಲೆದು, ಅಲೆದು ಸಾಕಾಗಿ ಹೋಗಿದೆ'; ಹಿರಿಯ ವಕೀಲ ಕಪಿಲ್ ಸಿಬಲ್ ಅಚ್ಚರಿ ಹೇಳಿಕೆ, ನ್ಯಾಯಾಲಯ ಹೇಳಿದ್ದೇನು?

ಕೊಲ್ಲಾಪುರ: ಮದುವೆಯಾಗಲು ನಿರಾಕರಿಸಿದ ಯುವತಿಯನ್ನು ಕಣಿವೆಗೆ ತಳ್ಳಿ ಕೊಲೆಗೈದ ಬಾಯ್​ಫ್ರೆಂಡ್​!