ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ರಾಜ್ಯ

ವಿಡಿಯೋ ಪ್ರಸಾರ ಮಾಡದಂತೆ ತಡೆಯಾಜ್ಞೆ ಕೋರಿ ಕೋರ್ಟ್ ಮೆಟ್ಟಿಲೇರಿದ ಮಾಜಿ ಮುಖ್ಯಮಂತ್ರಿ!

ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಫೇಕ್ 'ಸ್ಟಿಂಗ್ ಆಪರೇಷನ್' (ನಕಲಿ ರಹಸ್ಯ ಕಾರ್ಯಾಚರಣೆ) ಕುರಿತಾದ ವದಂತಿಗಳ ಬಗ್ಗೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ತೀವ್ರ ಪ್ರತಿಕ್ರಿಯೆ ನೀಡಿದ್ದಾರೆ.

ಸಿದ್ದರಾಮಯ್ಯ
Vishwanath S
Updated On : 12 Oct 2026, 10:50 pm

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ , ಸ್ಟಿಂಗ್ ಆಪರೇಷನ್ ವಿವಾದಕ್ಕೆ ಸಂಬಂಧಿಸಿದ ವೈರಲ್ ವಿಡಿಯೊ ಮತ್ತು ಅದಕ್ಕೆ ಸಂಬಂಧಿಸಿದ ಆರೋಪಗಳ ಪ್ರಸಾರ ಹಾಗೂ ಹಂಚಿಕೆಗೆ ತಡೆಯಾಜ್ಞೆ ನೀಡುವಂತೆ ಕೋರಿ, ತಮ್ಮ ವಕೀಲ ಪ್ರವೀಣ್ ಕಾಮತ್ ಮೂಲಕ ಬೆಂಗಳೂರಿನ 19ನೇ ಹೆಚ್ಚುವರಿ ಸಿಟಿ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯದಲ್ಲಿ (ಸಿಸಿಎಚ್-18) ಅರ್ಜಿ ಸಲ್ಲಿಸಿದ್ದಾರೆ.

ವಿವಾದಿತ ವಿಡಿಯೊ ಮತ್ತು ಅದಕ್ಕೆ ಸಂಬಂಧಿಸಿದ ವಿಷಯಗಳನ್ನು ಹಂಚಿಕೊಳ್ಳದಂತೆ ಅಥವಾ ಪ್ರಸಾರ ಮಾಡದಂತೆ ಮಾಧ್ಯಮ ಸಂಸ್ಥೆಗಳು ಹಾಗೂ ಇತರ ವೇದಿಕೆಗಳಿಗೆ ನಿರ್ಬಂಧ ವಿಧಿಸುವಂತೆ ಅರ್ಜಿಯಲ್ಲಿ ಕೋರಿದ್ದಾರೆ. ಈ ವಿಷಯಗಳು ಮಾನಹಾನಿಕರವಾಗಿದ್ದು, ಸುಳ್ಳು ಆರೋಪಗಳನ್ನು ಒಳಗೊಂಡಿವೆ ಎಂದು ಹೇಳಿದ್ದಾರೆ.

Also Read

CM ಡಿಕೆಶಿ​​ ಕುರ್ತಾ ಹಿಡಿದು ಹಿಂದೆ ತಳ್ಳಿದ ರಾಹುಲ್ ಗಾಂಧಿ: ವಿಡಿಯೋ ವೈರಲ್; ಬಂಡೆಗೆ ಸಿಕ್ಕ ಮರ್ಯಾದೆ! ಫುಲ್‌ ಅನ್‌ ರೆಸ್ಪೆಕ್ಟು!

ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ಸಿದ್ದರಾಮಯ್ಯ ಅವರನ್ನು ಒಳಗೊಂಡಿದೆ ಎನ್ನಲಾದ ಸ್ಟಿಂಗ್ ಆಪರೇಷನ್ ಕುರಿತು ಆರೋಪಗಳನ್ನು ಮಾಡಿರುವ ಬೆನ್ನಲ್ಲೇ ಈ ಕಾನೂನು ಕ್ರಮ ಕೈಗೊಳ್ಳಲಾಗಿದೆ. ಈ ವಿಚಾರವು ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದ್ದು, ತನಿಖೆಗೆ ಆದೇಶಿಸಲು ಹಿಂದೇಟು ಹಾಕುತ್ತಿರುವುದೇಕೆ ಎಂದು ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ. ಮತ್ತೊಂದೆಡೆ, ಸಿದ್ದರಾಮಯ್ಯ ಕೂಡ ಈ ಪ್ರಕರಣದ ತನಿಖೆಗೆ ಒತ್ತಾಯಿಸಿದ್ದಾರೆ.

Advertisement

Advertisement

ಈ ಅರ್ಜಿಯಲ್ಲಿ ಹಲವು ಮಾಧ್ಯಮ ಸಂಸ್ಥೆಗಳು ಮತ್ತು ಸುದ್ದಿ ವಾಹಿನಿಗಳನ್ನು ಪ್ರತಿವಾದಿಗಳನ್ನಾಗಿ ಹೆಸರಿಸಲಾಗಿದೆ. ಅರ್ಜಿಗೆ ಸಂಬಂಧಿಸಿದಂತೆ ಇಂದು ನ್ಯಾಯಾಲಯದ ನಿರ್ಧಾರ ಹೊರಬೀಳುವ ನಿರೀಕ್ಷೆಯಿದೆ.

ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಫೇಕ್ 'ಸ್ಟಿಂಗ್ ಆಪರೇಷನ್' (ನಕಲಿ ರಹಸ್ಯ ಕಾರ್ಯಾಚರಣೆ) ಕುರಿತಾದ ವದಂತಿಗಳ ಬಗ್ಗೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ತೀವ್ರ ಪ್ರತಿಕ್ರಿಯೆ ನೀಡಿದ್ದಾರೆ. ತಮ್ಮ ವರ್ಚಸ್ಸಿಗೆ ಧಕ್ಕೆ ತರುವ ಉದ್ದೇಶದಿಂದ ತಮ್ಮ ವಿರುದ್ಧ ಸುಳ್ಳು ಪ್ರಚಾರ ನಡೆಸಲಾಗುತ್ತಿದೆ, ಇದೇ ಕಾರಣಕ್ಕೆ ತಾವು ನ್ಯಾಯಾಲಯದಿಂದ ತಡೆಯಾಜ್ಞೆ ಕೋರಿದ್ದಾಗಿ ತಿಳಿಸಿದರು.

ಸಿಇಸಿ (CEC) ಮತ್ತು ಎಸ್‌ಐಆರ್ (SIR) ವಿರುದ್ಧ ನವದೆಹಲಿಯಲ್ಲಿ ನಡೆದ ಬೃಹತ್ ಪ್ರತಿಭಟನೆಯಲ್ಲಿ ತಾವು ಭಾಗವಹಿಸದಿರುವ ಬಗ್ಗೆ ಸ್ಪಷ್ಟನೆ ನೀಡಿದ ಅವರು, ದೆಹಲಿಯಲ್ಲಿ ರಾಹುಲ್ ಗಾಂಧಿ ಮತ್ತು ಡಿ.ಕೆ ಶಿವಕುಮಾರ್ ಅವರೊಂದಿಗೆ ಸೇರಿಕೊಳ್ಳಲು ಯೋಜಿಸಿದ್ದರೂ, ಬೆಂಗಳೂರಿನಲ್ಲಿ ಮೊದಲೇ ನಿಗದಿಯಾಗಿದ್ದ ಪುಸ್ತಕ ಬಿಡುಗಡೆ ಸಮಾರಂಭವಿದ್ದ ಕಾರಣ ಆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಸಾಧ್ಯವಾಗಲಿಲ್ಲ ಎಂದು ಹೇಳಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement