ಹುಣಸಮಾರನಹಳ್ಳಿ ಮಠದ ನಂಜೇಶ್ವರ ಶಿವಾಚಾರ್ಯ ಸ್ವಾಮೀಜಿ ಬಂಧನ 
ರಾಜ್ಯ

ಯುವತಿ ಮೇಲೆ ಅತ್ಯಾಚಾರ ಆರೋಪ: ಹುಣಸಮಾರನಹಳ್ಳಿ ಮಠದ ನಂಜೇಶ್ವರ ಶಿವಾಚಾರ್ಯ ಸ್ವಾಮೀಜಿ ಬಂಧನ

ಯುವತಿ ನೀಡಿದ ದೂರಿನ ಆಧಾರದ ಮೇಲೆ ಎಫ್ಐಆರ್ ದಾಖಲಿಸಿಕೊಂಡ ಬೆಂಗಳೂರಿನ ಈಶಾನ್ಯ ವಿಭಾಗದ ಮಹಿಳಾ ಪೊಲೀಸ್ ಠಾಣೆಯ ಅಧಿಕಾರಿಗಳು, ತಕ್ಷಣವೇ ಆರೋಪಿ ಸ್ವಾಮೀಜಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

ಬೆಂಗಳೂರು: ಯುವತಿಯೊಬ್ಬರ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ ಬೆಂಗಳೂರಿನ ಹುಣಸಮಾರನಹಳ್ಳಿ ಮಠದ ದಯಾನಂದ ಅಲಿಯಾಸ್ ನಂಜೇಶ್ವರ ಶಿವಾಚಾರ್ಯ ಸ್ವಾಮೀಜಿಯನ್ನು ಪೊಲೀಸರು ಸೋಮವಾರ ಬಂಧಿಸಿದ್ದಾರೆ.

ಯುವತಿ ನೀಡಿದ ದೂರಿನ ಆಧಾರದ ಮೇಲೆ ಎಫ್ಐಆರ್ ದಾಖಲಿಸಿಕೊಂಡ ಬೆಂಗಳೂರಿನ ಈಶಾನ್ಯ ವಿಭಾಗದ ಮಹಿಳಾ ಪೊಲೀಸ್ ಠಾಣೆಯ ಅಧಿಕಾರಿಗಳು, ತಕ್ಷಣವೇ ಆರೋಪಿ ಸ್ವಾಮೀಜಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

ಬಂಧಿತ ನಂಜೇಶ್ವರ ಶಿವಾಚಾರ್ಯ ಸ್ವಾಮೀಜಿಯನ್ನು ನೇರವಾಗಿ ಪೊಲೀಸ್ ಠಾಣೆಗೆ ಕರೆತರಲಾಗಿದ್ದು, ಖಾಕಿ ಪಡೆಯು ಈ ಕುರಿತು ಕಟ್ಟುನಿಟ್ಟಿನ ವಿಚಾರಣೆ ಮತ್ತು ತನಿಖಾ ಪ್ರಕ್ರಿಯೆಯನ್ನು ತೀವ್ರಗೊಳಿಸಿದೆ.

ಯುವತಿಯನ್ನು ಮದುವೆಯಾಗುವುದಾಗಿ ನಂಬಿಸಿ, ಅತ್ಯಾಚಾರ ಎಸಗಿದ ಹಾಗೂ ವಂಚಿಸಿದ ಆರೋಪ ಸ್ವಾಮೀಜಿ ವಿರುದ್ಧ ಕೇಳಿಬಂದಿದೆ.

ನೂರಾರು ಕೋಟಿ ಜಮೀನು ಮಾಲೀಕತ್ವ ಹೊಂದಿರುವ ವೀರಶೈವ ಸಮುದಾಯದ ಹುಣಸಮಾರನಹಳ್ಳಿಮಠವು ವೀರಶೈವ ಲಿಂಗಾಯತ ಸಮುದಾಯದ ಪಂಚಪೀಠಗಳಲ್ಲಿ ಒಂದಾದ ಶ್ರೀಶೈಲ ಮಠದ ಶಾಖಾ ಮಠವಾಗಿದೆ.

ಇದಕ್ಕೂ ಮೊದಲು, ಅಂದರೆ 2017ರ ಅಕ್ಟೋಬರ್‌ನಲ್ಲೂ ಸಹ ಸ್ವಾಮೀಜಿಯವರ ವಿರುದ್ಧ ಇದೇ ರೀತಿಯಾಗಿ ಮಹಿಳೆಯರೊಂದಿಗೆ ಅಕ್ರಮ ಸಂಬಂಧ ಹಾಗೂ ದೈಹಿಕ ಸಂಪರ್ಕದ ಆರೋಪಗಳು ಕೇಳಿಬಂದಿದ್ದು, ಆ ಸಂದರ್ಭದಲ್ಲಿ ಗ್ರಾಮಸ್ಥರು ಮತ್ತು ಭಕ್ತರು ಮಠದ ಮುಂದೆ ಪ್ರತಿಭಟನೆ ನಡೆಸಿ ಅವರನ್ನು ಕೆಳಗಿಳಿಸುವಂತೆ ಆಗ್ರಹಿಸಿದ್ದರು.

ನಂಜೇಶ್ವರ ಶಿವಾಚಾರ್ಯ ಸ್ವಾಮೀಜಿ ಅವರ ಮೇಲಿನ ವಿವಾದಗಳ ಹಿನ್ನೆಲೆ ನೋಡುವುದಾದರೆ, ಇದು ಮೊದಲ ಬಾರಿಗೆ ಕೇಳಿಬಂದಿರುವ ಆರೋಪವಲ್ಲ. ಬೆಂಗಳೂರಿನ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಸಮೀಪವಿರುವ ಹುಣಸಮಾರನಹಳ್ಳಿ ಮಠವು ಸುಮಾರು 1500ಕ್ಕೂ ಅಧಿಕ ಎಕರೆ ಅತ್ಯಮೂಲ್ಯ ಜಮೀನನ್ನು ಹೊಂದಿರುವ ಅತ್ಯಂತ ಶ್ರೀಮಂತ ಮಠಗಳಲ್ಲಿ ಒಂದಾಗಿದ್ದು, ಇದರ ಆಸ್ತಿ ಹಾಗೂ ಜಮೀನಿಗೆ ಸಂಬಂಧಿಸಿದ ವಿವಾದಗಳು ಆಗಾಗ್ಗೆ ಮುನ್ನೆಲೆಗೆ ಬರುತ್ತಿರುತ್ತವೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Chalo Supreme Court: ಭೇಟಿ ಮನವಿ ತಿರಸ್ಕರಿಸಿದ CJI ಸೂರ್ಯಕಾಂತ್; ಸುಪ್ರೀಂ ಕೋರ್ಟ್‌ನತ್ತ ಇಂಡಿಯಾ ಬ್ಲಾಕ್ ಮೆರವಣಿಗೆ!

ಸರ್ಕಾರದ 200 ಅಧಿಕಾರಿಗಳು ವಿರೋಧ ಪಕ್ಷದ ಸಂಪರ್ಕದಲ್ಲಿ: ಪ್ರತಿಭಟನಾ ಜಾಥಾಕ್ಕೂ ಮುನ್ನ ರಾಹುಲ್ ಗಾಂಧಿ ಹೊಸಬಾಂಬ್!

'ಕೈ ಮುಗೀತೀನಿ ಬಿಟ್ ಬಿಡ್ರೋ': ಫ್ರೀ ಗಿಫ್ಟ್ ಕೇಳಿದ್ದೇ ತಪ್ಪಾಯ್ತು, ಮನೆಗೆ ಬಂತು 70 ಕೋಟಿ ರೂ.ಮಿಲಿಟರಿ ಟ್ಯಾಂಕ್ ಆರ್ಡರ್; ನೆಟ್ಟಿಗರ ಕಾಟಕ್ಕೆ ವ್ಯಕ್ತಿ ಹೈರಾಣ!-Video

'ಸುಪ್ರೀಂ ಕೋರ್ಟ್‌ಗೆ ಅಲೆದು, ಅಲೆದು ಸಾಕಾಗಿ ಹೋಗಿದೆ'; ಹಿರಿಯ ವಕೀಲ ಕಪಿಲ್ ಸಿಬಲ್ ಅಚ್ಚರಿ ಹೇಳಿಕೆ, ನ್ಯಾಯಾಲಯ ಹೇಳಿದ್ದೇನು?

ಕೊಲ್ಲಾಪುರ: ಮದುವೆಯಾಗಲು ನಿರಾಕರಿಸಿದ ಯುವತಿಯನ್ನು ಕಣಿವೆಗೆ ತಳ್ಳಿ ಕೊಲೆಗೈದ ಬಾಯ್​ಫ್ರೆಂಡ್​!