ವಶಕ್ಕೆ ಪಡೆದಿರುವ ಟ್ಯಾಂಕರ್ 
ರಾಜ್ಯ

ಅಬಕಾರಿ ಇಲಾಖೆ ಭರ್ಜರಿ ಕಾರ್ಯಾಚರಣೆ: ದಾಖಲೆಯಿಲ್ಲದೆ ಸಾಗಿಸುತ್ತಿದ್ದ 24 ಸಾವಿರ ಲೀಟರ್ ಮದ್ಯ ವಶಕ್ಕೆ, FIR ದಾಖಲು..!

ಅಬಕಾರಿ ಇಲಾಖೆ ನೀಡಿದ ಮಾಹಿತಿಯ ಪ್ರಕಾರ, ಶನಿವಾರ ಮಧ್ಯರಾತ್ರಿ ಸುಮಾರು 12.25ಕ್ಕೆ ಹೊಳಿಹೊಸೂರು ಗ್ರಾಮದಿಂದ ಎಂ.ಕೆ. ಹುಬ್ಬಳ್ಳಿ ಪಟ್ಟಣಕ್ಕೆ ಸಂಪರ್ಕ ಕಲ್ಪಿಸುವ ರಾಜ್ಯ ಹೆದ್ದಾರಿಯಲ್ಲಿ ಗಸ್ತು ತಿರುಗುತ್ತಿದ್ದ ಅಧಿಕಾರಿಗಳು ಈ ಕಾರ್ಯಾಚರಣೆ ನಡೆಸಿದ್ದಾರೆ.

ಬೆಳಗಾವಿ: ರಾಜ್ಯದಲ್ಲಿ ಅಕ್ರಮ ಮದ್ಯ ಸಾಗಾಟದ ವಿರುದ್ಧ ಅಬಕಾರಿ ಇಲಾಖೆ ಅಧಿಕಾರಿಗಳು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಬರೋಬ್ಬರಿ 24,000 ಲೀಟರ್ ಅಕ್ರಮ ಮದ್ಯ ತುಂಬಿದ್ದ ಭರತ್‌ಬೆಂಜ್ ಟ್ಯಾಂಕರ್ ಅನ್ನು ಬೆಳಗಾವಿ ಜಿಲ್ಲೆಯ ಎಂ.ಕೆ. ಹುಬ್ಬಳ್ಳಿ ಪಟ್ಟಣದ ಸಮೀಪ ಶನಿವಾರ ಜಪ್ತಿ ಮಾಡಿದ್ದಾರೆ. ವಶಪಡಿಸಿಕೊಂಡ ಟ್ಯಾಂಕರ್ ಮತ್ತು ಮದ್ಯದ ಒಟ್ಟು ಮೌಲ್ಯ 32.40 ಲಕ್ಷ ರೂ. ಎಂದು ಅಂದಾಜಿಸಲಾಗಿದೆ.

ಅಬಕಾರಿ ಇಲಾಖೆ ನೀಡಿದ ಮಾಹಿತಿಯ ಪ್ರಕಾರ, ಶನಿವಾರ ಮಧ್ಯರಾತ್ರಿ ಸುಮಾರು 12.25ಕ್ಕೆ ಹೊಳಿಹೊಸೂರು ಗ್ರಾಮದಿಂದ ಎಂ.ಕೆ. ಹುಬ್ಬಳ್ಳಿ ಪಟ್ಟಣಕ್ಕೆ ಸಂಪರ್ಕ ಕಲ್ಪಿಸುವ ರಾಜ್ಯ ಹೆದ್ದಾರಿಯಲ್ಲಿ ಗಸ್ತು ತಿರುಗುತ್ತಿದ್ದ ಅಧಿಕಾರಿಗಳು ಈ ಕಾರ್ಯಾಚರಣೆ ನಡೆಸಿದ್ದಾರೆ.

ಈ ವೇಳೆ ಕೆಎ-25-ಎಎ-3750 ನೋಂದಣಿ ಸಂಖ್ಯೆಯ ಭಾರತ್‌ಬೆನ್ಜ್ ಟ್ಯಾಂಕರ್ ಅನ್ನು ತಡೆದು ಪರಿಶೀಲಿಸಿದಾಗ, ಅದರಲ್ಲಿ ಅಕ್ರಮವಾಗಿ ಮದ್ಯ ಸಾಗಿಸುತ್ತಿರುವುದು ಪತ್ತೆಯಾಗಿದೆ.

ಇದರ ಬೆನ್ನಲ್ಲೇ ವಿಜಯಪುರ ಜಿಲ್ಲೆಯ ಬೋಳಚಿಕ್ಕಲಕಿ ಗ್ರಾಮದ ನಿವಾಸಿ, ಟ್ಯಾಂಕರ್ ಚಾಲಕ ಬಂಡೆನವಾಜ್ ನಬಿ ಸಾಬ್ ತಿಗಣಿಬಿದರಿ ಅವರಿಗೆ ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ (ಬಿಎನ್‌ಎಸ್‌ಎಸ್), 2023ರ ಸೆಕ್ಷನ್ 35(3)ರ ಅಡಿಯಲ್ಲಿ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಲಾಗಿದೆ.

ವಾಹನದ ಮಾಲೀಕರ ವಿರುದ್ಧವೂ ಪ್ರಕರಣ ದಾಖಲಿಸಲಾಗಿದ್ದು, ಪ್ರಥಮ ಮಾಹಿತಿ ವರದಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಬೆಳಗಾವಿ ಕೇಂದ್ರ ಕಚೇರಿಯ ಅಬಕಾರಿ ಹೆಚ್ಚುವರಿ ಆಯುಕ್ತರು, ಬೆಳಗಾವಿ ವಿಭಾಗದ ಜಂಟಿ ಆಯುಕ್ತರು, ಬೆಳಗಾವಿ ದಕ್ಷಿಣ ಜಿಲ್ಲೆಯ ಅಬಕಾರಿ ಉಪ ಆಯುಕ್ತರು ಹಾಗೂ ರಾಮದುರ್ಗ ಉಪವಿಭಾಗದ ಅಬಕಾರಿ ಉಪ ಅಧೀಕ್ಷಕರ ಮಾರ್ಗದರ್ಶನದಲ್ಲಿ ಬೈಲಹೊಂಗಲ ಅಬಕಾರಿ ವಲಯದ ಅಧಿಕಾರಿಗಳು ಈ ಕಾರ್ಯಾಚರಣೆ ನಡೆಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

‘ಪ್ರತಿಭಟನೆ ನಮ್ಮ ಸಾಂವಿಧಾನಿಕ ಹಕ್ಕು’: Jantar Mantar ಧರಣಿಗೆ ದಿನಾಂಕ ನಿಗದಿಪಡಿಸಿ; ದೆಹಲಿ ಪೊಲೀಸರಿಗೆ 24 ಗಂಟೆಗಳ ಗಡುವು ಕೊಟ್ಟ Cockroach Janta Party..!

‘Vote chori’ ಹೈಡ್ರಾಮಾ: "ಭೇಟಿ ಸಾಧ್ಯವಿಲ್ಲ, ಏನಿದ್ದರೂ ಕೋರ್ಟ್ ಮೂಲಕವೇ ಬನ್ನಿ; ರಾಹುಲ್ ಗಾಂಧಿ-ಖರ್ಗೆ ಭೇಟಿ ಮನವಿ ತಿರಸ್ಕರಿಸಿದ CJI ಸೂರ್ಯ ಕಾಂತ್..!

ಹೆಬ್ಬಾಳ ಕಿರು ಸುರಂಗ ಯೋಜನೆ "ಅವೈಜ್ಞಾನಿಕ": 1,350 ಕೋಟಿ ರೂ. ಸಾರ್ವಜನಿಕ ಹಣ ಪೋಲು: ಸಂಸದ ತೇಜಸ್ವಿ ಸೂರ್ಯ ಆಕ್ಷೇಪ

ನಾನೀಗ DCM, ಡಿಕೆ.ಶಿವಕುಮಾರ್ CM, ನಾಯಕತ್ವ ಬದಲಾವಣೆ ಪ್ರಶ್ನೆಯೇ ಇಲ್ಲ: ಡಾ. ಜಿ. ಪರಮೇಶ್ವರ್

ಶಕ್ತಿ, ಜ್ಞಾನ, ಸಂಸ್ಕೃತಿ, ಸಮಾನತೆಯ ಸಂಗಮ ಮೈಸೂರು ದಸರಾ: ಸಿಎಂ ಡಿಕೆ ಶಿವಕುಮಾರ್