ಡಿಜಿಟಲ್ ಅರೆಸ್ಟ್ (ಸಾಂಕೇತಿಕ ಚಿತ್ರ)  online desk
ರಾಜ್ಯ

'ಪಹಲ್ಗಾಮ್ ದಾಳಿಯ ಉಗ್ರರಿಗೆ ಹಣ ವರ್ಗಾವಣೆ' ಆರೋಪದ ಮೇಲೆ 'ಡಿಜಿಟಲ್ ಅರೆಸ್ಟ್'; ಪುತ್ತೂರಿನ ವ್ಯಕ್ತಿಗೆ 1.31 ಕೋಟಿ ರೂ. ವಂಚನೆ!

ದೂರಿನ ಪ್ರಕಾರ, ಆರೋಪಿಗಳು ವಾಟ್ಸಾಪ್ ವಿಡಿಯೋ ಕರೆಗಳ ಮೂಲಕ ಪುತ್ತೂರಿನ ವ್ಯಕ್ತಿಯನ್ನು ಸಂಪರ್ಕಿಸಿ, ಪಹಲ್ಗಾಮ್ ಹತ್ಯಾಕಾಂಡದಲ್ಲಿ ಭಾಗಿಯಾದ ಭಯೋತ್ಪಾದಕರಿಗೆ ಹಣ ವರ್ಗಾಯಿಸಿದ್ದೀರಿ ಎಂದು ಸುಳ್ಳು ಆರೋಪ ಹೊರಿಸಿದ್ದಾರೆ.

ಮಂಗಳೂರು: ತಾವು ಮುಂಬೈ ಪೊಲೀಸರು ಮತ್ತು ಭಯೋತ್ಪಾದನಾ ನಿಗ್ರಹ ದಳದ(ATS) ಅಧಿಕಾರಿಗಳು ಎಂದು ಪರಿಚಯಿಸಿಕೊಂಡ ಸೈಬರ್ ವಂಚಕರು, 'ಡಿಜಿಟಲ್ ಅರೆಸ್ಟ್' ಹೆಸರಿನಲ್ಲಿ ಪುತ್ತೂರು ತಾಲೂಕಿನ ವ್ಯಕ್ತಿಯೊಬ್ಬರಿಗೆ ಬರೋಬ್ಬರಿ 1.31 ಕೋಟಿ ರೂ. ವಂಚಿಸಿದ್ದಾರೆ.

ದೂರಿನ ಪ್ರಕಾರ, ಆರೋಪಿಗಳು ವಾಟ್ಸಾಪ್ ವಿಡಿಯೋ ಕರೆಗಳ ಮೂಲಕ ಪುತ್ತೂರಿನ ವ್ಯಕ್ತಿಯನ್ನು ಸಂಪರ್ಕಿಸಿ, ಪಹಲ್ಗಾಮ್ ಹತ್ಯಾಕಾಂಡದಲ್ಲಿ ಭಾಗಿಯಾದ ಭಯೋತ್ಪಾದಕರಿಗೆ ಹಣ ವರ್ಗಾಯಿಸಿದ್ದೀರಿ ಎಂದು ಸುಳ್ಳು ಆರೋಪ ಹೊರಿಸಿದ್ದಾರೆ. ಬಳಿಕ ಬಂಧಿಸುವುದಾಗಿ ಬೆದರಿಕೆ ಒಡ್ಡುವುದಲ್ಲದೆ, ನಿಮ್ಮ ಬ್ಯಾಂಕ್ ಖಾತೆಗಳು ತನಿಖೆಯಲ್ಲಿವೆ ಎಂದು ಹೇಳಿ ಭಯ ಹುಟ್ಟಿಸಿದ್ದಾರೆ.

ಬ್ಯಾಂಕ್ ಖಾತೆಗಳ ಪರಿಶೀಲನೆ ಮತ್ತು ಹಣದ ಮೂಲವನ್ನು ಖಚಿತಪಡಿಸಿಕೊಳ್ಳುವ ನೆಪದಲ್ಲಿ, ವಿವಿಧ ಬ್ಯಾಂಕ್ ಖಾತೆಗಳಿಗೆ ಆರ್‌ಟಿಜಿಎಸ್(RTGS) ಮೂಲಕ ಹಣ ವರ್ಗಾಯಿಸುವಂತೆ ವಂಚಕರು ಪುತ್ತೂರಿನ ವ್ಯಕ್ತಿಗೆ ಸೂಚಿಸಿದ್ದಾರೆ.

ಅವರ ಮಾತುಗಳನ್ನು ನಂಬಿದ ಸಂತ್ರಸ್ತ, ಸೆಪ್ಟೆಂಬರ್ 2 ಮತ್ತು ಅಕ್ಟೋಬರ್ 6, 2026 ರ ನಡುವೆ ಆರೋಪಿಗಳು ನೀಡಿದ ಖಾತೆಗಳಿಗೆ ಹಂತ ಹಂತವಾಗಿ ಒಟ್ಟು 1,31,50,000 ರೂ. ಹಣವನ್ನು ವರ್ಗಾಯಿಸಿದ್ದಾರೆ.

ನಂತರ, ತಾನು ಸೈಬರ್ ವಂಚನೆಗೆ ಒಳಗಾಗಿರುವುದನ್ನು ಅರಿತ ದೂರುದಾರರು, ಸೈಬರ್ ಸಹಾಯವಾಣಿ ಸಂಖ್ಯೆ 1930 ಅನ್ನು ಸಂಪರ್ಕಿಸಿ ದೂರು ದಾಖಲಿಸಿದ್ದಾರೆ.

ಈ ಸಂಬಂಧ ದಕ್ಷಿಣ ಕನ್ನಡ ಸೈಬರ್ ಅಪರಾಧ ಪೊಲೀಸ್ ಠಾಣೆಯು ಮಾಹಿತಿ ತಂತ್ರಜ್ಞಾನ ಕಾಯ್ದೆಯ ಸೆಕ್ಷನ್ 66(C) ಮತ್ತು 66(D) ಹಾಗೂ ಬಿಎನ್‌ಎಸ್ (BNS) ನ ಸೆಕ್ಷನ್ 126(2), 204, 308(6), 318(4), 319(2), 351 (ಇವುಗಳೊಂದಿಗೆ ಸೆಕ್ಷನ್ 3(5) ರನ್ವಯ) ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ನಡೆಯುತ್ತಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

SIR ಅಕ್ರಮಗಳ ವಿರುದ್ಧ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ರಾಹುಲ್ ಗಾಂಧಿ; TMC, RJD, ಮಿತ್ರಪಕ್ಷಗಳಿಂದಲೂ ಅರ್ಜಿ

ಸ್ಮಿತ್ ಮಚ್ಚರ್ ಬಗ್ಗೆ ಮೌನವೇಕೆ: ನನ್ನ ಆದರ್ಶ ಧ್ರುವ ರಾಠಿ ಅಲ್ಲ: ಶಿವಸೇನೆ UBT ತೊರೆದ ರಾಷ್ಟ್ರೀಯ ವಕ್ತಾರ ಆನಂದ್ ದುಬೆ!

'ದೇಶಕ್ಕೆ ಬೇಕಿರುವುದು ಸಾಕ್ಷ್ಯವೇ ಹೊರತು ಆರೋಪಗಳಲ್ಲ; ರಾಹುಲ್ ಗಾಂಧಿಯದ್ದು 'ಪೊಳ್ಳು' ಪ್ರತಿಭಟನೆ, ಆರೋಪ: ಬಿಜೆಪಿ ವಾಗ್ದಾಳಿ

ಗುಟ್ಟಾಗಿ ಮದುವೆಯಾಗಿದ್ದಾರಾ ನಟಿ ತ್ರಿಶಾ?: ಲಂಡನ್ ಸೆಲ್ಫಿಯಲ್ಲಿನ ಲಾಕೆಟ್ ನ ಗುಟ್ಟೇನು!

'ಬೆಂಗಳೂರಿನಲ್ಲಿ ಬ್ಲಿಂಕಿಟ್ ರೀತಿ ಕೆಲವೇ ನಿಮಿಷದಲ್ಲಿ ಗುಂಡಿ ಮುಚ್ಚುತ್ತೇವೆ': GBA ಮುಖ್ಯ ಆಯುಕ್ತ ಮಹೇಶ್ವರ ರಾವ್