ಸಿದ್ದರಾಮಯ್ಯ 
ರಾಜ್ಯ

ಸಿದ್ದರಾಮಯ್ಯ ವಿರುದ್ಧ ಸ್ಟಿಂಗ್ ಆಪರೇಶನ್: ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗೆ ಪೆನ್ ಡ್ರೈವ್ ಸಲ್ಲಿಕೆ; ನ್ಯಾಯಾಂಗ ತನಿಖೆಗೆ ಆಗ್ರಹ!

'KARNATAKA HONEYTRAP' ಯುಟ್ಯೂಬ್ ನಲ್ಲಿ ಪ್ರಸಾರವಾಗಿದೆ ಎನ್ನಲಾದ ವಿಡೀಯೋವನ್ನು ಡೌನ್ಲೋಡ್ ಮಾಡಿ ಪೆನ್ ಡ್ರೈವ್ ನಲ್ಲಿ ಹಾಕಿ ಅದರ ಸಂಪೂರ್ಣ ಸಾರಾಂಶವನ್ನು ಲಿಖಿತವಾಗಿ ದಾಖಲಿಸಿ ಪೆನ್ ಡ್ರೈವ್ ಸಮೇತ ಸಲ್ಲಿಸಲಾಗಿದೆ.

ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ತೀವ್ರ ಸಂಚಲನ ಸೃಷ್ಟಿಸಿರುವ ಸ್ಟಿಂಗ್ ಅಪರೇಷನ್, ಆಡಳಿತರೂಢ ಕಾಂಗ್ರೆಸ್ ಹಾಗೂ ಪ್ರತಿಪಕ್ಷಳಾದ ಜೆಡಿಎಸ್ ಮತ್ತು ಬಿಜೆಪಿ ನಡುವೆ ತೀವ್ರ ವಾಕ್ಸಮರಕ್ಕೆ ಕಾರಣವಾಗಿದೆ.

ಈ ಮಧ್ಯೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ ವಿರುದ್ಧದ ಅಪಪ್ರಚಾರದ ವಿಡಿಯೋ ಪ್ರಸಾರ ಮಾಡದಂತೆ ತಡೆಯಾಜ್ಞೆ ಕೋರಿ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿರುವುದು ಮತ್ತಷ್ಟು ಸಂಶಯಕ್ಕೆ ಈಡುಮಾಡಿದೆ.

ಈ ಎಲ್ಲಾ ಬೆಳವಣಿಗೆಗಳ ನಡುವೆ ಬೆಂಗಳೂರಿನ 'ನೈಜ ಹೋರಾಟಗಾರರ ವೇದಿಕೆ', ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧದ ಸ್ಟಿಂಗ್ ಆಪರೇಶನ್ ಕುರಿತು ನ್ಯಾಯಾಂಗ ಸುಪರ್ದಿಯಲ್ಲಿ ಸಮಗ್ರ ತನಿಖೆ ನಡೆಸಬೇಕು ಎಂದು ಒತ್ತಾಯಿಸಿ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗೆ ಪತ್ರ ಬರೆದಿದೆ.

ನೈಜ ಹೋರಾಟಗಾರರ ವೇದಿಕೆಯ ಅಧ್ಯಕ್ಷ ಎಚ್.ಎಂ.ವೆಂಕಟೇಶ್ ಅವರು ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗೆ ಪತ್ರ ಬರೆದಿದ್ದು, ಅದರಲ್ಲಿ 'KARNATAKA HONEY TRAP' ಎನ್ನುವ ಯೂಟ್ಯೂಬ್ ಚಾನಲ್ ನಲ್ಲಿ ಒಂದು ವಿಡೀಯೋ ಪ್ರಸಾರವಾಗಿದ್ದು, ಅದರಲ್ಲಿ 2011ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ದೌರ್ಜನ್ಯ ಎಸಗಲಾಗಿದೆ ಎಂಬ ಬಗ್ಗೆ ಮೂವರು ವ್ಯಕ್ತಿಗಳು ಚರ್ಚೆ ಮಾಡುತ್ತಿರುವುದು ಕಂಡುಬಂದಿದೆ.

ಆ ವಿಡಿಯೋದ ಸಂಪೂರ್ಣ ಸಾರಾಂಶದಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯರ ಹೆಸರು, ರಾಕೇಶ್ ಎಂಬವರು ಹೆಸರು ಉಲ್ಲೇಖವಾಗಿದೆ. ಅಲ್ಲದೆ ಇದರಲ್ಲಿ ದೊಡ್ಡ ದೊಡ್ಡ ರಾಜಕಾರಣಿಗಳು, ವಕೀಲರ ಹೆಸರುಗಳನ್ನು ಉಲ್ಲೇಖಿಸಲಾಗಿದೆ. ಹೀಗಾಗಿ ಈ ಬಗ್ಗೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾದರೆ ತನಿಖೆ ಸ್ವತಂತ್ರವಾಗಿ ನಡೆಯುವುದು ಅಸಾಧ್ಯ. ಕರ್ನಾಟಕ ಹೈಕೋರ್ಟ್ ಅಥವಾ ಸರ್ವೋಚ್ಚ ನ್ಯಾಯಾಲಯದ ಮೇಲ್ವಿಚಾರಣೆಯಲ್ಲಿ ನ್ಯಾಯಾಂಗ ತನಿಖೆ ನಡೆಯಬೇಕು ಎಂದು ಎಚ್.ಎಂ.ವೆಂಕಟೇಶ್ ಮನವಿ ಮಾಡಿದ್ದಾರೆ.

ಮನವಿ ಪತ್ರದ ಜೊತೆಗೆ 'KARNATAKA HONEYTRAP' ಯುಟ್ಯೂಬ್ ನಲ್ಲಿ ಪ್ರಸಾರವಾಗಿದೆ ಎನ್ನಲಾದ ವಿಡೀಯೋವನ್ನು ಡೌನ್ಲೋಡ್ ಮಾಡಿ ಪೆನ್ ಡ್ರೈವ್ ನಲ್ಲಿ ಹಾಕಿ ಅದರ ಸಂಪೂರ್ಣ ಸಾರಾಂಶವನ್ನು ಲಿಖಿತವಾಗಿ ದಾಖಲಿಸಿ ಪೆನ್ ಡ್ರೈವ್ ಸಮೇತ ಸಲ್ಲಿಸಲಾಗಿದೆ.

ಈ ಬಗ್ಗೆ ಬಾಲ ನ್ಯಾಯ ಮಂಡಳಿ ಹಾಗೂ ಕರ್ನಾಟಕ ಕಾನೂನು ಸೇವಾ ಪ್ರಾಧಿಕಾರದ ಅಧ್ಯಕ್ಷರಿಗೂ ನೈಜ ಹೋರಾಟಗಾರರ ವೇದಿಕೆ ಮನವಿ ಸಲ್ಲಿಸಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಹಲವು ಕುಟುಂಬಗಳ ಹೆಣ್ಮಕ್ಕಳ ಮರ್ಯಾದೆ ಕಳೆದ ಪುಣ್ಯಾತ್ಮ ಡಿಕೆಶಿ; ಪ್ರಜ್ವಲ್​​ ಕೇಸ್​ ಹಿಂದಿದ್ದವರಿಂದ ಮಾಜಿ ಸಿಎಂ ಸ್ಟಿಂಗ್​​ ಆಪರೇಷನ್: HDK ಹೊಸ ಬಾಂಬ್

Jantar Mantar ಬಳಿ ಭಾರೀ ಹೈಡ್ರಾಮಾ: ಬ್ಯಾರಿಕೇಡ್ ದಾಟಿದ CJP ನಾಯಕರು ಪೊಲೀಸ್ ವಶಕ್ಕೆ; ಪ್ರತಿರೋಧ ನಿಷೇಧ ಸಾಧ್ಯವಿಲ್ಲ-ಕೇಂದ್ರದ ವಿರುದ್ಧ ದೀಪ್ಕೆ ಆಕ್ರೋಶ

Batman masks, offline maps: ನಟಿ ರಿಚಾ ಚಡ್ಡಾ ಐಡಿಯಾ ಫಾಲೋ ಮಾಡ್ತಿರುವ ಯುವಕರು; Facial recognition camera ಫುಲ್ ಕನ್‌ಫ್ಯೂಸ್, ದೆಹಲಿ ಪೊಲೀಸರು ತಬ್ಬಿಬ್ಬು..!

ಪಂಜಾಬ್: ಫೇಸ್‌ಬುಕ್ ಲೈವ್‌ನಲ್ಲಿರುವಾಗಲೇ ಮಾದಕವಸ್ತು ವಿರೋಧಿ ಹೋರಾಟಗಾರ ಪರ್ವಿಂದರ್ ಸಿಂಗ್ ಜೋತಾ ಗುಂಡೇಟಿಗೆ ಬಲಿ!

‘ಪ್ರತಿಭಟನೆ ನಮ್ಮ ಹಕ್ಕು, ಬಂಧನಗಳಿಂದ ಹೋರಾಟ ಹತ್ತಿಕ್ಕಲು ಸಾಧ್ಯವಿಲ್ಲ’: ದೇಶಾದ್ಯಂತ ಚಳವಳಿ ವಿಸ್ತರಿಸಲು Cockroach Janta Party ಪಣ (INTERVIEW)