ಬೆಂಗಳೂರು: ಪೀಣ್ಯ ಕೈಗಾರಿಕಾ ಪ್ರದೇಶದಲ್ಲಿರುವ ಕರ್ಲಾನ್ ಹಾಸಿಗೆ ತಯಾರಿಕಾ ಘಟಕದಲ್ಲಿ ಅಗ್ನಿ ಅವಘಡ ಸಂಭವಿಸಿದೆ. ಹಾಸಿಗೆ ತಯಾರಿಸಲು ಸಂಗ್ರಹಿಸಿಟ್ಟಿದ್ದ ಕಚ್ಚಾ ವಸ್ತುಗಳ ಶೆಡ್‌ಗೆ ಇಂದು ಮಧ್ಯಾಹ್ನ 3 ಗಂಟೆ ಸುಮಾರಿಗೆ ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಹೊತ್ತುಕೊಂಡಿತ್ತು. ಸ್ಥಳೀಯರು ನೀಡಿದ ಮಾಹಿತಿ ಆಧರಿಸಿ ಸ್ಥಳಕ್ಕೆ ಧಾವಿಸಿದ ಎರಡು ಅಗ್ನಿಶಾಮಕ ವಾಹನಗಳು ಬೆಂಕಿ ನಂದಿಸುವ ಕಾರ್ಯಾಚರಣೆ ನಡೆಸಿವೆ. ಘಟನೆಯಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.