ಹೆದ್ದಾರಿ ತಡೆದು ರೈತರ ಪ್ರತಿಭಟನೆ  
ರಾಜ್ಯ

ಕಬ್ಬು ಬೆಳೆಗಾರರಿಂದ ಹೆದ್ದಾರಿ ತಡೆ; ಕಬ್ಬಿಗೆ ಹೆಚ್ಚಿನ ಬೆಲೆ ನೀಡಲು ಆಗ್ರಹ; Video

ಬೆಳಗಾವಿ, ಬಾಗಲಕೋಟೆ, ವಿಜಯಪುರ ಮತ್ತು ಧಾರವಾಡ ಜಿಲ್ಲೆಗಳಲ್ಲಿ ಪ್ರತಿಭಟನೆಗಳು ನಡೆದಿದ್ದು, ಪುಣೆ-ಬೆಂಗಳೂರು ಮಾರ್ಗ ಹಾಗೂ ನಿಡಗುಂದಿ ಸಮೀಪದ ರಾಷ್ಟ್ರೀಯ ಹೆದ್ದಾರಿ 50 ಸೇರಿದಂತೆ ಪ್ರಮುಖ ಹೆದ್ದಾರಿಗಳಲ್ಲಿ ಸಂಚಾರ ಅಸ್ತವ್ಯಸ್ತಗೊಂಡಿತು.

ಬೆಂಗಳೂರು: ಕಬ್ಬಿಗೆ ಹೆಚ್ಚಿನ ಬೆಲೆ ನೀಡಬೇಕು ಹಾಗೂ ಸ್ವಾಮಿನಾಥನ್ ಆಯೋಗದ ಶಿಫಾರಸುಗಳನ್ನು ಜಾರಿಗೊಳಿಸಬೇಕು ಎಂದು ಆಗ್ರಹಿಸಿ ರಾಜ್ಯದ ಹಲವು ಕಡೆಗಳಲ್ಲಿ ಇಂದು ಮಂಗಳವಾರ ಕಬ್ಬು ಬೆಳೆಗಾರರು ರಾಷ್ಟ್ರೀಯ ಹೆದ್ದಾರಿಗಳನ್ನು ತಡೆದು ಪ್ರತಿಭಟನೆ ನಡೆಸಿದರು.

ಬೆಳಗಾವಿ, ಬಾಗಲಕೋಟೆ, ವಿಜಯಪುರ ಮತ್ತು ಧಾರವಾಡ ಜಿಲ್ಲೆಗಳಲ್ಲಿ ಪ್ರತಿಭಟನೆಗಳು ನಡೆದಿದ್ದು, ಪುಣೆ-ಬೆಂಗಳೂರು ಮಾರ್ಗ ಹಾಗೂ ನಿಡಗುಂದಿ ಸಮೀಪದ ರಾಷ್ಟ್ರೀಯ ಹೆದ್ದಾರಿ 50 ಸೇರಿದಂತೆ ಪ್ರಮುಖ ಹೆದ್ದಾರಿಗಳಲ್ಲಿ ಸಂಚಾರ ಅಸ್ತವ್ಯಸ್ತಗೊಂಡಿತು.

ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲ್ಲೂಕಿನ ಹತ್ತರಗಿ ಟೋಲ್ ಪ್ಲಾಜಾ ಬಳಿ ರೈತರು ಪುಣೆ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಎರಡೂ ಬದಿಗಳಲ್ಲಿ ವಾಹನ ಸಂಚಾರ ತಡೆದರು. ಜಿಲ್ಲೆಯ ಕುಗನೊಳ್ಳಿ ಚೆಕ್‌ಪೋಸ್ಟ್ ಮತ್ತು ಹಿರೇಬಾಗೇವಾಡಿ ಟೋಲ್ ಪ್ಲಾಜಾ ಬಳಿಯೂ ಪ್ರತಿಭಟನೆಗಳು ನಡೆದವು.

ತಮ್ಮ ಬೇಡಿಕೆಗಳು ಈಡೇರುವವರೆಗೂ ಹೋರಾಟ ಮುಂದುವರಿಸುವುದಾಗಿ ರೈತರು ತಿಳಿಸಿದರು. ಕಬ್ಬಿನ ಬೆಲೆ ನಿಗದಿ ಕುರಿತು ನಿನ್ನೆ ದೆಹಲಿಯಲ್ಲಿ ಕೇಂದ್ರ ಸಚಿವರೊಂದಿಗೆ ನಡೆದ ಮಾತುಕತೆಯಲ್ಲಿ ಯಾವುದೇ ತಕ್ಷಣದ ನಿರ್ಧಾರ ಕೈಗೊಳ್ಳಲಾಗಿಲ್ಲ.

ಕನಿಷ್ಠ ಬೆಂಬಲ ಬೆಲೆ (MSP) ಹೆಚ್ಚಳ, ನ್ಯಾಯಸಮ್ಮತ ಮತ್ತು ಲಾಭದಾಯಕ ಬೆಲೆ (FRP) ನಿಗದಿ ಹಾಗೂ ಸ್ವಾಮಿನಾಥನ್ ಆಯೋಗದ ಶಿಫಾರಸುಗಳ ಜಾರಿಗೆ ರೈತರು ಒತ್ತಾಯಿಸುತ್ತಿದ್ದಾರೆ.

ರಾಷ್ಟ್ರೀಯ ರೈತರ ಆಯೋಗದ (NCF) ವರದಿ ಎಂದೂ ಕರೆಯಲಾಗುವ ಸ್ವಾಮಿನಾಥನ್ ವರದಿಯು ಭಾರತೀಯ ಕೃಷಿಯಲ್ಲಿ ರಚನಾತ್ಮಕ ಸುಧಾರಣೆಗಳನ್ನು ತರಲು ರೂಪಿಸಲಾದ ಸಮಗ್ರ ನೀಲನಕ್ಷೆಯಾಗಿದೆ. ಕೃಷಿ ವಿಜ್ಞಾನಿ ಪ್ರೊ. ಎಂ.ಎಸ್. ಸ್ವಾಮಿನಾಥನ್ ಅವರ ಅಧ್ಯಕ್ಷತೆಯಲ್ಲಿ 2004ರಲ್ಲಿ ಈ ಆಯೋಗವನ್ನು ರಚಿಸಲಾಗಿತ್ತು. ರಾಷ್ಟ್ರೀಯ ಹೆದ್ದಾರಿಗಳಲ್ಲಿ ರೈತ ಮುಖಂಡರ ನೇತೃತ್ವದಲ್ಲಿ ಪ್ರತಿಭಟನೆ ನಡೆಯಿತು. ಕೆಲವರು ವಾಹನಗಳ ಸಂಚಾರ ತಡೆಯಲು ರಸ್ತೆಯಲ್ಲೇ ಮಲಗಿದರು.

ಬಾಗಲಕೋಟೆ ಜಿಲ್ಲೆಯಲ್ಲಿ ಗೋವಿಂದ ಪಟ್ಟಿಯ ಸಮೀಪ ರೈತರು ರಾಯಚೂರು-ಸೋಲಾಪುರ ರಾಷ್ಟ್ರೀಯ ಹೆದ್ದಾರಿಯನ್ನು ತಡೆದರು. ಇದರಿಂದ ಟ್ರಕ್‌ಗಳು ಸೇರಿದಂತೆ ಹಲವು ವಾಹನಗಳ ಸಂಚಾರ ಸ್ಥಗಿತಗೊಂಡಿತು.

ಹಸಿರು ಸೇನೆಗೆ ಸೇರಿದ ರೈತರು ನಿಡಗುಂದಿ ಪಟ್ಟಣದ ಹೊರವಲಯದಲ್ಲಿ ರಾಷ್ಟ್ರೀಯ ಹೆದ್ದಾರಿ 50ನ್ನು ತಡೆದು, ವಿಜಯಪುರ ಮತ್ತು ಬೆಂಗಳೂರು ನಡುವಿನ ಸಂಚಾರಕ್ಕೆ ಅಡ್ಡಿಪಡಿಸಿದರು.

ಪೊಲೀಸರು ಪ್ರತಿಭಟನಾಕಾರರೊಂದಿಗೆ ಮಾತುಕತೆ ನಡೆಸಿದರೂ, ಬೇಡಿಕೆಗಳು ಈಡೇರುವವರೆಗೂ ರಸ್ತೆ ತಡೆ ಮುಂದುವರಿಸುವುದಾಗಿ ರೈತರು ಪಟ್ಟು ಹಿಡಿದರು. ಧಾರವಾಡ ಜಿಲ್ಲೆಯ ಪಳ್ಳಿಕೊಪ್ಪ ಬಳಿ ಹೆದ್ದಾರಿ ತಡೆ ನಡೆಸಲು ರೈತ ಸಂಘಟನೆಗಳು ಕರೆ ನೀಡಿದ್ದ ಹಿನ್ನೆಲೆಯಲ್ಲಿ, ಮುನ್ನೆಚ್ಚರಿಕೆ ಕ್ರಮವಾಗಿ ರಾಜ್ಯ ಮೀಸಲು ಪೊಲೀಸ್ ಸಿಬ್ಬಂದಿ ಸೇರಿದಂತೆ ಹೆಚ್ಚುವರಿ ಪೊಲೀಸರನ್ನು ನಿಯೋಜಿಸಲಾಗಿತ್ತು.

ರೈತರ ಹೋರಾಟ ಹಿಂಪಡೆಯಲು ಪ್ರಲ್ಹಾದ್ ಜೋಶಿ ಮನವಿ

ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಅವರು ನಿನ್ನೆ ರೈತರು ಪ್ರತಿಭಟನೆ ಹಿಂಪಡೆಯುವಂತೆ ಮನವಿ ಮಾಡಿದ್ದು, ಅವರ ಸಮಸ್ಯೆಗಳನ್ನು ಕೇಂದ್ರ ಸರ್ಕಾರ ಪರಿಹರಿಸಲಿದೆ ಎಂದು ಭರವಸೆ ನೀಡಿದರು.

ರೈತ ಮುಖಂಡರೊಂದಿಗಿನ ಸಭೆಯ ಬಳಿಕ ಮಾತನಾಡಿದ ಅವರು, ಭಾರತ ಸರ್ಕಾರ, ಮೋದಿ ಸರ್ಕಾರ ನಿಮ್ಮೊಂದಿಗಿದೆ. ಈ ಸಮಸ್ಯೆಯನ್ನು ಒಂದೆರಡು ಸಚಿವಾಲಯಗಳು ಮಾತ್ರ ಪರಿಹರಿಸಲು ಸಾಧ್ಯವಿಲ್ಲ. ಹಲವು ಸಚಿವಾಲಯಗಳು ಇದರಲ್ಲಿ ಭಾಗಿಯಾಗಿವೆ. ರಾಜ್ಯ ಸರ್ಕಾರಗಳಿಗೂ, ಅಂದರೆ ಎಲ್ಲ ರಾಜ್ಯ ಸರ್ಕಾರಗಳಿಗೂ ಇದರಲ್ಲಿ ಪಾತ್ರವಿದೆ ಎಂದು ಹೇಳಿದರು.

ತಾವು ಮತ್ತು ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಅವರು ರೈತರ ಅಹವಾಲುಗಳನ್ನು ಆಲಿಸಿದ್ದೇವೆ. ಸಮಸ್ಯೆಗಳನ್ನು ಪರಿಶೀಲಿಸಲು ಸಮಿತಿಯೊಂದನ್ನು ರಚಿಸಲಾಗುವುದು ಎಂದು ತಿಳಿಸಿದರು.

ಬೆಲೆ ನಿಗದಿಪಡಿಸುವ ಮೊದಲು ನಾವು ಅಧಿಕೃತವಾಗಿ ರಾಜ್ಯ ಸರ್ಕಾರಗಳಿಂದ ಮಾಹಿತಿ ಪಡೆಯುತ್ತೇವೆ. ಹಲವು ಅಂಶಗಳು ಇದರಲ್ಲಿ ಒಳಗೊಂಡಿರುವುದರಿಂದ ಯಾರೂ ಆತಂಕಕ್ಕೊಳಗಾಗುವ ಅಗತ್ಯವಿಲ್ಲ ಎಂದು ಹೇಳಿದ ಅವರು, ಬೀದಿಗಿಳಿದು ಪ್ರತಿಭಟನೆ ನಡೆಸದಂತೆ ರೈತರಲ್ಲಿ ಮನವಿ ಮಾಡಿದರು.

ಇತರ ರಾಜ್ಯಗಳೊಂದಿಗೆ ಸಮಾಲೋಚನೆ ಅಗತ್ಯ

ನಿನ್ನೆ ರಾತ್ರಿ ಪ್ರಲ್ಹಾದ್ ಜೋಶಿ ಅವರೊಂದಿಗೆ ಚರ್ಚೆ ನಡೆಸಿದ ಕರ್ನಾಟಕದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಈ ವಿಚಾರದಲ್ಲಿ ಇತರ ರಾಜ್ಯಗಳೊಂದಿಗೂ ಸಮಾಲೋಚನೆ ನಡೆಸಬೇಕಿದೆ ಎಂದು ಹೇಳಿದರು.

ಕಬ್ಬಿಗೆ ಹೆಚ್ಚಿನ ಬೆಲೆ ನೀಡಬೇಕೆಂದು ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ. ಈ ವಿಚಾರದಲ್ಲಿ ಏನು ಮಾಡಬೇಕು, ರಾಜ್ಯದ ರೈತರ ಪರಿಸ್ಥಿತಿ ಮತ್ತು ಕಾರ್ಖಾನೆಗಳ ಸ್ಥಿತಿ ಹೇಗಿದೆ ಎಂಬುದರ ಕುರಿತು ಚರ್ಚಿಸಿದ್ದೇವೆ ಎಂದು ಸುದ್ದಿಗಾರರಿಗೆ ತಿಳಿಸಿದರು.

ಇದು ನಮ್ಮ ರಾಜ್ಯಕ್ಕೆ ಮಾತ್ರ ಸೀಮಿತವಾದ ಸಮಸ್ಯೆಯಲ್ಲ. ಇತರ ರಾಜ್ಯಗಳೊಂದಿಗೂ ಸಮಾಲೋಚನೆ ನಡೆಸಬೇಕಿದೆ. ಎಲ್ಲರೊಂದಿಗೆ ಮಾತನಾಡಿ ನಿರ್ಧಾರಕ್ಕೆ ಬರುವುದಾಗಿ ಅವರು ಹೇಳಿದ್ದಾರೆ ಎಂದು ಡಿ ಕೆ ಶಿವಕುಮಾರ್ ತಿಳಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಹಲವು ಕುಟುಂಬಗಳ ಹೆಣ್ಮಕ್ಕಳ ಮರ್ಯಾದೆ ಕಳೆದ ಪುಣ್ಯಾತ್ಮ ಡಿಕೆಶಿ; ಪ್ರಜ್ವಲ್​​ ಕೇಸ್​ ಹಿಂದಿದ್ದವರಿಂದ ಮಾಜಿ ಸಿಎಂ ಸ್ಟಿಂಗ್​​ ಆಪರೇಷನ್: HDK ಹೊಸ ಬಾಂಬ್

Jantar Mantar ಬಳಿ ಭಾರೀ ಹೈಡ್ರಾಮಾ: ಬ್ಯಾರಿಕೇಡ್ ದಾಟಿದ CJP ನಾಯಕರು ಪೊಲೀಸ್ ವಶಕ್ಕೆ; ಪ್ರತಿರೋಧ ನಿಷೇಧ ಸಾಧ್ಯವಿಲ್ಲ-ಕೇಂದ್ರದ ವಿರುದ್ಧ ದೀಪ್ಕೆ ಆಕ್ರೋಶ

Batman masks, offline maps: ನಟಿ ರಿಚಾ ಚಡ್ಡಾ ಐಡಿಯಾ ಫಾಲೋ ಮಾಡ್ತಿರುವ ಯುವಕರು; Facial recognition camera ಫುಲ್ ಕನ್‌ಫ್ಯೂಸ್, ದೆಹಲಿ ಪೊಲೀಸರು ತಬ್ಬಿಬ್ಬು..!

ಪಂಜಾಬ್: ಫೇಸ್‌ಬುಕ್ ಲೈವ್‌ನಲ್ಲಿರುವಾಗಲೇ ಮಾದಕವಸ್ತು ವಿರೋಧಿ ಹೋರಾಟಗಾರ ಪರ್ವಿಂದರ್ ಸಿಂಗ್ ಜೋತಾ ಗುಂಡೇಟಿಗೆ ಬಲಿ!

‘ಪ್ರತಿಭಟನೆ ನಮ್ಮ ಹಕ್ಕು, ಬಂಧನಗಳಿಂದ ಹೋರಾಟ ಹತ್ತಿಕ್ಕಲು ಸಾಧ್ಯವಿಲ್ಲ’: ದೇಶಾದ್ಯಂತ ಚಳವಳಿ ವಿಸ್ತರಿಸಲು Cockroach Janta Party ಪಣ (INTERVIEW)