ಶಿವಕುಮಾರ್ 
ರಾಜ್ಯ

ದೇವನಹಳ್ಳಿ: ಗ್ಯಾಸ್ ಲಾರಿಗೆ ರೇಂಜ್ ರೋವರ್ ಡಿಕ್ಕಿ; ಮಾಲೂರು ಬಿಜೆಪಿ ಮುಖಂಡ ಶಿವಕುಮಾರ್ ಸಾವು!

ಡಿಕ್ಕಿಯ ರಭಸಕ್ಕೆ ರೇಂಜ್ ರೋವರ್ ಕಾರಿನ ಮುಂಭಾಗ ಸಂಪೂರ್ಣವಾಗಿ ನಜ್ಜುಗುಜ್ಜಾಗಿದೆ. ಪರಿಣಾಮ, ಗಂಭೀರವಾಗಿ ಗಾಯಗೊಂಡಿದ್ದ ಶಿವಕುಮಾರ್ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ದೇವನಹಳ್ಳಿ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಬಳಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಮಾಲೂರು ಬಿಜೆಪಿ ಮುಖಂಡ ಹಾಗೂ ಬಳಕಾಲೂರು ಟಿಕೆಟ್ ಆಕಾಂಕ್ಷಿಯಾಗಿದ್ದ ಶಿವಕುಮಾರ್ (50) ಮೃತಪಟ್ಟಿದ್ದಾರೆ.

ಚಿತ್ರದುರ್ಗದಿಂದ ಮಾಲೂರಿಗೆ ರೇಂಜ್ ರೋವರ್ ಕಾರಿನಲ್ಲಿ ತೆರಳುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದೆ. ಹೊಸಕೋಟೆ-ದಾಬಸ್​ಪೇಟೆಯ ರಿಂಗ್ ರಸ್ತೆಯ ಹೆದ್ದಾರಿಯಲ್ಲಿ ಓವರ್‌ಟೇಕ್ ಮಾಡುವ ಭರದಲ್ಲಿ, ಮುಂದೆ ಸಾಗುತ್ತಿದ್ದ ಗ್ಯಾಸ್ ಲಾರಿಗೆ ರೇಂಜ್ ರೋವರ್ ಕಾರು ಅತಿ ವೇಗವಾಗಿ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ.

ಡಿಕ್ಕಿಯ ರಭಸಕ್ಕೆ ರೇಂಜ್ ರೋವರ್ ಕಾರಿನ ಮುಂಭಾಗ ಸಂಪೂರ್ಣವಾಗಿ ನಜ್ಜುಗುಜ್ಜಾಗಿದೆ. ಪರಿಣಾಮ, ಗಂಭೀರವಾಗಿ ಗಾಯಗೊಂಡಿದ್ದ ಶಿವಕುಮಾರ್ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಕಾರಿನಲ್ಲಿದ್ದ ಇತರ ಮೂವರು ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಕೂಡಲೇ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಸದ್ಯ ಗಾಯಾಳುಗಳಿಗೆ ಚಿಕಿತ್ಸೆ ನೀಡಲಾಗುತ್ತಿದೆ.

50 ವರ್ಷದ ಶಿವಕುಮಾರ್ ಅವರು ಮುಂಬರುವ ಚುನಾವಣೆಯಲ್ಲಿ ಮೊಳಕಾಲ್ಮೂರು ಕ್ಷೇತ್ರದಿಂದ ಟಿಕೆಟ್ ಪಡೆಯುವ ಆಕಾಂಕ್ಷೆ ಹೊಂದಿದ್ದರು ಎಂದು ವರದಿಯಾಗಿದೆ. ಘಟನೆಗೆ ಸಂಬಂಧಿಸಿದಂತೆ ದೇವನಹಳ್ಳಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಅಪಘಾತಕ್ಕೆ ನಿಖರವಾದ ಕಾರಣವೇನು ಎಂಬುದರ ಕುರಿತು ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಿಹಾರದ ವೈಶಾಲಿಯಲ್ಲಿ ದೋಣಿ ಮುಳುಗಿ ಕನಿಷ್ಠ 13 ಮಂದಿ ಸಾವು; ಪ್ರಧಾನಿ ಮೋದಿ ಸಂತಾಪ, ಪರಿಹಾರ ಘೋಷಣೆ; Video

'ಜಂತರ್ ಮಂತರ್‌'ಗೆ ಅಕ್ರಮ ಪ್ರವೇಶ ಆರೋಪ: ಮುನ್ನೆಚ್ಚರಿಕೆ ಕ್ರಮವಾಗಿ CJPಯ ರಂಕಾ, ದಾಸ್, ಶಿಂಧೆ ಬಂಧನ

‘ರಾಹುಲ್ ಗಾಂಧಿ ನನ್ನನ್ನು ಪಕ್ಕಕ್ಕೆ ತಳ್ಳಿಲ್ಲ,ಕಾಳಜಿ ವಹಿಸಿದರು, ಬಿಜೆಪಿಯವರಿಗೆ ನನ್ಮೇಲೆ ತುಂಬಾ ಪ್ರೀತಿ’: CM ಡಿ.ಕೆ. ಶಿವಕುಮಾರ್; Video

ಒಂದು ಕಾಣದ ಕಣದ ಹುಡುಕಾಟ (ವಿಜ್ಞಾನ ವಿಶೇಷ)

'ಜನರು ಬಿಜೆಪಿ, ಮೋದಿ ಅವರೊಂದಿಗಿದ್ದಾರೆ': 2029ರ ಚುನಾವಣೆಯಲ್ಲಿ ಮತ್ತೊಂದು 'ಭಾರಿ ಸೋಲಿಗೆ' ಸಿದ್ಧರಾಗಿ: ರಾಹುಲ್ ಗಾಂಧಿ ವಿರುದ್ಧ ಅಮಿತ್ ಶಾ ವಾಗ್ದಾಳಿ