ಡಿಜಿಪಿ ಅಲೋಕ್  
ರಾಜ್ಯ

ಸುಪ್ರೀಂಕೋರ್ಟ್​ಗೆ ನನ್ನ ಬಗ್ಗೆ ತಪ್ಪು ಮಾಹಿತಿ: ಸರ್ಕಾರದ ವಿರುದ್ಧ ಡಿಜಿಪಿ ಅಲೋಕ್ ಕುಮಾರ್ ಅಸಮಾಧಾನ!

ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ಅಕ್ರಮಗಳ ತನಿಖೆಗಾಗಿ ಕರ್ನಾಟಕ ಹೈಕೋರ್ಟ್ ತಮ್ಮನ್ನು ಎಸ್‌ಐಟಿ (SIT) ಮುಖ್ಯಸ್ಥರನ್ನಾಗಿ ನೇಮಿಸಿದ್ದನ್ನು ರಾಜ್ಯ ಸರ್ಕಾರ ವಿರೋಧಿಸಿದ ರೀತಿಯ ಬಗ್ಗೆ ಕರ್ನಾಟಕ ಡಿಜಿಪಿ (ಜೈಲು) ಅಲೋಕ್ ಕುಮಾರ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ಅಕ್ರಮಗಳ ತನಿಖೆಗಾಗಿ ಕರ್ನಾಟಕ ಹೈಕೋರ್ಟ್ ತಮ್ಮನ್ನು ಎಸ್‌ಐಟಿ (SIT) ಮುಖ್ಯಸ್ಥರನ್ನಾಗಿ ನೇಮಿಸಿದ್ದನ್ನು ರಾಜ್ಯ ಸರ್ಕಾರ ಆಕ್ಷೇಪಿಸಿದ ರೀತಿಯ ಬಗ್ಗೆ ಕರ್ನಾಟಕ ಡಿಜಿಪಿ (ಜೈಲು) ಅಲೋಕ್ ಕುಮಾರ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಅಲೋಕ್ ಕುಮಾರ್ ನೇತೃತ್ವದ ಎಸ್‌ಐಟಿ ತಂಡ ರಚನೆಗೆ ಕರ್ನಾಟಕ ಹೈಕೋರ್ಟ್‌ ನೀಡಿದ್ದ ಆದೇಶವನ್ನು ಪ್ರಶ್ನಿಸಿ ರಾಜ್ಯ ಸರ್ಕಾರ ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿತ್ತು. ಹೀಗಾಗಿ ಅಕ್ಟೋಬರ್ 1ರಂದು ಸುಪ್ರೀಂ ಕೋರ್ಟ್ ವಿಚಾರಣೆ ವೇಳೆ ಸರ್ಕಾರ ಪರ ವಾದ ಮಂಡಿಸಿದ್ದ ಕಪಿಲ್ ಸಿಬಲ್, ಅಲೋಕ್ ಕುಮಾರ್ ಅವರ ವಿರುದ್ಧ ಸಿಬಿಐ ತನಿಖೆ ಬಾಕಿ ಇದೆ ಎಂದು ವಾದಿಸಿದ್ದರು. ಈ ವಾದವನ್ನು ಖಂಡಿಸಿ ಅಲೋಕ್ ಕುಮಾರ್ ಅವರು ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಪತ್ರ ಬರೆದಿದ್ದಾರೆ.

ತಮ್ಮ ವಿರುದ್ಧ ಸಿಬಿಐ ತನಿಖೆ ಬಾಕಿಯಿದೆ ಎಂದು ಸುಪ್ರೀಂ ಕೋರ್ಟ್‌ಗೆ ಸರ್ಕಾರ ಸಲ್ಲಿಸಿದ್ದ ಮಾಹಿತಿಯನ್ನು ತಿದ್ದುಪಡಿ ಮಾಡುವಂತೆ ಅಕ್ಟೋಬರ್ 5ರಂದು ಕರ್ನಾಟಕ ಮುಖ್ಯಕಾರ್ಯದರ್ಶಿ ಶಾಲಿನಿ ರಜನೀಶ್ ಅವರಿಗೆ ಪತ್ರ ಬರೆದಿದ್ದರು. ಈ ಹೇಳಿಕೆಯು ವಾಸ್ತವಿಕವಾಗಿ ತಪ್ಪಾಗಿದೆ ಎಂದು ಕುಮಾರ್ ಪ್ರತಿಪಾದಿಸಿದ್ದರು. ಸರ್ಕಾರ ಸಲ್ಲಿಸಿದ ಈ ಮಾಹಿತಿಯು ಅನಗತ್ಯವಾಗಿ ತಮ್ಮ ಹೆಸರನ್ನು ವಿವಾದಕ್ಕೆ ಎಳೆತಂದಿದೆ. ತಮ್ಮ ವೃತ್ತಿಪರ ಪ್ರಾಮಾಣಿಕತೆ ಹಾಗೂ ಘನತೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ ಎಂದು ಅಲೋಕ್ ಕುಮಾರ್ ಹೇಳಿದ್ದಾರೆ.

ಅಲೋಕ್ ಕುಮಾರ್ ಬೆಂಗಳೂರು ಪೊಲೀಸ್ ಆಯುಕ್ತರಾಗಿದ್ದ ಅವಧಿಯಲ್ಲಿ ನಡೆದಿದೆ ಎನ್ನಲಾದ ಫೋನ್ ಕದ್ದಾಲಿಕೆ (telephone-tapping) ಆರೋಪಗಳ ಕುರಿತು ಸಿಬಿಐ ತನಿಖೆ ಬಾಕಿಯಿದೆ ಎಂಬ ಕಾರಣವೊಡ್ಡಿ ಎಸ್‌ಐಟಿ ನೇತೃತ್ವದಿಂದ ತಮ್ಮ ನೇಮಕವನ್ನು ರಾಜ್ಯ ಸರ್ಕಾರ ವಿರೋಧಿಸಿತ್ತು.

ಫೋನ್ ಕದ್ದಾಲಿಕೆ ಆರೋಪಕ್ಕೆ ಸಂಬಂಧಿಸಿದಂತೆ ಸಿಬಿಐ ಈಗಾಗಲೇ 'ಬಿ-ರಿಪೋರ್ಟ್' (Closure Report) ಸಲ್ಲಿಸಿದ್ದು, ಅದನ್ನು 2024ರ ಫೆಬ್ರುವರಿ 13ರಂದು ಸಿಬಿಐ ವಿಶೇಷ ನ್ಯಾಯಾಲಯ ಪುರಸ್ಕರಿಸಿದೆ. ಅಷ್ಟೇ ಅಲ್ಲದೆ, ಈ ವಿಷಯದಲ್ಲಿ ಇಲಾಖಾ ವಿಚಾರಣೆ ನಡೆಸುವ ಅಗತ್ಯವಿಲ್ಲವೆಂದು 2023ರಲ್ಲಿಯೇ ಅಂದಿನ ಮುಖ್ಯಮಂತ್ರಿಗಳು ಸ್ಪಷ್ಟ ಆದೇಶ ಹೊರಡಿಸಿದ್ದರು. ಅಲ್ಲದೆ ಈ ಹಿಂದೆ ಈ ಪ್ರಕರಣದಲ್ಲಿ ಹೊರಡಿಸಲಾಗಿದ್ದ ಶೋಕಾಸ್ ನೋಟಿಸ್ ಮತ್ತು ಚಾರ್ಜ್‌ಶೀಟ್‌ನ್ನು ಕೇಂದ್ರೀಯ ಆಡಳಿತಾತ್ಮಕ ಮಂಡಳಿ (CAT) ರದ್ದುಗೊಳಿಸಿದ್ದು, ಆ ಆದೇಶಕ್ಕೆ ಹೈಕೋರ್ಟ್ ಕೂಡ ತಡೆ ನೀಡಿಲ್ಲ ಎಂಬುದನ್ನು ಪತ್ರದಲ್ಲಿ ಅಲೋಕ್ ಕುಮಾರ್ ಉಲ್ಲೇಖಿಸಿದ್ದಾರೆ.

ಸುಪ್ರೀಂ ಕೋರ್ಟ್ ಮುಂದೆ ಪ್ರಸ್ತಾಪಿಸಲಾದ ವಿಷಯಕ್ಕೆ ಸಂಬಂಧಿಸಿದಂತೆ, ಇಂದು ನನ್ನ ವಿರುದ್ಧ ಯಾವುದೇ ಸಿಬಿಐ (CBI) ತನಿಖೆ ಅಥವಾ ವಿಚಾರಣೆ, ಅಥವಾ ಇಲಾಖಾ ವಿಚಾರಣೆ ಅಥವಾ ಯಾವುದೇ ಪ್ರಕ್ರಿಯೆ ಬಾಕಿಯಿಲ್ಲ. ಹೀಗಾಗಿ ಅಫಿಡವಿಟ್‌ನಲ್ಲಿ ತಮ್ಮ ಕುರಿತು ಯಾವುದೇ ತಪ್ಪಾದ ಅಥವಾ ಪರಿಶೀಲಿಸದ ಆರೋಪಗಳನ್ನು ಸೇರಿಸಬಾರದೆಂದೂ ಹಾಗೂ ವಾಸ್ತವಿಕ ಸಂಗತಿಗಳನ್ನು ಸುಪ್ರೀಂ ಕೋರ್ಟ್‌ನ ಮುಂದೆ ಸರಿಯಾಗಿ ಮಂಡಿಸಬೇಕೆಂದೂ ಅವರು ಮನವಿ ಮಾಡಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಕಾಂಗ್ರೆಸ್‌ನ ಆಂತರಿಕ ಕಲಹದಿಂದ 'ಮೂರನೇ ಮುಖ್ಯಮಂತ್ರಿ' ಬಂದರೂ ಅಚ್ಚರಿ ಇಲ್ಲ: ಬಿ.ವೈ. ವಿಜಯೇಂದ್ರ

ಯುವ ಜನತೆಯ ಆಕ್ರೋಶ ತಡೆಯಲು ಸಾಧ್ಯವಿಲ್ಲ, ಇಡೀ ದೇಶ ಜಂತರ್ ಮಂತರ್ ಆಗಲಿದೆ: ಪ್ರಕಾಶ್ ರಾಜ್

ಸೆಪ್ಟೆಂಬರ್‌ನಲ್ಲಿ ನಿರೀಕ್ಷೆ ಮೀರಿ ಹೆಚ್ಚಿದ ಭಾರತದ ಸಗಟು ಹಣದುಬ್ಬರ: ಶೇ.11.4ಕ್ಕೆ ಏರಿಕೆ

'ಅಧರ್ಮ ಎಸಗಿದವರಿಗೆ ಶಿಕ್ಷೆ ನೀಡುವುದೂ ಧರ್ಮವೇ'; ಮೀರತ್ ಹತ್ಯೆ ಪ್ರಕರಣ ಶಿಕ್ಷೆ ಪ್ರಕಟ ವೇಳೆ ನ್ಯಾಯಾಧೀಶರಿಂದ ಭಗವದ್ಗೀತೆ ಉಲ್ಲೇಖ!

Team India ಸೆಲೆಕ್ಷನ್ ಕಮಿಟಿ ಅಧ್ಯಕ್ಷರ ಆಯ್ಕೆ: ರೇಸ್ ನಿಂದ ಪಾರ್ಥಿವ್‌ ಪಟೇಲ್ ಔಟ್? 24 ಟೆಸ್ಟ್‌ ಅನುಭವದ ಮಾಜಿ ಕ್ರಿಕೆಟಿಗನ ಹೆಸರು ಮುಂಚೂಣಿಗೆ!