ಪ್ರಿಯಾಂಕ್ ಖರ್ಗೆ  
ರಾಜ್ಯ

ಸಿದ್ದರಾಮಯ್ಯನವರಿಗೆ ಸಂಬಂಧಪಟ್ಟ ವಿಡಿಯೊ ಬಗ್ಗೆ FIR ದಾಖಲಾಗಿದೆ, ಸಮಗ್ರ ತನಿಖೆ ನಡೆಸುತ್ತೇವೆ: ಪ್ರಿಯಾಂಕ್ ಖರ್ಗೆ; Video

ಪ್ರಜ್ವಲ್ ರೇವಣ್ಣ ಜೈಲಲ್ಲಿ ಇರೋದಿಕ್ಕೆ, ಅವರ ವಿಕೃತ ಮನಸ್ಥಿತಿಗೆ ಕಾಂಗ್ರೆಸ್ ಕಾರಣನಾ, ನಿಮ್ಮನೆ ಮಕ್ಕಳನ್ನು ಸರಿಯಾಗಿ ಬೆಳೆಸಲು ಆಗದಿದ್ದರೆ ಅದಕ್ಕೂ ಕಾಂಗ್ರೆಸ್ ಗೂ ಏನು ಸಂಬಂಧ, ನಾಚಿಕೆಯಾಗುವುದಿಲ್ಲವೇ ಹೇಳಲು ಎಂದು ಕೇಳಿದರು.

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ ವಿರುದ್ಧ ಅಪಪ್ರಚಾರ ಮಾಡುವ ರೀತಿಯ ವಿಡಿಯೋವನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಾಗೂ ಸುದ್ದಿ ಮಾಧ್ಯಮಗಳಲ್ಲಿ ಪ್ರಸಾರ ಮಾಡದಂತೆ ತಡೆಯಾಜ್ಞೆ ಕೋರಿ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿ ಅದಕ್ಕೆ ನ್ಯಾಯಾಲಯ ಕೂಡ ತಡೆಯಾಜ್ಞೆ ತಂದಿರುವುದು ರಾಜ್ಯ ರಾಜಕೀಯದಲ್ಲಿ ಬಹು ಚರ್ಚಿತ ವಿಷಯವಾಗಿದೆ.

ಈ ಕುರಿತು ಇಂದು ಬೆಂಗಳೂರಿನಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಗೃಹ ಸಚಿವ ಪ್ರಿಯಾಂಕ್ ಖರ್ಗೆ, ಪ್ರಕರಣ ಕುರಿತು ಎಫ್ ಐಆರ್ ದಾಖಲಿಸಲಾಗಿದೆ. ನಾವು ಸಮಗ್ರವಾಗಿ ತನಿಖೆ ನಡೆಸುತ್ತೇವೆ. ವಿಡಿಯೊದಲ್ಲಿರುವ ವಿಷಯಗಳೆಲ್ಲ ಸುಳ್ಳು ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಈ ವಿಡಿಯೊವನ್ನು ಯಾರು ಚಿತ್ರೀಕರಿಸಿದ್ದಾರೆ, ಎಲ್ಲಿಗೆ ಅಪ್‌ಲೋಡ್ ಮಾಡಲಾಗಿದೆ ಮತ್ತು ಇದರ ಹಿಂದೆ ಯಾರಿದ್ದಾರೆ ಎಂಬುದನ್ನು ತನಿಖೆ ನಡೆಸುತ್ತೇವೆ ಎಂದರು.

ನಿನ್ನೆ ಸುದ್ದಿಗೋಷ್ಠಿಯಲ್ಲಿ ಈ ವಿಷಯ ಪ್ರಸ್ತಾಪಿಸಿದ್ದ ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ, ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ವಿರುದ್ಧ ವಾಗ್ದಾಳಿ ನಡೆಸಿ 8 ವರ್ಷಗಳ ಕಾಲ ಮುಖ್ಯಮಂತ್ರಿಯಾಗಿದ್ದ ಸಿದ್ದರಾಮಯ್ಯನವರಿಗೆ ಈ ಸ್ಥಿತಿ ಬರಬಾರದಾಗಿತ್ತು. ಅವರನ್ನು ರಾಜಕೀಯವಾಗಿ ಮುಗಿಸಲು ಹೊರಟಿದ್ದಾರೆ, ಈ ಪ್ರಕರಣವನ್ನು ಸಿಬಿಐಗೆ ವಹಿಸಬೇಕು ಎಂದು ಹೇಳಿದ್ದರು.

ಈ ಬಗ್ಗೆ ಪ್ರಿಯಾಂಕ್ ಖರ್ಗೆ ಪ್ರತಿಕ್ರಿಯಿಸಿ, ಕುಮಾರಸ್ವಾಮಿಯವರು ಕೇಂದ್ರ ಮಂತ್ರಿಗಳು, ಮಾಜಿ ಮುಖ್ಯಮಂತ್ರಿಗಳು, ಅವರು ಈ ರೀತಿ ಕ್ಷುಲ್ಲಕವಾಗಿ ಮಾತನಾಡಬಾರದು, ರೇವಣ್ಣ ಅವರ ಕುಟುಂಬದ ಬಗ್ಗೆ ಕಾಂಗ್ರೆಸ್ ನ್ನು ಆಪಾದಿಸಿದರು, ಅವರು ಮಾಡಿದ್ದೇನು, ವಿಡಿಯೊ ಮಾಡಿದ್ದು ಕಾಂಗ್ರೆಸ್ ನವರಾ, ಪ್ರಜ್ವಲ್ ರೇವಣ್ಣ ಜೈಲಲ್ಲಿ ಇರೋದಿಕ್ಕೆ, ಅವರ ವಿಕೃತ ಮನಸ್ಥಿತಿಗೆ ಕಾಂಗ್ರೆಸ್ ಕಾರಣನಾ, ನಿಮ್ಮನೆ ಮಕ್ಕಳನ್ನು ಸರಿಯಾಗಿ ಬೆಳೆಸಲು ಆಗದಿದ್ದರೆ ಅದಕ್ಕೂ ಕಾಂಗ್ರೆಸ್ ಗೂ ಏನು ಸಂಬಂಧ, ನಾಚಿಕೆಯಾಗುವುದಿಲ್ಲವೇ ಹೇಳಲು ಎಂದು ಕೇಳಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಿಹಾರದ ವೈಶಾಲಿಯಲ್ಲಿ ದೋಣಿ ಮುಳುಗಿ ಕನಿಷ್ಠ 13 ಮಂದಿ ಸಾವು; ಪ್ರಧಾನಿ ಮೋದಿ ಸಂತಾಪ, ಪರಿಹಾರ ಘೋಷಣೆ; Video

'ಜಂತರ್ ಮಂತರ್‌'ಗೆ ಅಕ್ರಮ ಪ್ರವೇಶ ಆರೋಪ: ಮುನ್ನೆಚ್ಚರಿಕೆ ಕ್ರಮವಾಗಿ CJPಯ ರಂಕಾ, ದಾಸ್, ಶಿಂಧೆ ಬಂಧನ

‘ರಾಹುಲ್ ಗಾಂಧಿ ನನ್ನನ್ನು ಪಕ್ಕಕ್ಕೆ ತಳ್ಳಿಲ್ಲ,ಕಾಳಜಿ ವಹಿಸಿದರು, ಬಿಜೆಪಿಯವರಿಗೆ ನನ್ಮೇಲೆ ತುಂಬಾ ಪ್ರೀತಿ’: CM ಡಿ.ಕೆ. ಶಿವಕುಮಾರ್; Video

ಒಂದು ಕಾಣದ ಕಣದ ಹುಡುಕಾಟ (ವಿಜ್ಞಾನ ವಿಶೇಷ)

'ಜನರು ಬಿಜೆಪಿ, ಮೋದಿ ಅವರೊಂದಿಗಿದ್ದಾರೆ': 2029ರ ಚುನಾವಣೆಯಲ್ಲಿ ಮತ್ತೊಂದು 'ಭಾರಿ ಸೋಲಿಗೆ' ಸಿದ್ಧರಾಗಿ: ರಾಹುಲ್ ಗಾಂಧಿ ವಿರುದ್ಧ ಅಮಿತ್ ಶಾ ವಾಗ್ದಾಳಿ