ಪ್ರಿಯಾಂಕ್ ಖರ್ಗೆ  
ರಾಜ್ಯ

ಕಾಕ್ರೋಚ್ ಜನತಾ ಪಾರ್ಟಿ, ಕಾಂಗ್ರೆಸ್ ಎರಡೂ ಒಂದೇ; ಇಲ್ಲಿ ನಿಮ್ಮನ್ನು ಯಾರೂ ಬಂಧಿಸಲ್ಲ: ಪ್ರಿಯಾಂಕ್ ಖರ್ಗೆ ಸ್ಫೋಟಕ ಹೇಳಿಕೆ!

ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದ ಪ್ರಿಯಾಂಕ್ ಖರ್ಗೆ ಅವರು, ಕಾಕ್ರೋಚ್ ಜನತಾ ಪಾರ್ಟಿ ಮತ್ತು ಕಾಂಗ್ರೆಸ್ ಎರಡೂ ಒಂದೇ ಎಂದು ಹೇಳಿ ಅಚ್ಚರಿ ಮೂಡಿಸಿದರು.

ಬೆಂಗಳೂರು: 'ಕಾಕ್ರೋಚ್ ಜನತಾ ಪಾರ್ಟಿ ಮತ್ತು ಕಾಂಗ್ರೇಸ್ ಎರಡೂ ಒಂದೇ', ಹೆದರಬೇಡಿ ನೀಮ್ಮನ್ನು ಇಲ್ಲಿ ಅರೆಸ್ಟ್‌ ಮಾಡಲ್ಲ' ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರು ಗುರುವಾರ ಸ್ಫೋಟಕ ಹೇಳಿಕೆ ನೀಡಿದ್ದಾರೆ.

ಇಂದು ಥಣಿಸಂದ್ರದ ಟ್ರಾಫಿಕ್ ಪಾರ್ಕ್ ಗುದ್ದಲಿ ಪೂಜೆ ಕಾರ್ಯಕ್ರಮ ಹಾಗೂ ಟ್ರಾಫಿಕ್ ಪೊಲೀಸರಿಗೆ ಬೈಕ್ ವಿತರಣೆ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದ ಪ್ರಿಯಾಂಕ್ ಖರ್ಗೆ ಅವರು, ಕಾಕ್ರೋಚ್ ಜನತಾ ಪಾರ್ಟಿ ಮತ್ತು ಕಾಂಗ್ರೆಸ್ ಎರಡೂ ಒಂದೇ ಎಂದು ಹೇಳಿ ಅಚ್ಚರಿ ಮೂಡಿಸಿದರು.

'ವಿಧ್ಯಾರ್ಥಿಗಳಿಗೆ ನೀವೆಲ್ಲ ಜೆನ್ ಝಿ(Gen-Z) ಗಳಿದ್ದೀರಾ' ಎಂದು ಯುವಕರನ್ನು ಖರ್ಗೆ ಹುರಿದುಂಬಿಸಿದರು. ಇದೇ ವೇಳೆ ನೀವು ಕಾಂಗ್ರೇಸ್ಸಾ ಅಥವಾ ಕಾಕ್ರೋಚ್ ಜನತಾ ಪಾರ್ಟಿನಾ ಎಂದು ಪ್ರಶ್ನೆ ಮಾಡಿದರು. ಇದಕ್ಕೆ ಯಾವುದೇ ವಿದ್ಯಾರ್ಥಿಗಳು ಉತ್ತರ ಕೊಡದೇ ಸುಮ್ಮನಿದ್ದಾಗ, 'ಹೆದರಬೇಡಿ ನೀಮ್ಮನ್ನು ಇಲ್ಲಿ ಅರೆಸ್ಟ್‌ ಮಾಡಲ್ಲ' ಎಂದು ಪ್ರಿಯಾಂಕ್ ಖರ್ಗೆ ಹೇಳಿದರು.

ಈ ವೇಳೆ ಅಲ್ಲೆ ನೆರೆದಿದ್ದ ಬಹುತೇಕ ವಿಧ್ಯಾರ್ಥಿಗಳು ಕಾಕ್ರೋಚ್.., ಕಾಕ್ರೋಚ್.. ಎಂದು ಕೂಗಿದರು. ಇನ್ನು ಕೆಲವು ವಿದ್ಯಾರ್ಥಿಗಳು ಕಾಂಗ್ರೆಸ್.., ಕಾಂಗ್ರೆಸ್ ಎಂದು ಘೋಷಣೆಗಳನ್ನು ಕೂಗಿದ್ದರು. ಈ ವೇಳೆ ಖರ್ಗೆ ಅವರು ನೀವ್ಯಾರೂ ಇಲ್ಲಿ ಇಬ್ಭಾಗವಾಗಿ ಕೂಗಬೇಡಿ, "ಕಾಕ್ರೋಚ್ ಜನತಾ ಪಾರ್ಟಿ ಮತ್ತು ಕಾಂಗ್ರೇಸ್ ಎರಡೂ ಒಂದೇ ಬಿಡಿ" ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಬಲಿತ ದಲಿತ'ನೇ, ನಿಮಗೆ, ನಿಮ್ಮಪ್ಪನಿಗೆ ಇನ್ನೆಷ್ಟು ವರ್ಷ ಮೀಸಲು ಕ್ಷೇತ್ರಗಳು ಬೇಕು?: ಖರ್ಗೆ ವಿರುದ್ಧ ಕುಮಾರಸ್ವಾಮಿ ಕೆಂಡಾಮಂಡಲ

ದೆಹಲಿಯ ಕನ್ನಾಟ್ ಪ್ಲೇಸ್‌ನಲ್ಲಿ ಅ.16ರ CJPಯ ಪ್ರತಿಭಟನೆಗೆ ತಡೆ ನೀಡಲು ಹೈಕೋರ್ಟ್ ನಕಾರ!

ಪೊಲೀಸ್ ಕಮಿಷನರ್ ಕಚೇರಿ ಮುಂದೆ HDK ಧರಣಿ: ಸ್ಟಿಂಗ್‌ ರೂವಾರಿಯ ಬಂಧನಕ್ಕೆ ಆಗ್ರಹ; ಎರಡು ದಿನಗಳ ಡೆಡ್‌ಲೈನ್‌!

Indian Stock Market: ಕೊನೆಗೂ ಪುಟಿದಿದ್ದ ಭಾರತೀಯ ಷೇರು ಮಾರುಕಟ್ಟೆ, ಸೆನ್ಸೆಕ್ಸ್ ದಾಖಲೆಯ ಏರಿಕೆ

T20 ಕ್ರಿಕೆಟ್ ಇತಿಹಾಸದಲ್ಲಿ ಯಾರೂ ಮಾಡದ ಅಪರೂಪದ ವಿಶ್ವ ದಾಖಲೆ ಬರೆದ ಪಾಕ್ ಕ್ಯಾಪ್ಟನ್!