ಡಿ.ಕೆ ಶಿವಕುಮಾರ್ 
ರಾಜ್ಯ

ಗ್ರಾಮ ಪಂಚಾಯಿತಿಗಳ ಆರ್ಥಿಕ ಪರಿಸ್ಥಿತಿ ಸುಧಾರಣೆಗೆ ಕ್ರಮ: ಸಿಎಂ ಡಿ.ಕೆ ಶಿವಕುಮಾರ್

5ನೇ ರಾಜ್ಯ ಹಣಕಾಸು ಆಯೋಗದ ವರದಿಯಂತೆ ಗ್ರಾಮ ಪಂಚಾಯಿತಿಗಳಿಗೆ ಒಟ್ಟು ರೂ. 1261 ಕೋಟಿ, ತಾಲೂಕು ಪಂಚಾಯಿತಿಗಳಿಗೆ ಒಟ್ಟು ರೂ. 557 ಕೋಟಿ ಹಾಗೂ ಜಿಲ್ಲಾ ಪಂಚಾಯಿತಿಗಳಿಗೆ ಒಟ್ಟು ರೂ. 183 ಕೋಟಿ ಬಿಡುಗಡೆ ಮಾಡಲಾಗಿದೆ ಎಂದು ವಿವರಿಸಿದರು.

ಬೆಂಗಳೂರು: ಗ್ರಾಮ ಪಂಚಾಯಿತಿಗಳ ಆರ್ಥಿಕ ಪರಿಸ್ಥಿತಿಯನ್ನು ಸುಧಾರಿಸುವ ಮೂಲಕ ವಿಕೇಂದ್ರೀಕರಣ ವ್ಯವಸ್ಥೆಯನ್ನು ಇನ್ನಷ್ಟು ಬಲಪಡಿಸಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರು ತಿಳಿಸಿದರು.

ಸಿಎಂ ಗೃಹ ಕಚೇರಿ ಶಿವಕುಮಾರ್ ಅವರು ಕೃಷ್ಣಾದಲ್ಲಿ ಕರ್ನಾಟಕ ರಾಜ್ಯ ವಿಕೇಂದ್ರೀಕರಣ ಯೋಜನೆ ಮತ್ತು ಅಭಿವೃದ್ಧಿ ಸಮಿತಿ ಸಭೆನಡೆಸಿ ಬುಧವಾರ ಮಾತನಾಡಿದರು. 5ನೇ ಹಣಕಾಸು ಆಯೋಗದ ವರದಿಯ ಹಣಕಾಸು ಹಂಚಿಕೆ ಹಾಗೂ ಆಡಳಿತ ಸುಧಾರಣೆಗೆ ಸಂಬಂಧಿಸಿದ ಶಿಫಾರಸುಗಳನ್ನು ಅನುಷ್ಠಾನಕ್ಕೆ ತರುವ ಕುರಿತಾಗಿ ಗ್ರಾಮೀಣಾಭಿವೃದ್ಧಿ ಸಚಿವರ ಅಧ್ಯಕ್ಷತೆಯಲ್ಲಿ ಸಮಿತಿಯನ್ನು ರಚಿಸಲಾಗುವುದು. ಸಮಿತಿಯು ಅನುಷ್ಠಾನಗೊಳಿಸಬಹುದಾದ ಶಿಫಾರಸುಗಳನ್ನು ಪರಿಶೀಲಿಸಿ ವರದಿ ಸಲ್ಲಿಸಲಿದೆ" ಎಂದರು.

"5ನೇ ರಾಜ್ಯ ಹಣಕಾಸು ಆಯೋಗದ ವರದಿಯಂತೆ ಗ್ರಾಮ ಪಂಚಾಯಿತಿಗಳಿಗೆ ಒಟ್ಟು ರೂ. 1261 ಕೋಟಿ, ತಾಲೂಕು ಪಂಚಾಯಿತಿಗಳಿಗೆ ಒಟ್ಟು ರೂ. 557 ಕೋಟಿ ಹಾಗೂ ಜಿಲ್ಲಾ ಪಂಚಾಯಿತಿಗಳಿಗೆ ಒಟ್ಟು ರೂ. 183 ಕೋಟಿ ಬಿಡುಗಡೆ ಮಾಡಲಾಗಿದೆ" ಎಂದು ವಿವರಿಸಿದರು.

"ಸಂವಿಧಾನದ 74ನೇ ತಿದ್ದುಪಡಿಯ ಆಶಯದಂತೆ ನಗರ ಸ್ಥಳೀಯ ಸಂಸ್ಥೆಗಳು ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸಲು ಎಲ್ಲಾ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುವುದು. ಈ ನಿಟ್ಟಿನಲ್ಲಿ ಕಾಯ್ದೆಗಳಿಗೆ ಸೂಕ್ತ ತಿದ್ದುಪಡಿ ತರುವ ಕುರಿತಾಗಿ ನ್ಯಾಷನಲ್ ಲಾ ಕಾಲೇಜಿನ ತಜ್ಞರೊಂದಿಗೆ ಸಮಾಲೋಚನೆ ನಡೆಸಲಾಗುವುದು" ಎಂದು ಹೇಳಿದರು.

"ಗ್ರಾಮಸಭೆಗಳ ಮಾದರಿಯಲ್ಲಿ ವಾರ್ಡ್ ಸಭೆಗಳ ಮೂಲಕ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಯೋಜನೆಗಳನ್ನು ರೂಪಿಸಿ ಅನುಷ್ಠಾನಗೊಳಿಸಬೇಕಾಗಿದೆ. ಈಗಾಗಲೇ ಜಿಲ್ಲಾ ಮಟ್ಟದಲ್ಲಿ, ತಾಲೂಕು ಮಟ್ಟದಲ್ಲಿ ಹಾಗೂ ಗ್ರಾಮ ಮಟ್ಟದಲ್ಲಿ ಜಿಲ್ಲಾ ಯೋಜನಾ ಸಮಿತಿಗಳನ್ನು ರಚಿಸಲಾಗಿದ್ದು, ಈ ಎಲ್ಲಾ ಸಮಿತಿಗಳು ಮೂರು ತಿಂಗಳಿಗೊಮ್ಮೆ ಕಡ್ಡಾಯವಾಗಿ ಸಭೆ ನಡೆಸಿ ವರದಿಯನ್ನು ಸಲ್ಲಿಸುವಂತೆ" ಸೂಚನೆ ನೀಡಿದರು.

"ಜಿಲ್ಲಾ ಮತ್ತು ತಾಲೂಕು ಮಟ್ಟದಲ್ಲಿ ಯೋಜನಾ ನಿರ್ವಹಣಾ ಘಟಕಗಳನ್ನು ಸ್ಥಾಪಿಸಲು ಅವಶ್ಯಕವಾದ ಅನುದಾನವನ್ನು ಒದಗಿಸಬೇಕು. ತಳಮಟ್ಟದಿಂದ ಜನರ ಬೇಡಿಕೆಗಳನ್ನು ಪಡೆದು ರಾಜ್ಯ ಆಯವ್ಯಯದಲ್ಲಿ ಒಳಗೂಡಿಸುವ ನಿಟ್ಟಿನಲ್ಲಿ ʻಜನರ ಯೋಜನೆʼ ಯನ್ನು ಜಾರಿಗೊಳಿಸುವುದಾಗಿ ಬಜೆಟ್ ನಲ್ಲಿ ನಾವು ಘೋಷಿಸಿದ್ದೇವೆ. ಈ ಕುರಿತಾಗಿ ಗ್ರಾಮೀಣಾಭಿವೃದ್ಧಿ ಇಲಾಖೆ ಹಾಗೂ ನಗರಾಭಿವೃದ್ಧಿ ಇಲಾಖೆಗಳು ಸೂಕ್ತ ಮಾರ್ಗಸೂಚಿಗಳನ್ನು ಹೊರಡಿಸಬೇಕು. ಇದಕ್ಕೆ ಅಗತ್ಯವಾದ ತಂತ್ರಾಂಶವನ್ನು ರೂಪಿಸಿ" ಎಂದು ನಿರ್ದೇಶನ ನೀಡಿದರು.

"ಗ್ರಾಮ ಪಂಚಾಯಿತಿ ತಾಲೂಕು ಪಂಚಾಯಿತಿ ಹಾಗೂ ಜಿಲ್ಲಾ ಪಂಚಾಯಿತಿಗಳಿಗೆ ಸಂಬಂಧಿಸಿದ ಕಾರ್ಯಕ್ರಮಗಳ ಅನುಷ್ಠಾನದ ಜವಾಬ್ದಾರಿ ನಕ್ಷೆಯನ್ನು ಸಿದ್ಧಪಡಿಸಲು ಈಗಾಗಲೇ ಎಲ್ಲಾ ಇಲಾಖೆಗಳಿಗೆ ಸೂಚನೆ ನೀಡಲಾಗಿದೆ. ಎಲ್ಲಾ ಇಲಾಖೆಗಳು ನಿಗದಿತ ಅವಧಿಯ ಒಳಗಾಗಿ ಜವಾಬ್ದಾರಿ ನಕ್ಷೆಯನ್ನು ಸಿದ್ಧಪಡಿಸಿ ಸಲ್ಲಿಸಲು" ಸೂಚನೆ ನೀಡಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತೀಯರ ಸಾಮೂಹಿಕೆ ಹತ್ಯೆಗೆ ಸಂಚು: ರೈಫಲ್ ಹಿಡಿದು ಅಮೆರಿಕದ ಹಿಂದೂ ದೇವಸ್ಥಾನಕ್ಕೆ ನುಗ್ಗಿದ್ದ ಶೂಟರ್; ಕೊನೆ ಕ್ಷಣದಲ್ಲಿ ಗನ್ ಜಾಮ್, ಆರೋಪಿ ಬಂಧನ..!

ಶೃಂಗೇರಿ ಮತ ಎಣಿಕೆ Video ನಾಪತ್ತೆ: ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್ ತರಾಟೆ..!

ಕೇರಳಂ: ಮಿನಿ ಕೂಪರ್ ಕಾರು ಅಪಘಾತದಲ್ಲಿ ಮೂವರ ಸಾವು, ತಡರಾತ್ರಿಯಲ್ಲಿ ಹಿಂದೂ ಯುವತಿಯರು ಹೊರಗೆ ಹೋಗಿದ್ಯಾಕೆ? ಸಾಮಾಜಿಕ ಜಾಲತಾಣಗಳಲ್ಲಿ ಚರ್ಚೆ

ಸ್ಥಳೀಯ ಸಂಸ್ಥೆಗಳಿಗೂ ಜಿಎಸ್‌ಟಿ ಆದಾಯ ಹಂಚಿಕೆ: GST ಮಂಡಳಿಗೆ ರಾಜ್ಯ ಸರ್ಕಾರ ಪ್ರಸ್ತಾವನೆ

ಸ್ಟಿಂಗ್‌ ಆಪರೇಷನ್‌ ಬಗ್ಗೆ ಬೇರೆಯವರು ಮಾತನಾಡುವ ಆಗಿಲ್ಲ ಎನ್ನಲು ನೀವೇನು ಸರ್ವಾಧಿಕಾರಿಯೇ ಪ್ರಿಯಾಂಕ್‌ ಖರ್ಗೆ..?