ಪೊಲೀಸ್ ಕಮಿಷನರ್ ಕಚೇರಿ ಮುಂದೆ HDK ಧರಣಿ 
ರಾಜ್ಯ

ಪೊಲೀಸ್ ಕಮಿಷನರ್ ಕಚೇರಿ ಮುಂದೆ HDK ಧರಣಿ: ಸ್ಟಿಂಗ್‌ ರೂವಾರಿಯ ಬಂಧನಕ್ಕೆ ಆಗ್ರಹ; ಎರಡು ದಿನಗಳ ಡೆಡ್‌ಲೈನ್‌!

ಈ ಸಂಬಂಧ ಇಂದು ಬೆಂಗಳೂರು ಪೊಲೀಸ್ ಕಮಿಷನರ್ ಕಚೇರಿ ಮುಂದೆ ಧರಣಿ ನಡೆಸಿದ ಕುಮಾರಸ್ವಾಮಿ ಅವರು, ಸ್ಟಿಂಗ್‌ ಆಪರೇಷನ್‌ ರೂವಾರಿಯನ್ನು ತಕ್ಷಣವೇ ಬಂಧಿಸಬೇಕು ಎಂದು ಆಗ್ರಹಿಸಿದರು.

ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ತೀವ್ರ ಸಂಚಲನ ಸೃಷ್ಟಿಸಿರುವ 'ಸ್ಟಿಂಗ್' ಆಪರೇಷನ್ ಗೆ ಸಂಬಂಧಿಸಿದಂತೆ ಜೆಡಿ(ಎಸ್) ಕಾರ್ಯಕರ್ತರನ್ನು ಟಾರ್ಗೆಟ್ ಮಾಡಲಾಗುತ್ತಿದೆ ಎಂದು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಗುರುವಾರ ಆರೋಪಿಸಿದ್ದಾರೆ.

ಈ ಸಂಬಂಧ ಇಂದು ಬೆಂಗಳೂರು ಪೊಲೀಸ್ ಕಮಿಷನರ್ ಕಚೇರಿ ಮುಂದೆ ಧರಣಿ ನಡೆಸಿದ ಕುಮಾರಸ್ವಾಮಿ ಅವರು, ಸ್ಟಿಂಗ್‌ ಆಪರೇಷನ್‌ ರೂವಾರಿಯನ್ನು ತಕ್ಷಣವೇ ಬಂಧಿಸಬೇಕು ಎಂದು ಆಗ್ರಹಿಸಿದರು. ಎರಡು ದಿನಗಳಲ್ಲಿ ಮುಖ್ಯ ಆರೋಪಿ ಬಂಧನ ಆಗದಿದ್ರೆ, ಉಗ್ರ ಹೋರಾಟ ಮಾಡುವುದಾಗಿ ಎಚ್ಚರಿಕೆಯನ್ನೂ ನೀಡಿದ್ದಾರೆ.

ತಮ್ಮ ಪಕ್ಷದ ಕಾರ್ಯಕರ್ತನೊಬ್ಬನನ್ನು ಯಾವುದೇ ಮುನ್ಸೂಚನೆ ನೀಡದೆ ವಿಚಾರಣೆಗೆಂದು ಕರೆದೊಯ್ದು, ಹಲವು ಗಂಟೆಗಳ ಕಾಲ ಅಜ್ಞಾತ ಸ್ಥಳದಲ್ಲಿ ಇರಿಸಲಾಗಿತ್ತು ಎಂದು ಅವರು ದೂರಿದ್ದಾರೆ.

ಸ್ಟಿಂಗ್ ಆಪರೇಷನ್ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು, ಜೆಡಿಎಸ್ ಸೋಷಿಯಲ್ ಮೀಡಿಯಾ ಹುಡುಗರ ಬೆನ್ನು ಬಿದ್ದಿದ್ದಾರೆ. ಮಾಜಿ ಸಿಎಂ ಸಿದ್ದರಾಮಯ್ಯ ದೂರಿನನ್ವಯ ಜೆಡಿಎಸ್ ಐಟಿ ಸೆಲ್‌ನ ಶಂಕರ್, ಮೋಹನ್‌ರನ್ನ ವಶ ವಶಕ್ಕೆ ಪಡೆಯಲಾಗಿದೆ. ಪೊಲೀಸರ ವರ್ತನೆಗೆ ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದು, ಪೊಲೀಸ್ ಕಮಿಷನರ್ ಕಚೇರಿ ಮುಂದೆ ಧರಣಿ ನಡೆಸಿ, ಪೊಲೀಸರ ಕ್ರಮವನ್ನು ಖಂಡಿಸಿದರು.

ಪೊಲೀಸ್ ಆಯುಕ್ತರ ಕಚೇರಿಯ ಮೆಟ್ಟಿಲುಗಳ ಮೇಲೆಯೇ ಕುಳಿತು ಕುಮಾರಸ್ವಾಮಿ ಧರಣಿ ನಡೆಸಿದರು. ಈ ವೇಳೆ ನಗರ ಪೊಲೀಸ್‌ ಆಯುಕ್ತರು, ಕೇಂದ್ರ ಸಚಿವರ ಮನವೊಲಿಸಲು ಪ್ರಯತ್ನಿಸಿದ್ದರು. ಈ ವೇಳೆ ಕುಮಾರಸ್ವಾಮಿ ನನ್ನ ವಿರುದ್ಧವೇ ತನಿಖೆ ಮಾಡಿ, ಸತ್ಯ ಹೊರಗೆ ಬರಬೇಕು ಎಂದು ಪಟ್ಟು ಹಿಡಿದರು. ಈ ವೇಳೆ ಪೊಲೀಸ್‌ ಆಯುಕ್ತರು, ಪ್ರಾಮಾಣಿಕವಾಗಿ ತನಿಖೆ ಮಾಡ್ತೀವಿ ಎಂದು ಭರವಸೆ ನೀಡಿದ ನಂತರ ಕುಮಾರಸ್ವಾಮಿ ಅವರು ಧರಣಿ ಕೈಬಿಟ್ಟರು.

ಇದಕ್ಕೂ ಮುನ್ನ, ಶೇಷಾದ್ರಿಪುರಂನಲ್ಲಿರುವ ಜೆಡಿ(ಎಸ್) ಕಚೇರಿಯಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಕುಮಾರಸ್ವಾಮಿ, ತನಿಖೆ ನಡೆಸಿದ ರೀತಿಯನ್ನು ಪ್ರಶ್ನಿಸಿದರು. ಅಲ್ಲದೆ, ಈ ಪ್ರಕರಣದಲ್ಲಿ ತಮ್ಮನ್ನು ಸಿಲುಕಿಸುವ ಪ್ರಯತ್ನಗಳು ನಡೆಯುತ್ತಿವೆ ಎಂದು ಆರೋಪಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಬಲಿತ ದಲಿತ'ನೇ, ನಿಮಗೆ, ನಿಮ್ಮಪ್ಪನಿಗೆ ಇನ್ನೆಷ್ಟು ವರ್ಷ ಮೀಸಲು ಕ್ಷೇತ್ರಗಳು ಬೇಕು?: ಖರ್ಗೆ ವಿರುದ್ಧ ಕುಮಾರಸ್ವಾಮಿ ಕೆಂಡಾಮಂಡಲ

ಭಾವಿ ಪತಿಯನ್ನೇ ಹತ್ಯೆಗೈದ ರಿಂಗ್ ರೋಡ್ ಶುಭಾಗೆ ಬಿಗ್ ಶಾಕ್: ಕ್ಷಮಾದಾನ ಅರ್ಜಿ ತಿರಸ್ಕರಿಸಿದ ಸಚಿವ ಸಂಪುಟ!

ಸಂಶಯ ಬಂದ್ರೆ ಕುಮಾರಸ್ವಾಮಿಯನ್ನೂ ವಶಕ್ಕೆ ಪಡೆಯುತ್ತೇವೆ: ಗೃಹ ಸಚಿವ ಪ್ರಿಯಾಂಕ್ ಖರ್ಗೆ

ವಿವಿ ಫ್ರೆಟರ್ನಿಟಿ ಕಾರ್ಯಕ್ರಮದಲ್ಲಿ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ; ‘ನನ್ನ ಸರದಿ ಯಾವಾಗ?’ ಎಂದು ಕೂಗಿದ ಪುರುಷರು!

ಹೊಸ ಪಕ್ಷದ ಹೆಸರು ಘೋಷಿಸಿದ ಮಾಜಿ IAS ಅಧಿಕಾರಿ ದಿವ್ಯಾ ಮಿತ್ತಲ್; 2027ರ ಯುಪಿ ಚುನಾವಣೆಗೆ ಸ್ಪರ್ಧೆ