ಕಾರ್ತಿಕ್  
ರಾಜ್ಯ

ಮೈಸೂರು ದಸರಾ ವೇಳೆ ಬಲೂನ್ ಮಾರುವ ಬಾಲಕಿ ಮೇಲೆ ಅತ್ಯಾಚಾರವೆಸಗಿ ಕೊಲೆ: ಕಾಮುಕನ ಕೃತ್ಯ ಸಾಬೀತು; ನಾಳೆ ಶಿಕ್ಷೆ ಪ್ರಮಾಣ ಪ್ರಕಟ

ಪ್ರಕರಣದ ವಿಚಾರಣೆ ನಡೆಸಿದ ಮೈಸೂರು ಶೀಘ್ರಗತಿ ವಿಶೇಷ ನ್ಯಾಯಾಲಯ, ಕಾಮುಕ ಕಾರ್ತಿಕ್ ದೋಷಿ ಎಂದು ತೀರ್ಪು ನೀಡಿದ್ದು, ಶಿಕ್ಷೆ ಪ್ರಮಾಣವನ್ನು ನಾಳೆಗೆ ಕಾಯ್ದಿರಿಸಿದೆ.

ಮೈಸೂರು: ಕಳೆದ ವರ್ಷ ಮೈಸೂರು ದಸರಾ ಮಹೋತ್ಸವ ವೇಳೆ ಬಲೂನ್ ಮಾರಲು ಬಂದಿದ್ದ 9 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಎಸಗಿ, ಕೊಲೆ ಮಾಡಿದ್ದ ಕಾರ್ತಿಕ್​(32) ತಪ್ಪಿತಸ್ಥ ಎಂದು ಮೈಸೂರು ಕೋರ್ಟ್ ಗುರುವಾರ ತೀರ್ಪು ನೀಡಿದೆ.

ಪ್ರಕರಣದ ವಿಚಾರಣೆ ನಡೆಸಿದ ಮೈಸೂರು ಶೀಘ್ರಗತಿ ವಿಶೇಷ ನ್ಯಾಯಾಲಯ, ಕಾಮುಕ ಕಾರ್ತಿಕ್ ದೋಷಿ ಎಂದು ತೀರ್ಪು ನೀಡಿದ್ದು, ಶಿಕ್ಷೆ ಪ್ರಮಾಣವನ್ನು ನಾಳೆಗೆ ಕಾಯ್ದಿರಿಸಿದೆ. ದಸರಾ ಸಮಯದಲ್ಲೇ ಕೃತ್ಯವೆಸಗಿದ್ದ ಆರೋಪಿಗೆ ಇದೀಗ ದಸರಾ ಮಹೋತ್ಸವ ಸಮಯದಲ್ಲೇ ಶಿಕ್ಷೆ ವಿಧಿಸಿರುವುದು ವಿಶೇಷ.

ಕಳೆದ ವರ್ಷ ದಸರಾ ಹಿನ್ನೆಲೆಯಲ್ಲಿ ಕುಟುಂಬವೊಂದು ಗುಲ್ಬರ್ಗಾದಿಂದ ಮೈಸೂರಿಗೆ ಬಲೂನ್ ಮಾರಲು ಬಂದಿತ್ತು. ಆ ಕುಟುಂಬ ದಸರಾ ವಸ್ತುಪ್ರದರ್ಶನ ಬಳಿ ಟೆಂಟ್‌ನಲ್ಲಿ ಮಲಗಿದ್ದಾಗ 9 ವರ್ಷದ ಬಾಲಕಿಯನ್ನು ಕಾರ್ತಿಕ್ ಎಳೆದೊಯ್ದು ಅತ್ಯಾಚಾರ ಮಾಡಿ, ಭೀಕರವಾಗಿ ಕೊಲೆ ಮಾಡಿದ್ದನು.

ಈ ಸಂಬಂಧ ನಜರಬಾದ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಬಳಿಕ ಸಿಸಿಟಿವಿ ದೃಶ್ಯ ಆಧಾರಿಸಿ ಕಾರ್ತಿಕ್​​ ನನ್ನು ಪೊಲೀಸರು ಘಟನೆ ನಡೆದು 24 ಗಂಟೆಗಳಲ್ಲಿ ಬಂಧಿಸಿದ್ದರು.

ಇನ್ನು ಈ ಕಾರ್ತಿಕ್‌ ಮೈಸೂರಿನ ಸಿದ್ದಲಿಂಗಪುರದ ನಿವಾಸಿ ಆಗಿದ್ದು, ಮೈಸೂರು-ಕೊಳ್ಳೇಗಾಲ ಮಾರ್ಗದ ಬಸ್‌ನಲ್ಲಿ ಕ್ಲೀನರ್​ ಕೂಡ ಆಗಿದ್ದ. ಈ ಪ್ರಕರಣ ರಾಜ್ಯದಲ್ಲಿ ಸಾಕಷ್ಟು ಚರ್ಚೆಗೆ ಗ್ರಾಸವಾಗಿತ್ತು. ಇದೀಗ ಕಾರ್ತಿಕ್​ ಅಪರಾಧಿ ಎಂದು ಸಾಬೀತಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಸ್ಟಿಂಗ್‌ ಆಪರೇಷನ್‌ ಪ್ರಕರಣ: ಮುಂದಿನ ನಿರ್ಧಾರ ಸಿಎಂ ಡಿಕೆ ಶಿವಕುಮಾರ್`ಗೆ ಬಿಟ್ಟ ಸಂಪುಟ, ಸಾಕ್ಷ್ಯಾಧಾರ ಮೇಲೆ ಮುಂದಿನ ಕ್ರಮ!

15 ವರ್ಷದ ಹಳೆ ವಿಡಿಯೋ ಅದಂತೆ, ರಾಜಕೀಯ ತೆವಲಿಗೆ ಮಾಡುತ್ತಿದ್ದಾರೆ: ಬಿಕೆ ಹರಿಪ್ರಸಾದ್ ಗರಂ

'ಕುಟುಂಬದ ಕನಸು ನನಸು': ‘ಜೈಲರ್ 2’ ಬಿಡುಗಡೆ ಬೆನ್ನಲ್ಲೇ ನಟಿ ಮೇಘನಾ ರಾಜ್ ಮಾತು!

ನೀಲಿ ಡ್ರಮ್‌ ಪ್ರಕರಣ: ಮರಣದಂಡನೆ ಶಿಕ್ಷೆ ಪ್ರಕಟ ಬಳಿಕ ಊಟ-ನಿದ್ರೆ ಬಿಟ್ಟು ಕಂಗಾಲಾಗಿರುವ ಮುಸ್ಕಾನ್-ಸಾಹಿಲ್!

'ಬಲಿತ ದಲಿತ'ನೇ, ನಿಮಗೆ, ನಿಮ್ಮಪ್ಪನಿಗೆ ಇನ್ನೆಷ್ಟು ವರ್ಷ ಮೀಸಲು ಕ್ಷೇತ್ರಗಳು ಬೇಕು?: ಖರ್ಗೆ ವಿರುದ್ಧ ಕುಮಾರಸ್ವಾಮಿ ಕೆಂಡಾಮಂಡಲ