ವರ್ಷಿತಾ 
ರಾಜ್ಯ

ಬೆಂಗಳೂರು: ಹಾಸ್ಟೆಲ್‌ನ 6ನೇ ಮಹಡಿಯಿಂದ ಬಿದ್ದು ವಿದ್ಯಾರ್ಥಿನಿ ಸಾವು; ತಂದೆ-ತಾಯಿಗೆ ಕೊನೆಯ ಸಂದೇಶ!

ಮೃತ ವಿದ್ಯಾರ್ಥಿನಿಯನ್ನು ಆಂಧ್ರ ಪ್ರದೇಶದ ಗುಂತಕಲ್ ಮೂಲದ ವರ್ಷಿತಾ(20) ಎಂದು ಗುರುತಿಸಲಾಗಿದೆ.

ಬೆಂಗಳೂರು: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ನಾಗದೇನಹಳ್ಳಿ ಸಮೀಪ ಗುರುವಾರ ರಾತ್ರಿ ಘೋರ ದುರಂತವೊಂದು ನಡೆದಿದ್ದು, ಹಾಸ್ಟೆಲ್ ಕಟ್ಟಡದ ಆರನೇ ಮಹಡಿಯಿಂದ ಬಿದ್ದು 20 ವರ್ಷದ ವಿದ್ಯಾರ್ಥಿನಿಯೊಬ್ಬಳು ಮೃತಪಟ್ಟಿದ್ದಾರೆ.

ಮೃತ ವಿದ್ಯಾರ್ಥಿನಿಯನ್ನು ಆಂಧ್ರ ಪ್ರದೇಶದ ಗುಂತಕಲ್ ಮೂಲದ ವರ್ಷಿತಾ(20) ಎಂದು ಗುರುತಿಸಲಾಗಿದೆ. ವರ್ಷಿತಾ ಗೀತಂ ವಿಶ್ವವಿದ್ಯಾಲಯದಲ್ಲಿ ಮೂರನೇ ವರ್ಷದ ಬಿಟೆಕ್ ಕಂಪ್ಯೂಟರ್ ಸೈನ್ಸ್ ವ್ಯಾಸಂಗ ಮಾಡುತ್ತಿದ್ದರು.

ಪೋಷಕರಿಗೆ ಕೊನೆಯ ಸಂದೇಶ

ವಿದ್ಯಾರ್ಥಿನಿ ಸಾವಿಗೂ ಮುನ್ನ ತನ್ನ ತಂದೆ ಹಾಗೂ ತಾಯಿಗೆ ಪೋನ್‌ನಲ್ಲಿ ಕೊನೆಯ ಸಂದೇಶ ಕಳುಹಿಸಿರುವ ಮಾಹಿತಿ ಲಭ್ಯವಾಗಿದೆ. ʻI Love You Dad, I Love You Momʼ ಎಂದು ಪೋಷಕರಿಗೆ ಸಂದೇಶ ಕಳುಹಿಸಿದ್ದಾಗಿ ತಿಳಿದುಬಂದಿದೆ.

ಮಾನಸಿಕ ಖಿನ್ನತೆಗೆ ಚಿಕಿತ್ಸೆ ಪಡೆಯುತ್ತಿದ್ದ ವಿದ್ಯಾರ್ಥಿನಿ

ವರ್ಷಿತಾ ಕಳೆದ ಕೆಲವು ದಿನಗಳಿಂದ ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದು, ಇದಕ್ಕೆ ಚಿಕಿತ್ಸೆ ಕೂಡ ಪಡೆಯುತ್ತಿದ್ದಳು. ಅಲ್ಲದೆ, ಕಳೆದ ಎರಡು ದಿನಗಳಿಂದ ಊಟವನ್ನೂ ಮಾಡಿರಲಿಲ್ಲ. ಗುರುವಾರ ರಾತ್ರಿ ಹಾಸ್ಟೆಲ್ ಕಟ್ಟಡದ ಆರನೇ ಮಹಡಿಯಿಂದ ಬಿದ್ದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಆದರೆ, ಸಾವಿಗೆ ನಿಖರ ಕಾರಣವೇನು ಎಂಬುದು ಪೊಲೀಸ್ ತನಿಖೆಯಿಂದ ತಿಳಿದುಬರಬೇಕಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಸರ್ಕಾರಿ ನೌಕರಿ ಅವಧಿ 10-15 ವರ್ಷಕ್ಕೆ ಲಿಮಿಟ್‌ ಮಾಡಿದ್ರೆ ಹೇಗೆ?: ಕುಟುಂಬಕ್ಕೊಂದು ಸರ್ಕಾರಿ ಉದ್ಯೋಗ ಕಲ್ಪಿಸಲು HDK ಹೊಸ ಚಿಂತನೆ!

CJP ತಿರಂಗಾ ಮಾರ್ಚ್‌ಗೆ ಬೆಂಗಳೂರು ಪೊಲೀಸರಿಂದ ಅನುಮತಿ ನಿರಾಕರಣೆ; ಹೈಕೋರ್ಟ್ ಆದೇಶ ಉಲ್ಲೇಖ

ಅಭಿಜೀತ್ ದೀಪ್ಕೆ ದೆಹಲಿ ನಿವಾಸಕ್ಕೆ ಪೊಲೀಸರ ಭೇಟಿ: CJP ತಿರಂಗಾ ಮೆರವಣಿಗೆಯಲ್ಲಿ ಪಾಲ್ಗೊಳ್ಳದಂತೆ ನೋಟಿಸ್ ಜಾರಿ!

'ಕರೆಂಟ್‌ ಇಲ್ಲ, ನೀರಿಲ್ಲ, ತೀವ್ರ ಬಡತನ, ಕಷ್ಟ, ಸಹೋದರಿಯ ಸಾವು, ಆದರೂ ಛಲ ಬಿಡದೆ 5 ವಿಕೆಟ್ ಪಡೆದ'; Ian Bishop ಹೇಳಿದ್ದು ಯಾರ ಬಗ್ಗೆ?

ಕರ್ನಾಟಕದ ನೂತನ ರಾಜ್ಯಪಾಲರಾಗಿ ಸುಧಾ ಯಾದವ್ ಪ್ರಮಾಣವಚನ ಸ್ವೀಕಾರ