ಅಪಘಾತದಲ್ಲಿ ನಜ್ಜುಗುಜ್ಜಾಗಿರುವ ಲಾರಿ. 
ರಾಜ್ಯ

ಮೈಸೂರು: ಲಾರಿ–ಬಸ್ ಮುಖಾಮುಖಿ ಡಿಕ್ಕಿ, ನಾಲ್ವರ ದುರ್ಮರಣ; 20ಕ್ಕೂ ಹೆಚ್ಚು ಮಂದಿಗೆ ಗಾಯ..!

ಘಟನೆಯಲ್ಲಿ 20ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದು, ಗಾಯಾಳುಗಳಲ್ಲಿ ಐವರ ಸ್ಥಿತಿ ಚಿಂತಾಜನಕವಾಗಿದೆ ಎಂದು ತಿಳಿದುಬಂದಿದೆ.

ಪಿರಿಯಾಪಟ್ಟಣ: ಮೈಸೂರು ಜಿಲ್ಲೆಯ ಪಿರಿಯಾಪಟ್ಟಣ ತಾಲ್ಲೂಕಿನ ಕಿರನಹಳ್ಳಿ ಗೇಟ್ ಬಳಿ ಲಾರಿ ಮತ್ತು ಸ್ಲೀಪರ್ ಕೋಚ್ ಬಸ್ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ನಾಲ್ವರು ದುರ್ಮರಣವನ್ನಪ್ಪಿರುವ ಘಟನೆ ಶುಕ್ರವಾರ ಬೆಳಗಿನ ಜಾವ ನಡೆದಿದೆ.

ಮೃತರನ್ನು ಬಸ್ ಚಾಲಕ ಸುನೀಲ್, ಕ್ಲೀನರ್ ಸದೇಶ್ ಹಾಗೂ ಕೇರಳದ ಅಫ್ತಾಬ್ ಎಂದು ಗುರುತಿಸಲಾಗಿದೆ. ಅಪಘಾತದಲ್ಲಿ ಮೃತಪಟ್ಟ ಮತ್ತೊಬ್ಬ ವ್ಯಕ್ತಿಯ ಗುರುತು ಇನ್ನೂ ಪತ್ತೆಯಾಗಿಲ್ಲ.

ಘಟನೆಯಲ್ಲಿ 20ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದು, ಗಾಯಾಳುಗಳಲ್ಲಿ ಐವರ ಸ್ಥಿತಿ ಚಿಂತಾಜನಕವಾಗಿದೆ ಎಂದು ತಿಳಿದುಬಂದಿದೆ.

ಬೆಂಗಳೂರಿನಿಂದ ಕೇರಳದ ಕ್ಯಾಲಿಕಟ್‌ಗೆ ತೆರಳುತ್ತಿದ್ದ ಕಾವೇರಿ ಸ್ಲೀಪರ್ ಕೋಚ್ ಬಸ್‌ಗೆ, ಪಿರಿಯಾಪಟ್ಟಣದಿಂದ ಮೈಸೂರಿನತ್ತ ಬರುತ್ತಿದ್ದ ಲಾರಿ ಮುಖಾಮುಖಿಯಾಗಿ ಡಿಕ್ಕಿ ಹೊಡೆದಿದೆ ಎಂದು ತಿಳಿದುಬಂದಿದೆ.

ಅಪಘಾತದ ತೀವ್ರತೆಗೆ ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಗಂಭೀರವಾಗಿ ಗಾಯಗೊಂಡ ಐವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಮೈಸೂರಿನ ಕೆ.ಆರ್. ಆಸ್ಪತ್ರೆಗೆ ದಾಖಲಿಸಲಾಗಿದೆ. ಇನ್ನುಳಿದ 20ಕ್ಕೂ ಹೆಚ್ಚು ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿವೆ ಎಂದು ತಿಳಿದುಬಂದಿದೆ.

ಬಸ್‌ನಲ್ಲಿ ಒಟ್ಟು 36 ಮಂದಿ ಪ್ರಯಾಣಿಸುತ್ತಿದ್ದು, ಅವರೆಲ್ಲರೂ ಕೇರಳದವರು ಎನ್ನಲಾಗಿದೆ. ಅಪಘಾತದ ಮಾಹಿತಿ ತಿಳಿದು ಹುಣಸೂರು ಉಪವಿಭಾಗದ ಡಿವೈಎಸ್‌ಪಿ ರವಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಮಧ್ಯಪ್ರಾಚ್ಯದಲ್ಲಿ ಹೆಚ್ಚುತ್ತಿರುವ ಶತ್ರುತ್ವ ತೀವ್ರ ಕಳವಳಕಾರಿ: ವಿಶ್ವಸಂಸ್ಥೆ ಭದ್ರತಾ ಮಂಡಳಿಯಲ್ಲಿ ಭಾರತ ಅಸಮಾಧಾನ..!

ಡಿಕೆಶಿ ಸಿಎಂ ವಿಚಾರ ಪ್ರಶ್ನಿಸಲು ನೀವು ಯಾರು? ಕಾಂಗ್ರೆಸ್ ಆಂತರಿಕ ವಿಚಾರದಲ್ಲಿ ಮೂಗು ತೂರಿಸುವ ಬದಲು ನಿಮ್ಮ ಕೆಲಸ ನೋಡಿಕೊಳ್ಳಿ: HDKಗೆ ಸಚಿವ ಚಲುವರಾಯಸ್ವಾಮಿ ತಿರುಗೇಟು

729 ಕೋಟಿ ರೂ. ವೆಚ್ಚದಲ್ಲಿ ಮೈಸೂರು ಫಿಲ್ಮ್ ಸಿಟಿ ನಿರ್ಮಾಣಕ್ಕೆ ಸಚಿವ ಸಂಪುಟ ಅನುಮೋದನೆ

ಕಬ್ಬು ಬೆಳೆಗಾರರೇ ತಾಳ್ಮೆಯಿಂದಿರಿ, ಸಮಸ್ಯೆ ಬಗೆಹರಿಸುವೆ: ಸಿಎಂ ಡಿಕೆ ಶಿವಕುಮಾರ್ ಭರವಸೆ

ಕರಾವಳಿಯಿಲ್ಲದೆ ಕರ್ನಾಟಕವಿಲ್ಲ, ಮಂಗಳೂರು ನಮ್ಮ ರಾಜ್ಯ ಹೆಮ್ಮೆ: ಸಿಎಂ ಡಿಕೆ ಶಿವಕುಮಾರ್