ಸಂಗ್ರಹ ಚಿತ್ರ 
ರಾಜ್ಯ

SC/ST ಬ್ಯಾಕ್‌ಲಾಗ್ ಹುದ್ದೆಗಳ ಶೀಘ್ರ ಭರ್ತಿಗೆ ಒಂದೇ ಅಧಿಸೂಚನೆ: ರಾಜ್ಯ ಸರ್ಕಾರ ಮಹತ್ವದ ನಿರ್ಧಾರ..!

ಎಸ್‌ಸಿ, ಎಸ್‌ಟಿ ಬ್ಯಾಕ್‌ಲಾಗ್ ಹುದ್ದೆಗಳ ಭರ್ತಿ ಕುರಿತು ಪರಿಶೀಲನೆ ನಡೆಸಿದ ಸಮಿತಿಯು, ಬಾಕಿ ಉಳಿದಿರುವ ಎಲ್ಲ ಹುದ್ದೆಗಳ ನೇಮಕಾತಿ ಪ್ರಕ್ರಿಯೆಯನ್ನು ತಕ್ಷಣ ಆರಂಭಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದೆ.

ಬೆಂಗಳೂರು: ರಾಜ್ಯದ ವಿವಿಧ ಇಲಾಖೆಗಳು, ವಿಶ್ವವಿದ್ಯಾಲಯಗಳು ಹಾಗೂ ಅನುದಾನಿತ ಶಿಕ್ಷಣ ಸಂಸ್ಥೆಗಳಲ್ಲಿ ದೀರ್ಘಕಾಲದಿಂದ ಖಾಲಿ ಉಳಿದಿರುವ ಪರಿಶಿಷ್ಟ ಜಾತಿ (SC) ಮತ್ತು ಪರಿಶಿಷ್ಟ ಪಂಗಡಗಳ (ST) ಬ್ಯಾಕ್‌ಲಾಗ್ ಹುದ್ದೆಗಳನ್ನು ಶೀಘ್ರವಾಗಿ ಭರ್ತಿ ಮಾಡಲು ರಾಜ್ಯ ಸರ್ಕಾರ ಮಹತ್ವದ ತೀರ್ಮಾನ ಕೈಗೊಂಡಿದೆ.

ಈ ಎಲ್ಲಾ ಹುದ್ದೆಗಳ ನೇಮಕಾತಿಗಾಗಿ ಒಂದೇ ಸಮಗ್ರ (ಸಿಂಗಲ್) ಅಧಿಸೂಚನೆಯನ್ನು ಹೊರಡಿಸಲು ಸಚಿವ ಸಂಪುಟ ಉಪಸಮಿತಿ ನಿರ್ಧರಿಸಿದೆ.

ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ ನೇತೃತ್ವದ ಸಚಿವ ಸಂಪುಟ ಉಪಸಮಿತಿಯು ಗುರುವಾರ ವಿಕಾಸಸೌಧದಲ್ಲಿ ನಡೆದ ಸಭೆಯಲ್ಲಿ ಈ ನಿರ್ಧಾರ ಕೈಗೊಂಡಿದೆ.

ಎಸ್‌ಸಿ, ಎಸ್‌ಟಿ ಬ್ಯಾಕ್‌ಲಾಗ್ ಹುದ್ದೆಗಳ ಭರ್ತಿ ಕುರಿತು ಪರಿಶೀಲನೆ ನಡೆಸಿದ ಸಮಿತಿಯು, ಬಾಕಿ ಉಳಿದಿರುವ ಎಲ್ಲ ಹುದ್ದೆಗಳ ನೇಮಕಾತಿ ಪ್ರಕ್ರಿಯೆಯನ್ನು ತಕ್ಷಣ ಆರಂಭಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದೆ.

ಜಿಲ್ಲಾವಾರು ಪ್ರತ್ಯೇಕ ಅಧಿಸೂಚನೆ ಹೊರಡಿಸುವ ಬದಲು ಇಡೀ ರಾಜ್ಯಕ್ಕೆ ಅನ್ವಯವಾಗುವಂತೆ ಒಂದೇ ಅಧಿಸೂಚನೆ ಪ್ರಕಟಿಸಬೇಕು ಎಂದು ಸಮಿತಿ ನಿರ್ದೇಶಿಸಿದೆ. ಹಾಗೆಯೇ, ಈ ಹುದ್ದೆಗಳನ್ನು ಪ್ರಸ್ತುತ ನಡೆಯುತ್ತಿರುವ ನೇಮಕಾತಿ ಪ್ರಕ್ರಿಯೆಯೊಂದಿಗೆ ವಿಲೀನಗೊಳಿಸಬಾರದು ಎಂದು ಸ್ಪಷ್ಟಪಡಿಸಿದೆ.

ಅಧಿಸೂಚನೆ ಪ್ರಕಟಿಸಿದ ಬಳಿಕ ಜಿಲ್ಲಾವಾರು ಹುದ್ದೆಗಳ ಹಂಚಿಕೆ ಕುರಿತು ನಿರ್ಧಾರ ಕೈಗೊಳ್ಳಬಹುದು ಎಂದು ಸಚಿವರು ತಿಳಿಸಿದ್ದಾರೆ.

ಅನುದಾನಿತ ಶಾಲಾ-ಕಾಲೇಜುಗಳಲ್ಲಿ ಹೆಚ್ಚಿನ ಸಂಖ್ಯೆಯ ಬ್ಯಾಕ್‌ಲಾಗ್ ಹುದ್ದೆಗಳು ಇನ್ನೂ ಖಾಲಿ ಉಳಿದಿರುವುದಕ್ಕೂ ಸಮಿತಿ ಅಸಮಾಧಾನ ವ್ಯಕ್ತಪಡಿಸಿದೆ. ನೇಮಕಾತಿ ಪ್ರಕ್ರಿಯೆಯಲ್ಲಿ ವಿಳಂಬ ಮಾಡುತ್ತಿರುವ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡಿದೆ.

ಯಾವುದೇ ವಿಳಂಬವಿಲ್ಲದೆ ಈ ಹುದ್ದೆಗಳನ್ನು ಭರ್ತಿ ಮಾಡುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಲಾಗಿದೆ. ನೇಮಕಾತಿ ಪ್ರಕ್ರಿಯೆಯನ್ನು ನಿರ್ಲಕ್ಷಿಸುವ ಶಿಕ್ಷಣ ಸಂಸ್ಥೆಗಳಿಗೆ ನೀಡುವ ಸರ್ಕಾರಿ ಅನುದಾನವನ್ನು ಸ್ಥಗಿತಗೊಳಿಸುವ ಎಚ್ಚರಿಕೆಯನ್ನೂ ಸಮಿತಿ ನೀಡಿದೆ.

ಎಲ್ಲ ಇಲಾಖೆಗಳಲ್ಲಿನ ಬ್ಯಾಕ್‌ಲಾಗ್ ಹುದ್ದೆಗಳ ವಿವರಗಳನ್ನು ಸಂಗ್ರಹಿಸಲು ವಿಶೇಷ ಅಭಿಯಾನ ನಡೆಸಲು ಸಭೆಯಲ್ಲಿ ತೀರ್ಮಾನಿಸಲಾಗಿದೆ. ನೇಮಕಾತಿ ಪ್ರಕ್ರಿಯೆಯನ್ನು ತ್ವರಿತಗೊಳಿಸಿ, ಬಾಕಿ ಇರುವ ಎಲ್ಲ ಹುದ್ದೆಗಳನ್ನು 18 ತಿಂಗಳೊಳಗೆ ಭರ್ತಿ ಮಾಡುವ ಗುರಿ ನಿಗದಿಪಡಿಸಲಾಗಿದೆ.

ಬ್ಯಾಕ್‌ಲಾಗ್ ಹುದ್ದೆಗಳ ನೇಮಕಾತಿಯಲ್ಲಿ ಅರ್ಹತೆ ಮತ್ತು ವಯೋಮಾನದ ಮಾನದಂಡಗಳನ್ನು ಮಾತ್ರ ಪರಿಗಣಿಸುವ ಬಗ್ಗೆಯೂ ಸಭೆಯಲ್ಲಿ ಚರ್ಚಿಸಲಾಗಿದೆ. ಈ ಹುದ್ದೆಗಳು ಈಗಾಗಲೇ ಮಂಜೂರಾಗಿರುವ ಬಾಕಿ ಹುದ್ದೆಗಳಾಗಿರುವುದರಿಂದ, ಹಣಕಾಸು ಇಲಾಖೆಯಿಂದ ಹೊಸದಾಗಿ ಅನುಮೋದನೆ ಪಡೆಯುವ ಅಗತ್ಯವಿಲ್ಲ. ನೇರವಾಗಿ ನೇಮಕಾತಿ ಪ್ರಕ್ರಿಯೆ ಆರಂಭಿಸಬಹುದು ಎಂದು ಸಭೆಯಲ್ಲಿ ಅಭಿಪ್ರಾಯ ವ್ಯಕ್ತವಾಗಿದೆ.

ಅನುದಾನಿತ ಶಿಕ್ಷಣ ಸಂಸ್ಥೆಗಳ ಆಡಳಿತ ಮಂಡಳಿಗಳು ಖಾಲಿ ಹುದ್ದೆಗಳನ್ನು ಭರ್ತಿ ಮಾಡಲು ಸಿದ್ಧವಿದ್ದರೂ, ಸರ್ಕಾರಿ ಅಧಿಕಾರಿಗಳು ನೇಮಕಾತಿಗೆ ಅನುಮತಿ ನೀಡದೆ ವಿಳಂಬ ಮಾಡುತ್ತಿದ್ದಾರೆ ಎಂಬ ಆರೋಪಗಳ ಬಗ್ಗೆಯೂ ಸಚಿವರು ಅಧಿಕಾರಿಗಳನ್ನು ಪ್ರಶ್ನಿಸಿದ್ದಾರೆ.

ನೇಮಕಾತಿ ಪ್ರಕ್ರಿಯೆಗೆ ಅಡ್ಡಿಪಡಿಸುತ್ತಿರುವುದೇಕೆ ಎಂದು ತರಾಟೆಗೆ ತೆಗೆದುಕೊಂಡ ಸಚಿವರು, ಹುದ್ದೆಗಳ ಭರ್ತಿಗೆ ಅಗತ್ಯ ಸಹಕಾರ ನೀಡುವಂತೆ ಸೂಚಿಸಿದ್ದಾರೆ.

ತಾಂತ್ರಿಕ ಶಿಕ್ಷಣ ಇಲಾಖೆಯ ನಿರ್ದೇಶಕರು ಸಭೆಗೆ ಗೈರಾಗಿದ್ದಕ್ಕೂ ಸಮಿತಿ ಅಸಮಾಧಾನ ವ್ಯಕ್ತಪಡಿಸಿದೆ. ಈ ಹಿನ್ನೆಲೆಯಲ್ಲಿ ಸಂಬಂಧಪಟ್ಟ ಅಧಿಕಾರಿಗೆ ನೋಟಿಸ್ ಜಾರಿ ಮಾಡುವಂತೆ ಸೂಚಿಸಲಾಗಿದೆ.

ಸಭೆಯಲ್ಲಿ ಸಚಿವರಾದ ಕೆ.ಎಚ್. ಮುನಿಯಪ್ಪ, ಸತೀಶ್ ಜಾರಕಿಹೊಳಿ, ಟಿ. ರಘುಮೂರ್ತಿ ಮತ್ತು ಕೆ.ಎಸ್. ಬಸವಂತಪ್ಪ ಪಾಲ್ಗೊಂಡಿದ್ದು, ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಗೌರವ್ ಗುಪ್ತ ಸೇರಿದಂತೆ ಇತರ ಅಧಿಕಾರಿಗಳು ಹಾಗೂ ಎಸ್‌ಸಿಎಸ್‌ಪಿ-ಟಿಎಸ್‌ಪಿ ನೋಡಲ್ ಏಜೆನ್ಸಿಯ ಸಲಹೆಗಾರ ಡಾ. ಇ. ವೆಂಕಟಯ್ಯ ಕೂಡ ಉಪಸ್ಥಿತರಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

‘ಸ್ಪರ್ಧೆಗೆ ಯಾರೇ ಬರಲಿ, ಹೆದರುವ ಪ್ರಶ್ನೆಯೇ ಇಲ್ಲ, ಕಾನೂನು ಪಾಲನೆ ಕಡ್ಡಾಯ: ಎಲಾನ್ ಮಸ್ಕ್ 'ಏಕಸ್ವಾಮ್ಯ' ಆರೋಪಕ್ಕೆ Reliance ತಿರುಗೇಟು..!'

ಮಧ್ಯಪ್ರಾಚ್ಯದಲ್ಲಿ ಹೆಚ್ಚುತ್ತಿರುವ ಶತ್ರುತ್ವ ತೀವ್ರ ಕಳವಳಕಾರಿ: ವಿಶ್ವಸಂಸ್ಥೆ ಭದ್ರತಾ ಮಂಡಳಿಯಲ್ಲಿ ಭಾರತ ಅಸಮಾಧಾನ..!

ಡಿಕೆಶಿ ಸಿಎಂ ವಿಚಾರ ಪ್ರಶ್ನಿಸಲು ನೀವು ಯಾರು? ಕಾಂಗ್ರೆಸ್ ಆಂತರಿಕ ವಿಚಾರದಲ್ಲಿ ಮೂಗು ತೂರಿಸುವ ಬದಲು ನಿಮ್ಮ ಕೆಲಸ ನೋಡಿಕೊಳ್ಳಿ: HDKಗೆ ಸಚಿವ ಚಲುವರಾಯಸ್ವಾಮಿ ತಿರುಗೇಟು

CJP ಯ 'ತಿರಂಗಾ ಮೆರವಣಿಗೆ: 6,000 ಪೊಲೀಸರು, 220 ಸಿಎಪಿಎಫ್ ತುಕಡಿಗಳ ನಿಯೋಜನೆ, ಸಿಸಿಟಿವಿ ಕಣ್ಗಾವಲು!

729 ಕೋಟಿ ರೂ. ವೆಚ್ಚದಲ್ಲಿ ಮೈಸೂರು ಫಿಲ್ಮ್ ಸಿಟಿ ನಿರ್ಮಾಣಕ್ಕೆ ಸಚಿವ ಸಂಪುಟ ಅನುಮೋದನೆ