ಗಾಳಿ ಆಂಜನೇಯ ಸ್ವಾಮಿ ದೇವಸ್ಥಾನ 
ರಾಜ್ಯ

ಮುಜರಾಯಿ ಇಲಾಖೆ ಸುಪರ್ದಿಗೆ ಗಾಳಿ ಆಂಜನೇಯ ಸ್ವಾಮಿ ದೇವಸ್ಥಾನ: ಹೈಕೋರ್ಟ್​ನಲ್ಲಿ ಆದೇಶ ರದ್ದು!

2025ರ ಜುಲೈ 8ರಂದು ರಾಜ್ಯ ಸರ್ಕಾರ ಪ್ರಸಿದ್ಧ ಗಾಳಿ ಆಂಜನೇಯ ಸ್ವಾಮಿ ದೇವಸ್ಥಾನವನ್ನು ಮುಜರಾಯಿ ಇಲಾಖೆಯ ಸುಪರ್ದಿಗೆ ಒಪ್ಪಿಸಿ ಹೊರಡಿಸಿದ್ದ ಆದೇಶವನ್ನು ಹೈಕೋರ್ಟ್ ರದ್ದುಪಡಿಸಿದೆ.

ಬೆಂಗಳೂರು: 2025ರ ಜುಲೈ 8ರಂದು ರಾಜ್ಯ ಸರ್ಕಾರ ಪ್ರಸಿದ್ಧ ಗಾಳಿ ಆಂಜನೇಯ ಸ್ವಾಮಿ ದೇವಸ್ಥಾನವನ್ನು ಮುಜರಾಯಿ ಇಲಾಖೆಯ ಸುಪರ್ದಿಗೆ ಒಪ್ಪಿಸಿ ಹೊರಡಿಸಿದ್ದ ಆದೇಶವನ್ನು ಹೈಕೋರ್ಟ್ ರದ್ದುಪಡಿಸಿದೆ.

ಗಾಳಿ ಆಂಜನೇಯ ಸ್ವಾಮಿ ದೇವಸ್ಥಾನದ ಟ್ರಸ್ಟ್‌ನ ಸಂಚಾಲಕರಾದ ಬಿ ಪಿ ನಾಗರಾಜು ಹಾಗೂ ಇತರೆ ಟ್ರಸ್ಟಿಗಳು ರಾಜ್ಯ ಸರ್ಕಾರದ ಆದೇಶವನ್ನು ರದ್ದುಪಡಿಸುವಂತೆ ಕೋರಿ ಹೈಕೋರ್ಟ್​ಗೆ ಅರ್ಜಿ ಸಲ್ಲಿಸಿದ್ದರು.

ಇಂದು ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಸಿ ಎಂ ಪೂಣಚ್ಚ ಅವರಿದ್ದ ಏಕಸದಸ್ಯ ನ್ಯಾಯಪೀಠ ಈ ಆದೇಶ ನೀಡಿದೆ. ದೇವಸ್ಥಾನವನ್ನು ಮುಜರಾಯಿ ಇಲಾಖೆಯ ಸುಪರ್ದಿಗೆ ಪಡೆದುಕೊಂಡಿರುವ ಆದೇಶದಲ್ಲಿ ಕಾನೂನು ಲೋಪಗಳು ಇರುವ ಹಿನ್ನೆಲೆಯಲ್ಲಿ ಆದೇಶವನ್ನು ರದ್ದುಪಡಿಸಲಾಗಿದೆ.

ಕೋರ್ಟ್ ಆದೇಶ ಪ್ರಕಟಗೊಂಡ ಒಂದು ವಾರದಲ್ಲಿ ಆಡಳಿತಾಧಿಕಾರಿಯು ದೇವಸ್ಥಾನದ ಆಡಳಿತ ನಿರ್ವಹಣೆಯನ್ನು ಸಂಬಂಧಪಟ್ಟವರಿಗೆ ಬಿಟ್ಟುಕೊಡಬೇಕು ಎಂದು ನ್ಯಾಯಪೀಠ ನಿರ್ದೇಶನ ನೀಡಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಭಾರತ ತೊರೆಯುವಂತೆ' ನೋಟಿಸ್ ಕಾನೂನು ಬಾಹಿರ: ಹೈಕೋರ್ಟ್‌ ಮೆಟ್ಟಿಲೇರಿದ ನಟ ಇಮ್ರಾನ್ ಖಾನ್

ಈ ದೇಶದಲ್ಲಿ ಸ್ಟಿಂಗ್ ಆಪರೇಷನ್ 'ಪಿತಾಮಹ' ಅಂತ ಯಾರಾದ್ರೂ ಇದ್ರೆ ಅದು ಮೋದಿ: ಹಳೇ ಘಟನೆ ಕೆದಕಿದ ಬಿಕೆ ಹರಿಪ್ರಸಾದ್

'ಸ್ಟಿಂಗ್' ಹಿಂದೆ ಕುಮಾರಸ್ವಾಮಿಯೇ ಯಾಕೆ ಇರಬಾರದು? ಅವರ ಬಳಿ ದಾಖಲೆ ಇದ್ದರೇ ನೀಡಲಿ: ಪ್ರಿಯಾಂಕ್ ಖರ್ಗೆ

ನಾನೇ ವಿಡಿಯೋ ಮಾಡಿದ್ದೇನೆಂದು ಕಿಂಗ್ ಪಿನ್ ಹೇಳಿದ್ದಾರೆ; ಇದನ್ನೆಲ್ಲ ನೋಡಿ ಸಿದ್ದರಾಮಯ್ಯ ರಕ್ತ ಕುದಿಯುತ್ತಿಲ್ವಾ?: HDK

ಬೆಂಗಳೂರು ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಅ. 22ರ ವರೆಗೆ ಭಾರೀ ಮಳೆ; ಯೆಲ್ಲೊ ಅಲರ್ಟ್ ಘೋಷಣೆ