ಸಿಜೆಐ ಸೂರ್ಯ ಕಾಂತ್ 
ರಾಜ್ಯ

CJI ಸೂರ್ಯ ಕಾಂತ್ ಉಪಸ್ಥಿತಿಗೆ ಆಕ್ರೋಶ: NLSIU ಘಟಿಕೋತ್ಸವಕ್ಕೆ 105 ವಿದ್ಯಾರ್ಥಿಗಳು ಗೈರು..!

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ವಿಶ್ವವಿದ್ಯಾಲಯದ 2026ನೇ ಸಾಲಿನ 105 ಸಾಮಾನ್ಯ ಪದವೀಧರರು ಶನಿವಾರ ನಡೆದ ಘಟಿಕೋತ್ಸವಕ್ಕೆ ಗೈರಾಗಿದ್ದು, ಅವರ ಪದವಿಗಳನ್ನು ಗೈರುಹಾಜರಿಯಲ್ಲೇ ಪ್ರದಾನ ಮಾಡಲಾಯಿತು.

ಬೆಂಗಳೂರು: ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿ (NLSIU) ನ 2026 ರ ಘಟಿಕೋತ್ಸವಕ್ಕೆ ಭಾರತದ ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ಅವರಿಗೆ ಆಹ್ವಾನ ನೀಡಿದ್ದನ್ನು ವಿರೋಧಿಸಿ 105 ಪದವಿ ವಿದ್ಯಾರ್ಥಿಗಳು ಸಮಾರಂಭಕ್ಕೆ ಗೈರುಹಾಜರಾಗುವ ಮೂಲಕ ತಮ್ಮ ಪ್ರತಿಭಟನೆಯನ್ನು ದಾಖಲಿಸಿದ್ದಾರೆ.

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ವಿಶ್ವವಿದ್ಯಾಲಯದ 2026ನೇ ಸಾಲಿನ 105 ಸಾಮಾನ್ಯ ಪದವೀಧರರು ಶನಿವಾರ ನಡೆದ ಘಟಿಕೋತ್ಸವಕ್ಕೆ ಗೈರಾಗಿದ್ದು, ಅವರ ಪದವಿಗಳನ್ನು ಗೈರುಹಾಜರಿಯಲ್ಲೇ ಪ್ರದಾನ ಮಾಡಲಾಯಿತು.

ಭಾರತದ ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್ ಅವರು ಘಟಿಕೋತ್ಸವದಲ್ಲಿ ಪಾಲ್ಗೊಳ್ಳುವುದನ್ನು ವಿರೋಧಿಸಿ 2026ನೇ ಸಾಲಿನ ಪದವೀಧರರು ಹಾಗೂ ಪ್ರಸ್ತುತ ಮತ್ತು ಹಳೆಯ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಿದ್ದರು.

ಇದರ ಬೆನ್ನಲ್ಲೇ ವಿಶ್ವವಿದ್ಯಾಲಯವು ಘಟಿಕೋತ್ಸವವನ್ನು ತಾತ್ಕಾಲಿಕವಾಗಿ ರದ್ದುಗೊಳಿಸಿತ್ತು. ಬಳಿಕ ಶನಿವಾರ ಜ್ಞಾನಜ್ಯೋತಿ ಸಭಾಂಗಣದಲ್ಲಿ ಕಾರ್ಯಕ್ರಮ ನಡೆಯಿತು.

ಈ ವರ್ಷದ ಘಟಿಕೋತ್ಸವ ನಡೆಯುವುದೇ ಎಂಬ ಬಗ್ಗೆ ಆರಂಭದಿಂದಲೂ ಅನಿಶ್ಚಿತತೆ ಇತ್ತು. ಅಕ್ಟೋಬರ್ 7ರಂದು ವಿಶ್ವವಿದ್ಯಾಲಯವು ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್ ಹಾಗೂ ನಟಿ ಅರುಂಧತಿ ನಾಗ್ ಅವರು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಅಧಿಕೃತ ಪತ್ರವ್ಯವಹಾರದ ಮೂಲಕ ದೃಢಪಡಿಸಿತ್ತು, ಈ ಮೂಲಕ ಸಿಜೆಐ ಘಟಿಕೋತ್ಸವದ ಅಧ್ಯಕ್ಷತೆ ವಹಿಸುವುದು ಸ್ಪಷ್ಟವಾಗಿತ್ತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಕೋಲ್ಕತ್ತಾ ಕಾಲ್ತುಳಿತ ಪ್ರಕರಣ: ಸಾವಿನ ಸಂಖ್ಯೆ 19ಕ್ಕೆ ಏರಿಕೆ; ಆಯೋಜಕರು ಸೇರಿ 12 ಮಂದಿ ವಶಕ್ಕೆ, ಮೃತರ ಕುಟುಂಬಕ್ಕೆ ತಲಾ ರೂ.2 ಲಕ್ಷ ಪರಿಹಾರ ಘೋಷಣೆ

ತಲಕಾವೇರಿ ಬ್ರಹ್ಮಕುಂಡಿಕೆಯಲ್ಲಿ ತೀರ್ಥೋದ್ಭವ: ಪವಿತ್ರ ಕ್ಷಣಕ್ಕೆ ಸಾಕ್ಷಿಯಾದ ಸಾವಿರಾರು ಭಕ್ತರು..!

Cockroach Janta Partyಗೆ ಕಾಂಗ್ರೆಸ್ ಹಣಕಾಸು ನೆರವು, ಕರ್ನಾಟಕವೇನು ATM ಆಗಿದೆಯೇ..?

ಭಾರತದ ವಿರುದ್ಧದ ಷಡ್ಯಂತ್ರಗಳನ್ನು ಗಂಭೀರವಾಗಿ ಪರಿಗಣಿಸಿ, ವಿದೇಶಿ ಹಣದ ಹರಿವಿಗೆ ಕಡಿವಾಣ ಹಾಕಿ: ಕೇಂದ್ರಕ್ಕೆ ಸಂಸದ ಬೊಮ್ಮಾಯಿ ಆಗ್ರಹ

ಸಿದ್ದರಾಮಯ್ಯ ವಿರುದ್ಧ ಸ್ಟಿಂಗ್ ಆಪರೇಷನ್‌ ಕೇಸ್‌: ಆರೋಪಿಗಳ ಬಂಧನಕ್ಕೆ HDK ಪಟ್ಟು, ವಿಜಯದಶಮಿ ಬಳಿಕ ರಾಜ್ಯಾದ್ಯಂತ ಹೋರಾಟದ ಎಚ್ಚರಿಕೆ..!