ಬಸವರಾಜ ಬೊಮ್ಮಾಯಿ  
ರಾಜ್ಯ

ಭಾರತದ ವಿರುದ್ಧದ ಷಡ್ಯಂತ್ರಗಳನ್ನು ಗಂಭೀರವಾಗಿ ಪರಿಗಣಿಸಿ, ವಿದೇಶಿ ಹಣದ ಹರಿವಿಗೆ ಕಡಿವಾಣ ಹಾಕಿ: ಕೇಂದ್ರಕ್ಕೆ ಸಂಸದ ಬೊಮ್ಮಾಯಿ ಆಗ್ರಹ

ನೇಪಾಳ, ಶ್ರೀಲಂಕಾ ಮತ್ತು ಬಾಂಗ್ಲಾದೇಶದಂತಹ ನೆರೆಯ ರಾಷ್ಟ್ರಗಳಿಗೆ ವಿದೇಶಿ ದೇಣಿಗೆ ಹರಿದುಬಂದಿರುವುದು ಸಾಬೀತಾಗಿದೆ, ಕಳೆದ ಹತ್ತು ವರ್ಷಗಳಿಂದ, ವಿಶೇಷವಾಗಿ ಸೊರೊಸ್ ಫೌಂಡೇಷನ್‌ನಂತಹ ಸಂಸ್ಥೆಗಳಿಂದ ಹಣ ಹರಿದುಬರುತ್ತಿದೆ ಎಂಬ ಆರೋಪಗಳಿವೆ.

ಹುಬ್ಬಳ್ಳಿ: ವಿದೇಶಿ ಹಣಕಾಸಿನ ನೆರವು ಪಡೆದು ದೇಶದ ವಿರುದ್ಧ ಸಂಚು ರೂಪಿಸಲಾಗುತ್ತಿದೆ ಎಂಬ ಆರೋಪಗಳನ್ನು ಕೇಂದ್ರ ಸರ್ಕಾರ ಗಂಭೀರವಾಗಿ ಪರಿಗಣಿಸಬೇಕು. ಇಂತಹ ಚಟುವಟಿಕೆಗಳನ್ನು ಸಂಪೂರ್ಣವಾಗಿ ತಡೆಯಲು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಅವರು ಶನಿವಾರ ಆಗ್ರಹಿಸಿದ್ದಾರೆ.

ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಭಾರತದ ವಿರುದ್ಧ ನಡೆಯುತ್ತಿರುವ ಕೆಲವು ಸಂಚುಗಳು ಹಾಗೂ ಸ್ವಯಂಸೇವಾ ಸಂಸ್ಥೆಗಳು ವಿದೇಶಗಳಿಂದ ಪಡೆಯುತ್ತಿರುವ ಹಣಕಾಸಿನ ನೆರವಿನ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಿದರು.

ಕೆಲವು ರಾಜಕೀಯ ಪಕ್ಷಗಳು ಮತ್ತು ದೇಶವಿರೋಧಿ ಚಟುವಟಿಕೆಗಳಿಗೆ ವಿದೇಶಗಳಿಂದ ಹಣ ಬರುತ್ತಿದೆ ಎಂದು ಆರೋಪಿಸಿದರು.

ನೇಪಾಳ, ಶ್ರೀಲಂಕಾ ಮತ್ತು ಬಾಂಗ್ಲಾದೇಶದಂತಹ ನೆರೆಯ ರಾಷ್ಟ್ರಗಳಿಗೆ ವಿದೇಶಿ ದೇಣಿಗೆ ಹರಿದುಬಂದಿರುವುದು ಸಾಬೀತಾಗಿದೆ, ಕಳೆದ ಹತ್ತು ವರ್ಷಗಳಿಂದ, ವಿಶೇಷವಾಗಿ ಸೊರೊಸ್ ಫೌಂಡೇಷನ್‌ನಂತಹ ಸಂಸ್ಥೆಗಳಿಂದ ಹಣ ಹರಿದುಬರುತ್ತಿದೆ ಎಂಬ ಆರೋಪಗಳಿವೆ. ಸ್ವಯಂಸೇವಾ ಸಂಸ್ಥೆಗಳಿಗೆ ವಿದೇಶಿ ಹಣ ಬರುವುದನ್ನು ನಿಯಂತ್ರಿಸಲು ಕೇಂದ್ರ ಸರ್ಕಾರ ಕಟ್ಟುನಿಟ್ಟಿನ ನಿಯಮಗಳನ್ನು ಜಾರಿಗೆ ತಂದಿರುವಂತೆಯೇ, ದೇಶದ ವಿರುದ್ಧದ ಚಟುವಟಿಕೆಗಳಿಗೆ ಹರಿದುಬರುವ ಹಣವನ್ನೂ ತಡೆಯಲು ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

ರಾಹುಲ್ ಗಾಂಧಿ ವಿದೇಶಗಳಿಗೆ ಹೋದಾಗಲೆಲ್ಲ ದೇಶದ ವಿರುದ್ಧ ಮಾತನಾಡುತ್ತಾರೆ. ಭಾರತದಲ್ಲಿ ಪ್ರಜಾಪ್ರಭುತ್ವವೇ ಇಲ್ಲ ಎಂಬಂತೆ ಬಿಂಬಿಸಲು ಪ್ರಯತ್ನಿಸುತ್ತಾರೆ. ದೇಶದಲ್ಲಿ ಪ್ರಜಾಪ್ರಭುತ್ವ ಇಲ್ಲದಿದ್ದರೆ ಅವರು ಹೇಗೆ ವಿರೋಧ ಪಕ್ಷದ ನಾಯಕರಾಗಲು ಸಾಧ್ಯವಾಗುತ್ತಿತ್ತು? ಎರಡು ರಾಜ್ಯಗಳಿಂದ ಚುನಾವಣೆಗೆ ಸ್ಪರ್ಧಿಸಿರುವುದೇ ದೇಶದಲ್ಲಿ ಪ್ರಜಾಪ್ರಭುತ್ವ ಜೀವಂತವಾಗಿದೆ ಎಂಬುದಕ್ಕೆ ಸಾಕ್ಷಿ. ಹೀಗಿರುವಾಗ ಅವರು ಸುಳ್ಳು ಹೇಳುತ್ತಿದ್ದಾರೆ ಎಂದು ಟೀಕಿಸಿದರು.

ಚುನಾವಣೆಗಳಲ್ಲಿ ಬಿಜೆಪಿಯನ್ನು ಎದುರಿಸಲು ಸಾಧ್ಯವಾಗದ ಕಾಂಗ್ರೆಸ್ ಪಕ್ಷವು ಕೆಲವು ಸಂಘಟನೆಗಳ ಬೆಂಬಲದೊಂದಿಗೆ ಜನರಲ್ಲಿ ಅಭದ್ರತೆ ಸೃಷ್ಟಿಸಲು ಪ್ರಯತ್ನಿಸುತ್ತಿದೆ. ಈಗ ಎರಡೂ ಒಂದೇ ಎಂದು ಹೇಳುತ್ತಿದ್ದಾರೆ. ಏಕೆಂದರೆ ಎರಡೂ ತೀವ್ರವಾಗಿ ವಿಫಲವಾಗಿವೆ ಎಂದು ಹೇಳಿದರು.

ರೈತರ ಸಮಸ್ಯೆ ಪರಿಹರಿಸುವ ಜವಾಬ್ದಾರಿಯಿಂದ ರಾಜ್ಯ ಸರ್ಕಾರ ನುಣುಚಿಕೊಳ್ಳುವಂತಿಲ್ಲ

ಇದೇ ವೇಳೆ ಕಬ್ಬು ಬೆಳೆಗಾರರು ಸಂಕಷ್ಟದಲ್ಲಿರುವಾಗ ರಾಜ್ಯ ಸರ್ಕಾರ ತಕ್ಷಣ ರಾಜ್ಯ ಸಲಹಾ ಬೆಲೆ (ಎಸ್‌ಎಪಿ) ನಿಗದಿಪಡಿಸಿ ಅವರ ನೆರವಿಗೆ ಧಾವಿಸುವುದು ಕರ್ತವ್ಯ ಎಂದು ಬೊಮ್ಮಾಯಿ ಅವರು ಹೇಳಿದರು.

ಕಬ್ಬಿನಿಂದ ಸಕ್ಕರೆ ಇಳುವರಿ ಮತ್ತು ಬೆಲೆ ನಿಗದಿ ವಿಚಾರದಲ್ಲಿ ರೈತರು ಹಾಗೂ ಸಕ್ಕರೆ ಕಾರ್ಖಾನೆಗಳ ನಡುವೆ ಸ್ಪಷ್ಟ ಸೂತ್ರ ರೂಪಿಸಿದರೆ ಮಾತ್ರ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು ಸಾಧ್ಯ ಎಂದು ಅಭಿಪ್ರಾಯಪಟ್ಟರು.

ಕಬ್ಬು ಬೆಳೆಗಾರರ ಹಿತಾಸಕ್ತಿ ಕಾಪಾಡಲು ರಾಜ್ಯ ಸರ್ಕಾರ ತಕ್ಷಣ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ ಅವರು, ಕನಿಷ್ಠ ಬೆಂಬಲ ಬೆಲೆ ಹಾಗೂ ಕಬ್ಬು ಬೆಳೆಗಾರರ ರಕ್ಷಣೆಗಾಗಿ ರಚಿಸಿರುವ ಸಮಿತಿಯ ಸಭೆ ಸೋಮವಾರ ನಡೆಯಲಿದೆ ಎಂದು ತಿಳಿಸಿದರು. ಸಭೆಯಲ್ಲಿ ಎಲ್ಲ ರೈತ ಮುಖಂಡರೊಂದಿಗೆ ಚರ್ಚಿಸಿ, ಒಂದು ವಾರದೊಳಗೆ ಸೂಕ್ತ ಪರಿಹಾರ ಕಂಡುಕೊಳ್ಳಲಾಗುವುದು ಎಂದರು.

ಇತರ ರಾಜ್ಯಗಳ ಮಾದರಿಯಲ್ಲಿ ಕರ್ನಾಟಕ ಸರ್ಕಾರವೂ ಸಕ್ಕರೆ ಉತ್ಪಾದನೆಯ ಆಧಾರದ ಮೇಲೆ ಬೆಂಬಲ ಬೆಲೆ ಘೋಷಿಸಲು ಕ್ರಮ ಕೈಗೊಳ್ಳಬೇಕು. ಹಿಂದಿನ ಬಾರಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬೆಂಬಲ ಬೆಲೆ ನೀಡಿದ್ದರು ಎಂದು ಸ್ಮರಿಸಿದರು.

ಕಬ್ಬು ಬೆಳೆಗಾರರ ಸಮಸ್ಯೆಗಳು, ಕಾರ್ಖಾನೆಗಳಲ್ಲಿನ ಸಕ್ಕರೆ ಇಳುವರಿ, ತೂಕ ಹಾಗೂ ಬೆಲೆ ನಿಗದಿ ವಿಚಾರದಲ್ಲಿ ರೈತರು ಮತ್ತು ಕಾರ್ಖಾನೆ ಮಾಲೀಕರ ನಡುವೆ ಸ್ಪಷ್ಟವಾದ ವ್ಯವಸ್ಥಿತ ಸೂತ್ರ ರೂಪಿಸಬೇಕು ಎಂದು ಆಗ್ರಹಿಸಿದರು.

ಪ್ರತಿ ವರ್ಷ ಕಬ್ಬಿನ ಬೆಲೆ ನಿಗದಿಗೆ ಸಂಬಂಧಿಸಿದಂತೆ ಗೊಂದಲ ಉಂಟಾಗುವುದನ್ನು ತಪ್ಪಿಸಲು ಸಕ್ಕರೆ ಮಾರಾಟಕ್ಕೆ ಸಂಬಂಧಿಸಿದ ಕನಿಷ್ಠ ಬೆಂಬಲ ಬೆಲೆ ಸೂತ್ರ ಹಾಗೂ ಕಬ್ಬಿನ ಬೆಲೆ ನಿಗದಿಗೆ ಪ್ರತ್ಯೇಕ ಮತ್ತು ನಿರ್ದಿಷ್ಟ ಸೂತ್ರವನ್ನು ಅಳವಡಿಸಿಕೊಳ್ಳಬೇಕು ಎಂದು ಹೇಳಿದರು.

ಮಹಾರಾಷ್ಟ್ರದ ಗಡಿ ಭಾಗದಲ್ಲಿರುವ ಕಬ್ಬು ಬೇರೆಡೆಗೆ ಸಾಗಣೆಯಾಗುವುದನ್ನು ತಡೆಯಲು ರಾಜ್ಯ ಸರ್ಕಾರ ತಕ್ಷಣ ಸೂಕ್ತ ನಿರ್ಧಾರ ಕೈಗೊಳ್ಳಬೇಕು ಎಂದು ಬೊಮ್ಮಾಯಿ ಒತ್ತಾಯಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಕೋಲ್ಕತ್ತಾದ ದುರ್ಗಾ ಪೂಜಾ ಪೆಂಡಾಲ್‌ನಲ್ಲಿ ಘೋರ ದುರಂತ; ಕಾಲ್ತುಳಿತ ಸಂಭವಿಸಿ 17 ಮಂದಿ ಸಾವು

India vs West Indies: ಮಳೆಯಿಂದಾಗಿ 5ನೇ ಟಿ20 ಪಂದ್ಯ ರದ್ದು; ಎರಡು ತಂಡಕ್ಕೂ ಟ್ರೋಫಿ ಹಂಚಿಕೆ

'ಭಾರತ ತೊರೆಯುವಂತೆ' ನೋಟಿಸ್ ಕಾನೂನು ಬಾಹಿರ: ಹೈಕೋರ್ಟ್‌ ಮೆಟ್ಟಿಲೇರಿದ ನಟ ಇಮ್ರಾನ್ ಖಾನ್

ಈ ದೇಶದಲ್ಲಿ ಸ್ಟಿಂಗ್ ಆಪರೇಷನ್ 'ಪಿತಾಮಹ' ಅಂತ ಯಾರಾದ್ರೂ ಇದ್ರೆ ಅದು ಮೋದಿ: ಹಳೇ ಘಟನೆ ಕೆದಕಿದ ಬಿಕೆ ಹರಿಪ್ರಸಾದ್

ಮುಳುಗಿದ ಸರಕು ಹಡಗಿನಿಂದ ಐಫೋನ್‌, ಸುಗಂಧ ದ್ರವ್ಯ ಸಂಗ್ರಹಕ್ಕೆ ಧಾವಿಸಿದ ಇರಾನಿನ ಮೀನುಗಾರರು| video