ಕಲಬುರಗಿಯಲ್ಲಿ ಶಂಕಿತ ಉಗ್ರನ ಬಂಧನ (ಸಾಂದರ್ಭಿಕ ಚಿತ್ರ) Online Desk
ರಾಜ್ಯ

ಚಿನ್ನದ ಕೆಲಸ ಮಾಡುತ್ತಲೇ ಪಾಕ್ ಉಗ್ರರ ಜೊತೆ ನಂಟು: ಕಲಬುರಗಿಯಲ್ಲಿ ಶಂಕಿತ ಉಗ್ರನ ಬಂಧನ

ಲಷ್ಕರ್-ಎ-ತೈಬಾ ಜೊತೆ ಸಂಪರ್ಕ ಹೊಂದಿದ್ದ ಆರೋಪದ ಮೇಲೆ ಪಶ್ಚಿಮ ಬಂಗಾಳ ಮೂಲದ ಮಮ್ತಾಜ್‌ವುಲ್‌ ಮಲೀಕ್ ಎಂಬ ವ್ಯಕ್ತಿಯನ್ನು ಕೇಂದ್ರ ಗುಪ್ತಚರ ಇಲಾಖೆ ಹಾಗೂ ಸ್ಥಳೀಯ ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿ ವಶಕ್ಕೆ ಪಡೆದಿದ್ದಾರೆ. ಆ ಕುರಿತ ವರದಿ ಇಲ್ಲಿದೆ:

ಕಲಬುರಗಿ: ಪಾಕಿಸ್ತಾನ ಮೂಲದ ಉಗ್ರ ಸಂಘಟನೆಯಾದ ಲಷ್ಕರ್-ಎ-ತೈಬಾ ಜೊತೆ ಸಂಪರ್ಕ ಹೊಂದಿದ್ದ ಆರೋಪದ ಮೇಲೆ ಅಕ್ಕಸಾಲಿಗನಾಗಿ ಕೆಲಸ ಮಾಡುತ್ತಿದ್ದ ಪಶ್ಚಿಮ ಬಂಗಾಳ ಮೂಲದ ಮಮ್ತಾಜ್‌ವುಲ್‌ ಮಲೀಕ್ ಎಂಬ ವ್ಯಕ್ತಿಯನ್ನು ಕೇಂದ್ರ ಗುಪ್ತಚರ ಇಲಾಖೆ ಹಾಗೂ ಸ್ಥಳೀಯ ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿ ವಶಕ್ಕೆ ಪಡೆದಿದ್ದಾರೆ. ಆ ಕುರಿತ ವರದಿ ಇಲ್ಲಿದೆ:

ಏನಿದು ಘಟನೆ?

ತನ್ನ ಸಹೋದರನ ಜೊತೆ ಸೇರಿ ಕಲಬುರಗಿಯ ಸರಾಫ್ ಬಜಾರ್‌ನ ಚಿನ್ನಾಭರಣ ಅಂಗಡಿಯಲ್ಲಿ ಅಕ್ಕಸಾಲಿಗನಾಗಿ ಕೆಲಸ ಮಾಡುತ್ತಿದ್ದ ಪಶ್ಚಿಮ ಬಂಗಾಳ ಮೂಲದ ಮಮ್ತಾಜ್‌ವುಲ್‌ ಮಲೀಕ್, ಸಾಮಾಜಿಕ ಜಾಲತಾಣಗಳ ಮೂಲಕ ಪಾಕಿಸ್ತಾನ ಮೂಲದ ಉಗ್ರ ಸಂಘಟನೆಯಾದ ಲಷ್ಕರ್-ಎ-ತೈಬಾ (LeT) ಜೊತೆಗೆ  ಸಂಪರ್ಕದಲ್ಲಿದ್ದ ಹಾಗೂ ಮೆಸೇಜ್‌ಗಳ ಮುಖಾಂತರ ಹಲವು ಮಹತ್ವದ ವಿಚಾರಗಳನ್ನು ಹಂಚಿಕೊಂಡಿದ್ದ ಎಂದು ಹೇಳಲಾಗಿದೆ. ಬ್ರಹ್ಮಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಕಾರ್ಯಾಚರಣೆ ನಡೆದಿದ್ದು, ಪ್ರಸ್ತುತ ತನಿಖಾ ಸಂಸ್ಥೆಗಳು ಆತನನ್ನು ತೀವ್ರ ವಿಚಾರಣೆ ನಡೆಸುತ್ತಿವೆ.

ಏತನ್ಮಧ್ಯೆ, ಇದಕ್ಕೂ ಕೆಲ ದಿನಗಳ ಮುನ್ನ ಕಲಬುರಗಿಯಲ್ಲಿ ಕಸಾಯಿಖಾನೆಯಲ್ಲಿ ಕೆಲಸ ಮಾಡುತ್ತಿದ್ದ ಉತ್ತರ ಪ್ರದೇಶ ಮೂಲದ ಯುವಕನೊಬ್ಬನನ್ನು ವಶಕ್ಕೆ ಪಡೆಯಲಾಗಿತ್ತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಕೋಲ್ಕತ್ತಾ ಕಾಲ್ತುಳಿತ ಪ್ರಕರಣ: ಸಾವಿನ ಸಂಖ್ಯೆ 19ಕ್ಕೆ ಏರಿಕೆ; ಆಯೋಜಕರು ಸೇರಿ 12 ಮಂದಿ ವಶಕ್ಕೆ, ಮೃತರ ಕುಟುಂಬಕ್ಕೆ ತಲಾ ರೂ.2 ಲಕ್ಷ ಪರಿಹಾರ ಘೋಷಣೆ

ತಲಕಾವೇರಿ ಬ್ರಹ್ಮಕುಂಡಿಕೆಯಲ್ಲಿ ತೀರ್ಥೋದ್ಭವ: ಪವಿತ್ರ ಕ್ಷಣಕ್ಕೆ ಸಾಕ್ಷಿಯಾದ ಸಾವಿರಾರು ಭಕ್ತರು..!

Cockroach Janta Partyಗೆ ಕಾಂಗ್ರೆಸ್ ಹಣಕಾಸು ನೆರವು, ಕರ್ನಾಟಕವೇನು ATM ಆಗಿದೆಯೇ..?

ಭಾರತದ ವಿರುದ್ಧದ ಷಡ್ಯಂತ್ರಗಳನ್ನು ಗಂಭೀರವಾಗಿ ಪರಿಗಣಿಸಿ, ವಿದೇಶಿ ಹಣದ ಹರಿವಿಗೆ ಕಡಿವಾಣ ಹಾಕಿ: ಕೇಂದ್ರಕ್ಕೆ ಸಂಸದ ಬೊಮ್ಮಾಯಿ ಆಗ್ರಹ

ಸಿದ್ದರಾಮಯ್ಯ ವಿರುದ್ಧ ಸ್ಟಿಂಗ್ ಆಪರೇಷನ್‌ ಕೇಸ್‌: ಆರೋಪಿಗಳ ಬಂಧನಕ್ಕೆ HDK ಪಟ್ಟು, ವಿಜಯದಶಮಿ ಬಳಿಕ ರಾಜ್ಯಾದ್ಯಂತ ಹೋರಾಟದ ಎಚ್ಚರಿಕೆ..!