ಬೆಂಗಳೂರು: ಕರ್ನಾಟಕದ ಶಕ್ತಿಕೇಂದ್ರ ವಿಧಾನಸೌಧಕ್ಕೆ ಬಾಂಬ್ ಇಟ್ಟು ಉಡಾಯಿಸಿದಂತೆ ಎಐ ಬಳಸಿ ಎಡಿಟ್ ಮಾಡಿದ ವೀಡಿಯೊವೊಂದು ಇನ್‌ಸ್ಟಾಗ್ರಾಮ್‌ನಲ್ಲಿ ಹರಿದಾಡುತ್ತಿದ್ದು, ಸಾರ್ವಜನಿಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. Jnx king Hg ಎಂಬ ಇನ್‌ಸ್ಟಾಗ್ರಾಮ್ ಖಾತೆಯಲ್ಲಿ ಕಿಡಿಗೇಡಿಯೊಬ್ಬ ಈ ವೀಡಿಯೊವನ್ನು ಅಪ್‌ಲೋಡ್ ಮಾಡಿದ್ದಾನೆ.
ವಿಧಾನಸೌಧದ ಮುಂದೆ ನಿಂತ ವಿಡಿಯೋ ಶೂಟ್ ಮಾಡಿಕೊಂಡಿದ್ದು ಅದನ್ನು ಎಐ ತಂತ್ರಜ್ಞಾನ ಬಳಸಿ ಬಾಂಬ್ ಬ್ಲಾಸ್ಟ್ ಮಾಡಿದಂತೆ ಎಡಿಟ್ ಮಾಡಿ ವಿಡಿಯೋ ಫೋಸ್ಟ್ ಮಾಡಿದ್ದಾನೆ. ಅಲ್ಲದೆ ವಿಧಾನಸೌಧವನ್ನು ಬಾಂಬ್‌ನಿಂದ ಉಡಾಯಿಸಿದ್ದಾಗಿ ಬರೆದುಕೊಂಡಿದ್ದಾನೆ.
ಈ ವಿಡಿಯೋ ವಿರುದ್ಧ ನೆಟ್ಟಿಗರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ವಿಧಾನಸೌಧಕ್ಕೆ ಈ ರೀತಿ ಬೆದರಿಕೆ ಒಡ್ಡುವ ವಿಡಿಯೋ ಪ್ರಸಾರ ಮಾಡಿರುವ ಯುವಕನ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳುವಂತೆ ಸಾರ್ವಜನಿಕರು ಆಗ್ರಹಿಸಿದ್ದಾರೆ.