ವಿದ್ಯಾ ಮಂಜುನಾಥ 
ರಾಜ್ಯ

ರಾಜ್ಯದಲ್ಲಿ ಮಾಂಜಾಗೆ ಮತ್ತೊಂದು ಬಲಿ: ಸ್ಕೂಟಿಯಲ್ಲಿ ತೆರಳುತ್ತಿದ್ದ ಮಹಿಳೆಯ ಕತ್ತು ಸೀಳಿದ ಗಾಳಿಪಟದ ದಾರ!

ಸ್ಕೂಟಿಯಲ್ಲಿ ತೆರಳುತ್ತಿದ್ದ ಮಹಿಳೆಯೊಬ್ಬರ ಕುತ್ತಿಗೆಗೆ ಗಾಳಿಪಟದ ಮಾಂಜಾ ದಾರ ಸಿಲುಕಿ ಮೃತಪಟ್ಟಿರುವ ದಾರುಣ ಘಟನೆ ಹುಬ್ಬಳ್ಳಿಯ ಶಿವಶಂಕರ ಕಾಲೋನಿಯಲ್ಲಿ ನಡೆದಿದೆ.

ಹುಬ್ಬಳ್ಳಿ: ಬೆಳಗಾವಿಯಲ್ಲಿ ಗಾಳಿಪಟ ಹಾರಿಸಲು ಬಳಸುವ ಅಪಾಯಕಾರಿ ಮಾಂಜಾ ದಾರಕ್ಕೆ ಯುವಕ ಬಲಿಯಾದ ಬೆನ್ನಲ್ಲೇ ಹುಬ್ಬಳ್ಳಿಯಲ್ಲಿ ಗುರುವಾರ ಮತ್ತೊಬ್ಬ ಮಹಿಳೆ ಈ ದಾರಕ್ಕೆ ಬಲಿಯಾಗಿದ್ದಾರೆ.

ಸ್ಕೂಟಿಯಲ್ಲಿ ತೆರಳುತ್ತಿದ್ದ ಮಹಿಳೆಯೊಬ್ಬರ ಕುತ್ತಿಗೆಗೆ ಗಾಳಿಪಟದ ಮಾಂಜಾ ದಾರ ಸಿಲುಕಿ ಮೃತಪಟ್ಟಿರುವ ದಾರುಣ ಘಟನೆ ಹುಬ್ಬಳ್ಳಿಯ ಶಿವಶಂಕರ ಕಾಲೋನಿಯಲ್ಲಿ ನಡೆದಿದೆ.

ಮೃತ ಮಹಿಳೆಯನ್ನು ಭರತ್ ನಗರದ ನಿವಾಸಿ, 38 ವರ್ಷದ ವಿದ್ಯಾ ಮಂಜುನಾಥ ಗೌಡರ ಎಂದು ಗುರುತಿಸಲಾಗಿದೆ. ವಿದ್ಯಾ ಅವರು ಲ್ಯಾಬ್ ಟೆಕ್ನಿಷಿಯನ್ ಆಗಿ ಕೆಲಸ ಮಾಡುತ್ತಿದ್ದರು.

ವಿದ್ಯಾ ಸ್ಕೂಟಿಯಲ್ಲಿ ಕೆಲಸಕ್ಕೆ ತೆರಳುತ್ತಿದ್ದಾಗ ಈ ಅವಘಡ ಸಂಭವಿಸಿದೆ. ಶಿವಶಂಕರ ಕಾಲೋನಿ ಸಮೀಪದ ಕಾರವಾರ ರಸ್ತೆಯಲ್ಲಿ ಅವರ ಕುತ್ತಿಗೆಗೆ ಮಾಂಜಾ ದಾರ ಸಿಲುಕಿದೆ ಎನ್ನಲಾಗಿದೆ. ಇದರಿಂದ ನಿಯಂತ್ರಣ ತಪ್ಪಿ ರಸ್ತೆಗೆ ಬಿದ್ದ ಮಹಿಳೆಗೆ ತೀವ್ರ ರಕ್ತಸ್ರಾವವಾಗಿದ್ದು, ಆಸ್ಪತ್ರೆಗೆ ಕರೆದೊಯ್ಯುವಷ್ಟರಲ್ಲಿ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

ಮಾಂಜಾ ದಾರ ನಿಷೇಧಕ್ಕೆ ಆಗ್ರಹ

ಘಟನೆಗೆ ಸಂಬಂಧಿಸಿದಂತೆ ಮೃತ ಮಹಿಳೆಯ ಸಂಬಂಧಿ ಮೋಹನ ಗೌಡರ ಮಾತನಾಡಿ, ವಿದ್ಯಾ ಅವರು ಪ್ರತಿದಿನ ಇದೇ ರಸ್ತೆಯಲ್ಲಿ ಸಂಚರಿಸುತ್ತಿದ್ದರು. ಲ್ಯಾಬ್​ಗೆ ತೆರಳುವ ವೇಳೆ ಮಾಂಜಾ ದಾರ ಕುತ್ತಿಗೆಗೆ ಸಿಲುಕಿ ಸಾವನ್ನಪ್ಪಿದ್ದಾರೆ. ಮಾಂಜಾ ದಾರ ಮಾನವ ಜೀವಕ್ಕೆ ಅಪಾಯಕಾರಿಯಾಗಿದ್ದು, ಅದನ್ನು ತಕ್ಷಣ ನಿಷೇಧಿಸಬೇಕು ಎಂದು ಆಗ್ರಹಿಸಿದ್ದಾರೆ.

ಪೊಲೀಸ್ ಆಯುಕ್ತರ ಎಚ್ಚರಿಕೆ

ಘಟನೆ ಬಗ್ಗೆ ಪ್ರತಿಕ್ರಿಯಿಸಿದ ಹುಬ್ಬಳ್ಳಿ-ಧಾರವಾಡ ಪೊಲೀಸ್ ಕಮಿಷನರ್ ಭೂಷಣ್ ಬೊರಸೆ ಅವರು, ಮಾಂಜಾ ದಾರದಿಂದ ಒಂದು ಜೀವ ಹೋಗಿದೆ. ಈ ಸಂಬಂಧ ಹಳೇ ಹುಬ್ಬಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದ್ದು, ಘಟನೆಗೆ ಕಾರಣರಾದವರ ಪತ್ತೆಗೆ ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.

ಗಾಳಿಪಟ ಹಾರಿಸಲು ಮಾಂಜಾ ದಾರ ಬಳಸುವವರ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಲಾಗುವುದು. ದಾರ ಮಾರಾಟ ಮಾಡುವವರ ವಿರುದ್ಧವೂ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ ಎಂದು ಎಚ್ಚರಿಕೆ ನೀಡಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಪ್ರಧಾನಿ ಮೋದಿ ನಿವಾಸದ ಸಮೀಪವಿರುವ ಮಸೀದಿಗೆ ತೆರವು ನೋಟಿಸ್; ಕೇಂದ್ರದ ವಿರುದ್ಧ ಮೆಹಬೂಬಾ ಮುಫ್ತಿ ಕೆಂಡಾಮಂಡಲ

India vs New Zealand: ಭುವಿ ಭರ್ಜರಿ ಕಂಬ್ಯಾಕ್; ವಿಶ್ವ ದಾಖಲೆ ಬರೆದ 'ಸ್ವಿಂಗ್ ಸುಲ್ತಾನ್'!

ಶಿಕ್ಷಕರ ಕ್ಷೇತ್ರದ ಚುನಾವಣೆ: ಗಿಫ್ಟ್ ಕೂಪನ್, ಹಣ ವಿತರಣೆ ಆರೋಪ, 17 BEO ವಿರುದ್ಧ ಎಫ್ ಐಆರ್ ದಾಖಲಿಸಲು ಛಲವಾದಿ ನಾರಾಯಣಸ್ವಾಮಿ ಆಗ್ರಹ! Video

1st T20I: ಕಿವೀಸ್ ವಿರುದ್ಧ ಬೃಹತ್ ಗುರಿ ಚೇಸ್, ಇತಿಹಾಸ ಬರೆದ ಭಾರತ

1st T20I: ಕೊನೆಯ ಕ್ಷಣದವರೆಗೂ ರೋಚಕ ಕಾದಾಟ, ನ್ಯೂಜಿಲೆಂಡ್ ವಿರುದ್ಧ ಭಾರತಕ್ಕೆ 4 ವಿಕೆಟ್ ಭರ್ಜರಿ ಜಯ