ಪರೀಕ್ಷೆಯಲ್ಲಿ ಮಾಸ್ ಕಾಪಿ 
ರಾಜ್ಯ

ಶಿವಮೊಗ್ಗ: KSOU ಪರೀಕ್ಷೆಯಲ್ಲಿ ಸಾಮೂಹಿಕ ನಕಲು; ವಿದ್ಯಾರ್ಥಿಗಳಿಂದ ಹಣ ಪಡೆದು ಮೊಬೈಲ್‌, ಪುಸ್ತಕ ಬಳಸಿ ಎಕ್ಸಾಂ ಬರೆಯಲು ಅವಕಾಶ?

ಶಿವಮೊಗ್ಗದ ಆಲ್ಕೋಳ ವೃತ್ತದ ಸಮೀಪದಲ್ಲಿರುವ ಕೆಎಸ್‌ಒಯು ಪ್ರಾದೇಶಿಕ ಕಚೇರಿಯೇ ಈ ಪರೀಕ್ಷಾ ಕೇಂದ್ರವಾಗಿದೆ. ಪ್ರಾದೇಶಿಕ ನಿರ್ದೇಶಕ ಬಿ.ಎಂ. ಸ್ವಾಮಿ ಅವರ ನೇತೃತ್ವದಲ್ಲಿ ಹಣ ಪಡೆದು ಸಾಮೂಹಿಕ ನಕಲು ಮಾಡಲು ಅವಕಾಶ ಕಲ್ಪಿಸಲಾಗುತ್ತಿದೆ.

ಶಿವಮೊಗ್ಗ: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ಪ್ರಾದೇಶಿಕ ಕಚೇರಿಯಲ್ಲಿ ಹಣ ಪಡೆದು ಪರೀಕ್ಷೆಯಲ್ಲಿ ನಕಲು ಮಾಡಲು ಅವಕಾಶ ನೀಡುತ್ತಿರುವ ಬೃಹತ್ ಅಕ್ರಮ ಬಯಲಾಗಿದೆ. ಒಂದು ವಿಷಯಕ್ಕೆ ₹1,000 ನೀಡಿದ ವಿದ್ಯಾರ್ಥಿಗಳಿಗೆ ಮೊಬೈಲ್ ಮತ್ತು ಪುಸ್ತಕ ನೋಡಿ ಪರೀಕ್ಷೆ ಬರೆಯಲು ಪ್ರಾದೇಶಿಕ ನಿರ್ದೇಶಕರ ನೇತೃತ್ವದಲ್ಲೇ ವಿಐಪಿ ವ್ಯವಸ್ಥೆ ಮಾಡಲಾಗಿದೆ.

ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ವಿವಾದದ ಬೆನ್ನಲ್ಲೇ, ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ (ಕೆಎಸ್‌ಒಯು) ಶಿವಮೊಗ್ಗ ಪ್ರಾದೇಶಿಕ ಕಚೇರಿಯಲ್ಲಿ ಪರೀಕ್ಷಾ ಅಕ್ರಮ ನಡೆದಿದೆ ಎಂಬ ಗಂಭೀರ ಆರೋಪ ಕೇಳಿಬಂದಿದೆ. ಹಣ ಪಡೆದು ಪದವಿ ಮತ್ತು ಸ್ನಾತಕೋತ್ತರ ಪದವಿ ಪರೀಕ್ಷೆಗಳಲ್ಲಿ ಪುಸ್ತಕ ಹಾಗೂ ಮೊಬೈಲ್‌ ಬಳಸಿ ಉತ್ತರ ಬರೆಯಲು ಅವಕಾಶ ನೀಡಲಾಗುತ್ತಿದೆ ಎಂಬ ಆರೋಪ ಕೇಳಿ ಬಂದಿದೆ.

ಶಿವಮೊಗ್ಗದ ಆಲ್ಕೋಳ ವೃತ್ತದ ಸಮೀಪದಲ್ಲಿರುವ ಕೆಎಸ್‌ಒಯು ಪ್ರಾದೇಶಿಕ ಕಚೇರಿಯೇ ಈ ಪರೀಕ್ಷಾ ಕೇಂದ್ರವಾಗಿದೆ. ಪ್ರಾದೇಶಿಕ ನಿರ್ದೇಶಕ ಬಿ.ಎಂ. ಸ್ವಾಮಿ ಅವರ ನೇತೃತ್ವದಲ್ಲಿ ಹಣ ಪಡೆದು ಸಾಮೂಹಿಕ ನಕಲು ಮಾಡಲು ಅವಕಾಶ ಕಲ್ಪಿಸಲಾಗುತ್ತಿದೆ ಎಂದು ಆರೋಪಿಸಲಾಗಿದೆ. ಆದರೆ, ಈ ಆರೋಪಗಳ ಕುರಿತು ಅಧಿಕೃತ ತನಿಖೆ ಅಥವಾ ಸಂಬಂಧಪಟ್ಟ ಅಧಿಕಾರಿಗಳ ಸ್ಪಷ್ಟನೆ ಲಭ್ಯವಾಗಿದೆಯೇ ಎಂಬುದು ದೃಢಪಡಬೇಕಿದೆ.

ಆರೋಪಗಳ ಪ್ರಕಾರ, ಹಣ ನೀಡಿದ ವಿದ್ಯಾರ್ಥಿಗಳಿಗೆ ಎರಡನೇ ಮಹಡಿಯಲ್ಲಿ ಪುಸ್ತಕ ಮತ್ತು ಮೊಬೈಲ್‌ ಬಳಸಿಕೊಂಡು ಪರೀಕ್ಷೆ ಬರೆಯಲು ಅವಕಾಶ ನೀಡಲಾಗುತ್ತಿತ್ತು. ಹಣ ನೀಡದ ವಿದ್ಯಾರ್ಥಿಗಳಿಗೆ ಮೊದಲ ಮಹಡಿಯಲ್ಲಿ ಪರೀಕ್ಷೆ ಬರೆಯುವ ವ್ಯವಸ್ಥೆ ಮಾಡಲಾಗಿತ್ತು ಎನ್ನಲಾಗಿದೆ.

ವಿದ್ಯಾರ್ಥಿಗಳು ಪರೀಕ್ಷಾ ಕೊಠಡಿಯಲ್ಲಿ ಪುಸ್ತಕ ಹಾಗೂ ಮೊಬೈಲ್‌ ನೋಡಿಕೊಂಡು ಉತ್ತರ ಬರೆಯುತ್ತಿರುವ ದೃಶ್ಯಗಳು ಸೆರೆಯಾಗಿವೆ ಎಂದು ವರದಿಯಾಗಿದೆ. ಸಿಬ್ಬಂದಿಯನ್ನು ಬಳಸಿಕೊಂಡು ವಿದ್ಯಾರ್ಥಿಗಳಿಂದ ಹಣ ಸಂಗ್ರಹಿಸಿ, ಪರೀಕ್ಷೆಯಲ್ಲಿ ನಕಲು ಮಾಡಲು ಅವಕಾಶ ನೀಡಲಾಗುತ್ತಿದೆ ಎಂಬ ಆರೋಪವೂ ಕೇಳಿಬಂದಿದೆ.

ಪ್ರತಿದಿನ ಪರೀಕ್ಷೆ ಮುಗಿದ ತಕ್ಷಣ ಸುಮಾರು 70 ರಿಂದ 100 ವಿದ್ಯಾರ್ಥಿಗಳಿಂದ ಫೋನ್ ಪೇ (PhonePe) ಮತ್ತು ಗೂಗಲ್ ಪೇ (Google Pay) ಮೂಲಕ ಸ್ಥಳದಲ್ಲೇ ಹಣ ಪಾವತಿಸಿಕೊಳ್ಳಲಾಗುತ್ತಿದೆ.

ಅಕ್ಟೋಬರ್ 7 ರಿಂದ ಆರಂಭವಾಗಿರುವ ಮುಕ್ತ ವಿವಿಯ ಪದವಿ ಮತ್ತು ಸ್ನಾತಕೋತ್ತರ ಪರೀಕ್ಷೆಗಳು ನವೆಂಬರ್ 20 ರವರೆಗೆ ನಡೆಯಲಿವೆ. ದಿನರಾತ್ರಿ ಕಷ್ಟಪಟ್ಟು ಓದಿ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳ ಪರಿಶ್ರಮವನ್ನು ಈ ಭ್ರಷ್ಟ ಜಾಲ ಮಣ್ಣುಪಾಲು ಮಾಡುತ್ತಿದೆ. ತಕ್ಷಣವೇ ಉನ್ನತ ಶಿಕ್ಷಣ ಇಲಾಖೆ ಹಾಗೂ ಕೆಎಸ್‌ಒಯು ಕುಲಪತಿಗಳು ಈ ಕೇಂದ್ರದ ಮೇಲೆ ದಾಳಿ ನಡೆಸಿ, ಕರ್ತವ್ಯಲೋಪ ಎಸಗಿರುವ ಅಧಿಕಾರಿಗಳ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಬೇಕೆಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಪುತ್ತೂರು ಟಿಕೆಟ್ ಪಡೆಯಲು ಬ್ಲ್ಯಾಕ್‌ಮೇಲ್‌ ಯತ್ನ; ಸಿದ್ದರಾಮಯ್ಯ ಸ್ಟಿಂಗ್ ನಲ್ಲಿ ಕಾಂಗ್ರೆಸ್ ನವರ ಕೈವಾಡ: ಯತೀಂದ್ರ ಹೊಸ ಬಾಂಬ್

ಸ್ಟಿಂಗ್ ಮಾಡಿರೋನು ಡಿಕೆಶಿ ಬಲಗೈ ಬಂಟ; ಖಾಸಗಿ ಮಾಧ್ಯಮದ ಮುಖ್ಯಸ್ಥನ ಜೊತೆ ಕೆಲಸ ಮಾಡುತ್ತಿದ್ದ ವಿಕ್ಕಿ ಎಂಬ ವ್ಯಕ್ತಿ ಅನುಮಾನಾಸ್ಪದ ಸಾವು: HDK

ಬಾಲಿವುಡ್ ಹಿರಿಯ ನಟ ಅಮಿತಾಬ್ ಬಚ್ಚನ್ ನಿವಾಸ, ದಿಲ್ಜಿತ್ ದೋಸಾಂಜ್ ಸಂಗೀತ ಕಾರ್ಯಕ್ರಮಕ್ಕೆ ಬಾಂಬ್ ಸ್ಫೋಟದ ಬೆದರಿಕೆ! ಇಮೇಲ್ ಸಂದೇಶ

ಜಂಬೂ ಸವಾರಿಗೆ ಪುಷ್ಪಾರ್ಚನೆ ಪ್ರೋಟೋಕಾಲ್‌ನಲ್ಲಿ ಸಿಎಂ ಪತ್ನಿ ಹೆಸರು ಇರಲಿಲ್ಲ; ಶಿಷ್ಟಾಚಾರ ಉಲ್ಲಂಘನೆಯಾದ್ರೂ ತಪ್ಪೇನಿಲ್ಲ: ಯತೀಂದ್ರ

ಚುನಾವಣಾ ಆಯೋಗದೊಳಗೆ ತೀವ್ರ ಮುಸುಕಿನ ಗುದ್ದಾಟ: ಉಪ ಚುನಾವಣಾ ಆಯುಕ್ತರ ವಿರುದ್ಧ ಕ್ಯಾಬಿನೆಟ್ ಕಾರ್ಯದರ್ಶಿಗೆ ದೂರು ನೀಡಿದ ಆಯುಕ್ತರು, ಕೇಂದ್ರ ಹೇಳಿದ್ದೇನು?