ಮೃತ ಮಹಿಳೆ ರುಕ್ಸಾನಾ ಹಾಗೂ ಆರೋಪಿ ಮೊಹಮ್ಮದ್ ಇಫ್ಜಾನ್ 
ರಾಜ್ಯ

ಬೆಂಗಳೂರು: ಅಕ್ರಮ ಸಂಬಂಧ ಶಂಕೆ; ಪತ್ನಿ ಕೊಂದು ಚರಂಡಿಗೆ ಎಸೆದ ವ್ಯಕ್ತಿ, ಬಂಧನ

ಇಬ್ಬರೂ ಪರಸ್ಪರ ಪ್ರೀತಿಸಿ ಎರಡು ವರ್ಷಗಳ ಹಿಂದೆ ವಿವಾಹವಾಗಿದ್ದರು. ರುಕ್ಸಾನಾ ಮೊಬೈಲ್‌ನಲ್ಲಿ ಆಗಾಗ ಯಾರೊಂದಿಗೋ ಮಾತನಾಡುತ್ತಾಳೆ ಮತ್ತು ಅಕ್ರಮ ಸಂಬಂಧ ಹೊಂದಿದ್ದಾಳೆ ಎಂದು ಇರ್ಫಾಜ್ ಅನುಮಾನಿಸುತ್ತಿದ್ದ.

ಬೆಂಗಳೂರು: ಪತ್ನಿ ಶೀಲ ಶಂಕಿಸಿ ಭೀಕರವಾಗಿ ಹತ್ಯೆ ಮಾಡಿ, ಶವವನ್ನು ಚೀಲದಲ್ಲಿ ತುಂಬಿ ರಾಜಕಾಲುವೆಗೆ ಎಸೆದಿದ್ದ ಬಿಹಾರ ಮೂಲದ ವಲಸೆ ಕಾರ್ಮಿಕನನ್ನು ಬೆಂಗಳೂರಿನ ಮಾಗಡಿ ರಸ್ತೆ ಪೊಲೀಸರು ಬಂಧನಕ್ಕೊಳಪಡಿಸಿದ್ದಾರೆ.

ಬಂಧಿತ ಆರೋಪಿಯನ್ನು ಮೊಹಮ್ಮದ್ ಇಫ್ಜಾನ್(22) ಎಂದು ಗುರುತಿಸಲಾಗಿದೆ.ಮೃತ ಮಹಿಳೆಯನ್ನು ರುಕ್ಸಾನಾ (25) ಎಂದು ಗುರುತಿಸಲಾಗಿದೆ.

ಮಹಿಳೆ ಗಾರ್ಮೆಂಟ್ಸ್ ಕಾರ್ಖಾನೆಯಲ್ಲಿ ಟೈಲರ್ ಆಗಿ ಕೆಲಸ ಮಾಡುತ್ತಿದ್ದಳು. ಬಂಧಿತ ಆರೋಪಿ ಮೊಹಮ್ಮದ್ ಗುಜರಿ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದ. ಇಬ್ಬರೂ ಬಿಹಾರ ಮೂಲದವರಾಗಿದ್ದು, ಗೋವಿಪುರದಲ್ಲಿ ಬಾಡಿಗೆ ಮನೆಯಲ್ಲಿ ವಾಸವಾಗಿದ್ದರು.

ಇಬ್ಬರೂ ಪರಸ್ಪರ ಪ್ರೀತಿಸಿ ಎರಡು ವರ್ಷಗಳ ಹಿಂದೆ ವಿವಾಹವಾಗಿದ್ದರು. ರುಕ್ಸಾನಾ ಮೊಬೈಲ್‌ನಲ್ಲಿ ಆಗಾಗ ಯಾರೊಂದಿಗೋ ಮಾತನಾಡುತ್ತಾಳೆ ಮತ್ತು ಅಕ್ರಮ ಸಂಬಂಧ ಹೊಂದಿದ್ದಾಳೆ ಎಂದು ಇರ್ಫಾಜ್ ಅನುಮಾನಿಸುತ್ತಿದ್ದ. ಈ ವಿಚಾರವಾಗಿ ದಂಪತಿ ನಡುವೆ ಆಗಾಗ ಜಗಳ ನಡೆಯುತ್ತಿತ್ತು.

ಅಕ್ಟೋಬರ್ 10ರಂದು ಇದೇ ವಿಚಾರವಾಗಿ ಇಬ್ಬರ ನಡುವೆ ಜಗಳ ತೀವ್ರಗೊಂಡಿತ್ತು. ಈ ವೇಳೆ ಇಫ್ಜಾನ್ ಕಲ್ಲಿನಿಂದ ಪತ್ನಿಯ ತಲೆಗೆ ಹೊಡೆದು ಕೊಲೆ ಮಾಡಿದ್ದಾನೆ ಎಂದು ಆರೋಪಿಸಲಾಗಿದೆ.

ಅಕ್ಟೋಬರ್ 13ರಂದು ಸ್ಥಳೀಯರೊಬ್ಬರು ಚರಂಡಿಯಲ್ಲಿ ಮಹಿಳೆಯ ಶವವನ್ನು ಕಂಡು ಪೊಲೀಸರಿಗೆ ಮಾಹಿತಿ ನೀಡಿದ್ದರು. ಬಳಿಕ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದರು.

ವಿಚಾರಣೆ ವೇಳೆ ಗೋವಿಪುರದ ಮನೆಯೊಂದರಲ್ಲಿ ವಾಸವಿದ್ದ ಮಹಿಳೆಯೊಬ್ಬಳು ಹಲವು ದಿನಗಳಿಂದ ಕಾಣಿಸುತ್ತಿಲ್ಲ ಎಂದು ಸ್ಥಳೀಯರು ಪೊಲೀಸರಿಗೆ ತಿಳಿಸಿದ್ದರು.

ಈ ಮಾಹಿತಿ ಆಧರಿಸಿ ಪೊಲೀಸರು ಇಫ್ಜಾನ್ ನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದರು. ಈ ವೇಳೆ ಪತ್ನಿಯನ್ನು ಬಿಹಾರಕ್ಕೆ ಕಳುಹಿಸಿರುವುದಾಗಿ ಆತ ಹೇಳಿದ್ದ. ಆಕೆಯ ಮೊಬೈಲ್ ಸಂಖ್ಯೆ ಕೇಳಿದಾಗ, ಆಕೆ ಮೊಬೈಲ್ ಬಳಸುತ್ತಿರಲಿಲ್ಲ ಎಂದು ತಿಳಿಸಿದ್ದ.

ಆತನ ಹೇಳಿಕೆಗಳ ಬಗ್ಗೆ ಅನುಮಾನ ಹೆಚ್ಚಾದ ಹಿನ್ನೆಲೆಯಲ್ಲಿ ಪೊಲೀಸರು ಮತ್ತಷ್ಟು ವಿಚಾರಣೆ ನಡೆಸಿದಾಗ, ಕೊಲೆ ಮಾಡಿರುವುದಾಗಿ ಒಪ್ಪಿಕೊಂಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಕೊಲೆ ಬಳಿಕ ಶವವನ್ನು ವಿಲೇವಾರಿ ಮಾಡಲು ಇಫ್ಜಾನ್ ತನ್ನ ಕೆಲಸದ ಸ್ಥಳದಿಂದ ಸ್ಕೂಟರ್‌ ಪಡೆದುಕೊಂಡಿದ್ದ ಎನ್ನಲಾಗಿದೆ. ಶವವನ್ನು ಪ್ಲಾಸ್ಟಿಕ್ ಚೀಲದಲ್ಲಿ ಹಾಕಿ ಚರಂಡಿಗೆ ಎಸೆದು ಸ್ಥಳದಿಂದ ಪರಾರಿಯಾಗಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಚುನಾವಣಾ ಆಯೋಗದೊಳಗೆ ತೀವ್ರ ಮುಸುಕಿನ ಗುದ್ದಾಟ: ಉಪ ಚುನಾವಣಾ ಆಯುಕ್ತರ ವಿರುದ್ಧ ಕ್ಯಾಬಿನೆಟ್ ಕಾರ್ಯದರ್ಶಿಗೆ ದೂರು ನೀಡಿದ ಆಯುಕ್ತರು, ಕೇಂದ್ರ ಹೇಳಿದ್ದೇನು?

ಟಿಬೆಟ್‌ನಲ್ಲಿ ಪ್ರಬಲ ಭೂಕಂಪ: ನೂರಾರು ಮನೆಗಳು ಧರಾಶಾಹಿ; ಕನಿಷ್ಟ 16 ಮಂದಿ ಸಾವು, 54ಕ್ಕೂ ಹೆಚ್ಚು ಜನರಿಗೆ ಗಂಭೀರ ಗಾಯ..!

ಮೆಟ್ರೋ ನಿಲ್ದಾಣಗಳಿಗೆ ಜಯಲಲಿತಾ, ಕರುಣಾನಿಧಿ, ಎಂ.ಜಿ.ಆರ್. ಹೆಸರು! ಬೆಂಗಳೂರು-ಹೊಸೂರು ಮೆಟ್ರೋಗೆ ಕನ್ನಡ ಸಂಘಟನೆಗಳ ವಿರೋಧ: ಮಿನಿ ತಮಿಳುನಾಡು ಆಗುತ್ತಾ ಸಿಲಿಕಾನ್ ಸಿಟಿ?

ಇಸ್ರೋದ ಉಪಗ್ರಹ ಉಡಾವಣೆ ವೈಫಲ್ಯಕ್ಕಿಂತ ಕಾಂಗ್ರೆಸ್ ನಾಯಕನ ರೀ ಲಾಂಚ್ ಫೈಲ್ಯೂರ್ ಹೆಚ್ಚಾಗಿದೆ : ಪ್ರಧಾನಿ ಮೋದಿ ವ್ಯಂಗ್ಯ; Video

ರಾಜ್ಯದಲ್ಲಿ ಭೀಕರ ಬರ: 62,481 ಕೋಟಿ ರೂ. ಬೆಳೆ ನಷ್ಟ, ನೆರವು ಕೋರಿ ಪ್ರಧಾನಿ ಮೋದಿಗೆ DCM ಪರಮೇಶ್ವರ್ ಪತ್ರ