ಡಾ ಯತೀಂದ್ರ ಸಿದ್ದರಾಮಯ್ಯ 
ರಾಜ್ಯ

ಪುತ್ತೂರು ಟಿಕೆಟ್ ಪಡೆಯಲು ಬ್ಲ್ಯಾಕ್‌ಮೇಲ್‌ ಯತ್ನ: ಸಿದ್ದರಾಮಯ್ಯ ಸ್ಟಿಂಗ್ ನಲ್ಲಿ ಕಾಂಗ್ರೆಸ್ ನವರ ಕೈವಾಡ; ಯತೀಂದ್ರ ಹೊಸ ಬಾಂಬ್

ಪ್ರಕರಣದಲ್ಲಿ ಯಾರೇ ಇದ್ದರೂ ಅರೆಸ್ಟ್ ಮಾಡಲು ತಂದೆ ಹೇಳಿದ್ದಾರೆ. ನಮ್ಮ ಸರ್ಕಾರದ ತನಿಖೆ ಮೇಲೆ ನಂಬಿಕೆ ಇದೆ. ತನಿಖೆ ಸರಿಯಾಗಿ ನಡೆಯುತ್ತಿದೆ. ಆಕಸ್ಮಾತ್ ತನಿಖೆ ಸರಿಯಾಗಿ ನಡೆಯಲಿಲ್ಲ ಅಂದ್ರೆ, ಉನ್ನತ ಮಟ್ಟದ ತನಿಖೆಗೆ ಒತ್ತಾಯಿಸುತ್ತೇವೆ ಎಂದು ತಿಳಿಸಿದರು.

ಮೈಸೂರು: ಸಿದ್ದರಾಮಯ್ಯ ಅವರಿಗೆ ಬ್ಲ್ಯಾಕ್‌ಮೇಲ್ ಮಾಡುವ ಯತ್ನ ನಡೆದಿದೆ. ಸ್ಟಿಂಗ್ ಪ್ರಕರಣದಲ್ಲಿ ನಮ್ಮ ಪಕ್ಷದವರೇ ಇದ್ದಾರೆ ಎಂದು ಸಚಿವ ಯತೀಂದ್ರ ಸಿದ್ದರಾಮಯ್ಯ ಸ್ಫೋಟಕ ಹೇಳಿಕೆ ನೀಡಿದ್ದಾರೆ.

ಸ್ಟಿಂಗ್ ಪ್ರಕರಣದ ಬಗ್ಗೆ ಮೈಸೂರಿನಲ್ಲಿ ಮಾತನಾಡಿದ ಯತೀಂದ್ರ, ಸ್ಟಿಂಗ್ ಪ್ರಕರಣದಲ್ಲಿ ಇಬ್ಬರನ್ನು ವಶಕ್ಕೆ ಪಡೆದು ವಿಚಾರಣೆ ಮಾಡಿದ್ದಾರೆ. ತಂದೆಗೆ ಈ ಬಗ್ಗೆ ಮಾಹಿತಿ ನೀಡಿದ್ದಾರೆ. ಪತ್ರಕರ್ತ ಸೇರಿ ಇಬ್ಬರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ.

ಪ್ರಕರಣದಲ್ಲಿ ಯಾರೇ ಇದ್ದರೂ ಅರೆಸ್ಟ್ ಮಾಡಲು ತಂದೆ ಹೇಳಿದ್ದಾರೆ. ನಮ್ಮ ಸರ್ಕಾರದ ತನಿಖೆ ಮೇಲೆ ನಂಬಿಕೆ ಇದೆ. ತನಿಖೆ ಸರಿಯಾಗಿ ನಡೆಯುತ್ತಿದೆ. ಆಕಸ್ಮಾತ್ ತನಿಖೆ ಸರಿಯಾಗಿ ನಡೆಯಲಿಲ್ಲ ಅಂದ್ರೆ, ಉನ್ನತ ಮಟ್ಟದ ತನಿಖೆಗೆ ಒತ್ತಾಯಿಸುತ್ತೇವೆ ಎಂದು ತಿಳಿಸಿದರು.

ಸಿದ್ದರಾಮಯ್ಯರಿಗೆ ಬ್ಲ್ಯಾಕ್‌ಮೇಲ್ ಮಾಡುವ ಯತ್ನ ನಡೆದಿದೆ. ಸಿದ್ದರಾಮಯ್ಯ ಹೆಸರು ಕೆಡಿಸಲು ಸ್ಟಿಂಗ್ ವಿಚಾರ ಮುನ್ನಲೆಗೆ ತಂದಿದ್ದಾರೆ. ಸಿದ್ದರಾಮಯ್ಯ ಅವರನ್ನು ತೇಜೋವಧೆ ಮಾಡಿ ಅವರ ಲೆಗಸಿ ಹಾಳು ಮಾಡಿ ಬ್ಲ್ಯಾಕ್‌ಮೇಲ್ ಮಾಡುವ ಪ್ರಯತ್ನ ನಡೆದಿದೆ. ಸ್ಟಿಂಗ್ ಪ್ರಕರಣದಲ್ಲಿ ನಮ್ಮ ಪಕ್ಷದವರೇ ಇದ್ದಾರೆ. ಕಾಂಗ್ರೆಸ್‌ನ ಓರ್ವ ಮಹಿಳೆ ಈ ಪ್ರಕರಣದಲ್ಲಿದ್ದಾರೆ. ಆ ಮಹಿಳೆ ನಮ್ಮ ಪಕ್ಷದವರು ಎಂದು ಹೇಳಿದರು.

ಈ ಸ್ಟಿಂಗ್ ವಿಡಿಯೋದಲ್ಲಿ ತಮ್ಮ ಪಕ್ಷದವರೇ ಭಾಗಿಯಾಗಿರುವುದು ಮೇಲ್ನೋಟಕ್ಕೆ ಗೊತ್ತಾಗುತ್ತಿದೆ ಎಂದು ಯತೀಂದ್ರ ಸಿದ್ದರಾಮಯ್ಯ ಒಪ್ಪಿಕೊಂಡಿದ್ದಾರೆ. ಅಲ್ಲದೆ, ಒಬ್ಬ ಮಾಧ್ಯಮ ಮುಖ್ಯಸ್ಥರೂ ಸಹ ಇದರಲ್ಲಿ ಕಾಣಿಸಿಕೊಂಡಿದ್ದಾರೆ ಎಂಬುದನ್ನು ವಿಡಿಯೋ ಸ್ಪಷ್ಟಪಡಿಸುತ್ತದೆ. ಆದರೆ, ಒಬ್ಬ ವ್ಯಕ್ತಿ ಮಾಡಿದ ತಪ್ಪಿಗೆ ಇಡೀ ಪಕ್ಷವನ್ನು ದೂಷಿಸಲು ಸಾಧ್ಯವಿಲ್ಲ ಎಂದು ಸ್ಪಷ್ಟಪಡಿಸಿದರು.

ಸ್ಟಿಂಗ್ ಮಾಡಿ ಟಿಕೆಟ್‌ಗೆ ಬ್ಲ್ಯಾಕ್‌ಮೇಲೆ ಮಾಡಲು ಯತ್ನಿಸಿದ್ದಾರೆ. ತಂದೆ ಬೇಜಾರಾಗಿದ್ದಾರೆ. 40 ವರ್ಷ ಕಳಂಕ ಇಲ್ಲದೇ ರಾಜಕಾರಣ ಮಾಡಿದ್ದಾರೆ. ಸತ್ಯ ನಮ್ಮ ಕಡೆ ಇದೆ. ಸತ್ಯ ಹೊರಗೆ ಬರುತ್ತೆ ಎಂದರು

ಈ ಸ್ಟಿಂಗ್ ಆಪರೇಷನ್ ಹಿಂದೆ ಯಾರು ಇದ್ದಾರೆ, ನಮ್ಮ ಪಕ್ಷದವರೇ ಮಾಡಿದ್ದಾರೆಯೇ ಅಥವಾ ಬೇರೆಯವರ ಕೈವಾಡವಿದೆಯೇ ಎಂಬುದು ತನಿಖೆಯಿಂದ ಹೊರಬರಬೇಕು ಎಂದು ಅವರು ಹೇಳಿದರು.

ವಿಡಿಯೋದಲ್ಲಿ ಕಾಣಿಸಿಕೊಂಡಿರುವ ಮಹಿಳೆಯೊಬ್ಬರು ಪುತ್ತೂರು ಟಿಕೆಟ್‌ಗಾಗಿ ಆಕಾಂಕ್ಷಿಯಾಗಿದ್ದರು ಎಂಬ ಮಾಹಿತಿ ಇದೆ. ಹಾಗಾಗಿ, ರಾಜಕೀಯ ಲಾಭಕ್ಕಾಗಿ ಮತ್ತು ಸಿದ್ದರಾಮಯ್ಯ ಹೆಸರನ್ನು ಕೆಡಿಸಲು ಈ ರೀತಿಯ ಕೃತ್ಯಕ್ಕೆ ಮುಂದಾಗಿರುವುದು ಸ್ಪಷ್ಟವಾಗಿ ಗೋಚರಿಸುತ್ತದೆ ಎಂದು ಅವರು ಅಭಿಪ್ರಾಯಪಟ್ಟರು. ಸಿದ್ದರಾಮಯ್ಯ ಘನತೆಯನ್ನು ಹಾಳುಮಾಡಲು, ಅವರ ರಾಜಕೀಯ ಜೀವನಕ್ಕೆ ಕಪ್ಪು ಚುಕ್ಕೆ ಇಡಲು ಮತ್ತು ಬ್ಲಾಕ್‌ಮೇಲ್ ಮಾಡಲು ಈ ಯತ್ನ ನಡೆದಿದೆ ಎಂದು ಯತೀಂದ್ರ ಆರೋಪಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಚುನಾವಣಾ ಆಯೋಗದೊಳಗೆ ತೀವ್ರ ಮುಸುಕಿನ ಗುದ್ದಾಟ: ಉಪ ಚುನಾವಣಾ ಆಯುಕ್ತರ ವಿರುದ್ಧ ಕ್ಯಾಬಿನೆಟ್ ಕಾರ್ಯದರ್ಶಿಗೆ ದೂರು ನೀಡಿದ ಆಯುಕ್ತರು, ಕೇಂದ್ರ ಹೇಳಿದ್ದೇನು?

ವಿಧಾನ ಪರಿಷತ್ ಚುನಾವಣೆಗೆ ಮತದಾನ ಆರಂಭ: ಅಕ್ಟೋಬರ್ 27 ರಂದು ಫಲಿತಾಂಶ ಪ್ರಕಟ

ಕಾರ್ಗಿಲ್‌ನಲ್ಲಿ ಮಡಿದ ಸೈನಿಕರ ಶವಗಳನ್ನೇ ತಿರಸ್ಕರಿಸಿದ್ದು ನೀವು: ಪಾಕ್ ಯೋಧರಿಗೆ ಸಂಪ್ರದಾಯಬದ್ಧ ಅಂತ್ಯಕ್ರಿಯೆ ಮಾಡಿದ್ದು ನಾವು; ಉಪದೇಶ ಮಾಡುವ ನೈತಿಕತೆಯಿಲ್ಲ!

ಟಿಬೆಟ್‌ನಲ್ಲಿ ಪ್ರಬಲ ಭೂಕಂಪ: ನೂರಾರು ಮನೆಗಳು ಧರಾಶಾಹಿ; ಕನಿಷ್ಟ 16 ಮಂದಿ ಸಾವು, 54ಕ್ಕೂ ಹೆಚ್ಚು ಜನರಿಗೆ ಗಂಭೀರ ಗಾಯ..!

ಮೆಟ್ರೋ ನಿಲ್ದಾಣಗಳಿಗೆ ಜಯಲಲಿತಾ, ಕರುಣಾನಿಧಿ, ಎಂ.ಜಿ.ಆರ್. ಹೆಸರು! ಬೆಂಗಳೂರು-ಹೊಸೂರು ಮೆಟ್ರೋಗೆ ಕನ್ನಡ ಸಂಘಟನೆಗಳ ವಿರೋಧ: ಮಿನಿ ತಮಿಳುನಾಡು ಆಗುತ್ತಾ ಸಿಲಿಕಾನ್ ಸಿಟಿ?