ಕಾವೇರಿ ಜಲ  
ರಾಜ್ಯ

ಕರ್ನಾಟಕಕ್ಕೆ ಮತ್ತೆ ಕಾವೇರಿ ಶಾಕ್: ತಮಿಳುನಾಡಿಗೆ ನಿತ್ಯ 3 ಸಾವಿರ ಕ್ಯೂಸೆಕ್ ನೀರು ಹರಿಸಲು CWRC ಆದೇಶ..!

ಈವರೆಗೆ ಕರ್ನಾಟಕ ತನ್ನ ಪಾಲಿನ ನೀರನ್ನು ಸಂಪೂರ್ಣವಾಗಿ ಬಿಡುಗಡೆ ಮಾಡಿಲ್ಲ ಎಂದು ತಮಿಳುನಾಡು ಆಕ್ಷೇಪಿಸಿದ್ದು, ಹೆಚ್ಚಿನ ಪ್ರಮಾಣದ ನೀರು ಹರಿಸುವಂತೆ ಮನವಿ ಸಲ್ಲಿಸಿತು.

ನವದೆಹಲಿ: ತಮಿಳುನಾಡಿಗೆ ಪ್ರತಿದಿನ 3,000 ಕ್ಯುಸೆಕ್ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿಯಂತ್ರಣ ಸಮಿತಿ ಶಿಫಾರಸು ಮಾಡಿದೆ. ಮುಂದಿನ 15 ದಿನಗಳ ಅವಧಿಯಲ್ಲಿ ಒಟ್ಟು 3 ಟಿಎಂಸಿ ಅಡಿ ನೀರು ಬಿಡುಗಡೆ ಮಾಡುವಂತೆಯೂ ಸಮಿತಿ ಸೂಚಿಸಿದೆ.

ಶುಕ್ರವಾರ ನಡೆದ ಸಭೆಯಲ್ಲಿ ಕರ್ನಾಟಕ ಮತ್ತು ತಮಿಳುನಾಡಿನ ಜಲಾಶಯಗಳಲ್ಲಿನ ನೀರಿನ ಲಭ್ಯತೆ ಹಾಗೂ ಎರಡೂ ರಾಜ್ಯಗಳ ನೀರಿನ ಪರಿಸ್ಥಿತಿಯ ಕುರಿತು ಮಾಹಿತಿ ಪಡೆಯಲಾಯಿತು.

ಈವರೆಗೆ ಕರ್ನಾಟಕ ತನ್ನ ಪಾಲಿನ ನೀರನ್ನು ಸಂಪೂರ್ಣವಾಗಿ ಬಿಡುಗಡೆ ಮಾಡಿಲ್ಲ ಎಂದು ತಮಿಳುನಾಡು ಆಕ್ಷೇಪಿಸಿದ್ದು, ಹೆಚ್ಚಿನ ಪ್ರಮಾಣದ ನೀರು ಹರಿಸುವಂತೆ ಮನವಿ ಸಲ್ಲಿಸಿತು.

ಇದಕ್ಕೆ ಪ್ರತಿಕ್ರಿಯಿಸಿದ ಕರ್ನಾಟಕ, ಈಗಾಗಲೇ ಕಾವೇರಿ ನದಿಯ ಮೂಲಕ ತಮಿಳುನಾಡಿಗೆ ಹೆಚ್ಚಿನ ಪ್ರಮಾಣದ ನೀರು ಹರಿಸಲಾಗಿದೆ ಎಂದು ತಿಳಿಸಿತು.

ರಾಜ್ಯದಲ್ಲಿ ಮಳೆಯ ಕೊರತೆಯಿಂದ ಜಲಾಶಯಗಳ ನೀರಿನ ಮಟ್ಟ ಕುಸಿದಿದ್ದು, ಈ ಪರಿಸ್ಥಿತಿಯಲ್ಲಿ ಮತ್ತಷ್ಟು ನೀರು ಬಿಡುಗಡೆ ಮಾಡುವುದು ಕಷ್ಟಕರವಾಗಿದೆ ಎಂದು ತನ್ನ ವಾದವನ್ನು ಮಂಡಿಸಿತು.

ಎರಡೂ ರಾಜ್ಯಗಳ ವಾದಗಳನ್ನು ಆಲಿಸಿದ ಸಮಿತಿ, ತಮಿಳುನಾಡಿಗೆ ಪ್ರತಿದಿನ 3,000 ಕ್ಯುಸೆಕ್ ನೀರು ಹರಿಸುವಂತೆ ಕರ್ನಾಟಕಕ್ಕೆ ಸೂಚಿಸಿದ್ದು, 15 ದಿನಗಳ ಅವಧಿಯಲ್ಲಿ ಒಟ್ಟು 3 ಟಿಎಂಸಿ ಅಡಿ ನೀರು ಹರಿಸುವಂತೆಯೂ ಸೂಚನೆ ನೀಡಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಪುತ್ತೂರು ಟಿಕೆಟ್ ಪಡೆಯಲು ಬ್ಲ್ಯಾಕ್‌ಮೇಲ್‌ ಯತ್ನ: ಸಿದ್ದರಾಮಯ್ಯ ಸ್ಟಿಂಗ್ ನಲ್ಲಿ ಕಾಂಗ್ರೆಸ್ ನವರ ಕೈವಾಡ; ಯತೀಂದ್ರ ಹೊಸ ಬಾಂಬ್

ಸ್ಟಿಂಗ್ ಮಾಡಿರೋನು ಡಿಕೆಶಿ ಬಲಗೈ ಬಂಟ: ಖಾಸಗಿ ಮಾಧ್ಯಮದ ಮುಖ್ಯಸ್ಥನ ಜೊತೆ ಕೆಲಸ ಮಾಡುತ್ತಿದ್ದ ವಿಕ್ಕಿ ಎಂಬ ವ್ಯಕ್ತಿ ಅನುಮಾನಾಸ್ಪದ ಸಾವು; HDK

ಜಂಬೂ ಸವಾರಿಗೆ ಪುಷ್ಪಾರ್ಚನೆ ಪ್ರೋಟೋಕಾಲ್‌ನಲ್ಲಿ ಸಿಎಂ ಪತ್ನಿ ಹೆಸರು ಇರಲಿಲ್ಲ: ಶಿಷ್ಟಾಚಾರ ಉಲ್ಲಂಘನೆಯಾದ್ರೂ ತಪ್ಪೇನಿಲ್ಲ; ಯತೀಂದ್ರ

ಚುನಾವಣಾ ಆಯೋಗದೊಳಗೆ ತೀವ್ರ ಮುಸುಕಿನ ಗುದ್ದಾಟ: ಉಪ ಚುನಾವಣಾ ಆಯುಕ್ತರ ವಿರುದ್ಧ ಕ್ಯಾಬಿನೆಟ್ ಕಾರ್ಯದರ್ಶಿಗೆ ದೂರು ನೀಡಿದ ಆಯುಕ್ತರು, ಕೇಂದ್ರ ಹೇಳಿದ್ದೇನು?

ವಿಧಾನ ಪರಿಷತ್ ಚುನಾವಣೆಗೆ ಮತದಾನ ಆರಂಭ: ಅಕ್ಟೋಬರ್ 27 ರಂದು ಫಲಿತಾಂಶ ಪ್ರಕಟ