ರಾಕೇಶ್ ಶೆಟ್ಟಿ 
ರಾಜ್ಯ

ಸ್ಟಿಂಗ್ ಆಪರೇಷನ್: ರಾಕೇಶ್ ಶೆಟ್ಟಿಗೆ ಷರತ್ತು ಬದ್ಧ ನಿರೀಕ್ಷಣಾ ಜಾಮೀನು ಮಂಜೂರು!

1 ಲಕ್ಷ ರೂ. ಮೌಲ್ಯದ ವೈಯಕ್ತಿಕ ಬಾಂಡ್, ಒಬ್ಬರ ಶ್ಯೂರಿಟಿ ನೀಡಬೇಕು. ತನಿಖೆಗೆ ಸಹಕರಿಸಬೇಕು ಮತ್ತು ಸಾಕ್ಷ್ಯನಾಶಕ್ಕೆ ಯತ್ನಿಸಬಾರದು ಎಂದು ನ್ಯಾಯಾಲಯ ಷರತ್ತು ವಿಧಿಸಿದೆ.

ಬೆಂಗಳೂರು: ರಾಜ್ಯದಲ್ಲಿ ಸಂಚಲನ ಮೂಡಿಸಿರುವ 'ಸ್ಟಿಂಗ್ ಆಪರೇಷನ್' ಕಾರ್ಯಾಚರಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಖಾಸಗಿ ಸುದ್ದಿ ವಾಹಿನಿಯೊಂದರ ಮುಖ್ಯಸ್ಥರಾದ ರಾಕೇಶ್ ಶೆಟ್ಟಿಗೆ ಬೆಂಗಳೂರಿನ 66ನೇ ಸಿಸಿಎಚ್ ನ್ಯಾಯಾಲಯ ಷರತ್ತು ಬದ್ಧ ಜಾಮೀನು ಮಂಜೂರು ಮಾಡಿದೆ.

1 ಲಕ್ಷ ರೂ. ಮೌಲ್ಯದ ವೈಯಕ್ತಿಕ ಬಾಂಡ್, ಒಬ್ಬರ ಶ್ಯೂರಿಟಿ ನೀಡಬೇಕು. ತನಿಖೆಗೆ ಸಹಕರಿಸಬೇಕು ಮತ್ತು ಸಾಕ್ಷ್ಯನಾಶಕ್ಕೆ ಯತ್ನಿಸಬಾರದು ಎಂದು ನ್ಯಾಯಾಲಯ ಷರತ್ತು ವಿಧಿಸಿದೆ.

ರಾಕೇಶ್ ಶೆಟ್ಟಿ ವಶಕ್ಕೆ ಪಡೆದು ವಿಚಾರಣೆ: ಸ್ಟಿಂಗ್ ಆಪರೇಷನ್ ಸಂಬಂಧ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ದೂರು ದಾಖಲಿಸಿದ್ದರು. ಈ ದೂರಿನ ಅನ್ವಯ ತನಿಖೆ ನಡೆಸುತ್ತಿರುವ ನಗರ ಕೇಂದ್ರ ಅಪರಾಧ ವಿಭಾಗದ ಪೊಲೀಸರು, ರಾಕೇಶ್ ಶೆಟ್ಟಿ ಅವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿ, ಬಿಡುಗಡೆ ಮಾಡಿದ್ದಾರೆ.

ಮುಂದಿನ ವಿಚಾರಣೆಗೆ ಹಾಜರಾಗುವಂತೆ ಸೂಚಿಸಿ ನೋಟಿಸ್ ಸಹ ಜಾರಿ ಮಾಡಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಕಳೆದ ಒಂದು ವಾರದಿಂದ ಪ್ರಕರಣದ ಮಾಹಿತಿ ಕಲೆ ಹಾಕುತ್ತಿದ್ದ ಸೈಬರ್ ಪೊಲೀಸರು, ಇದೀಗ ಪ್ರಕರಣದ ತನಿಖೆ ಚುರುಕು ಮಾಡಿದ್ದಾರೆ. ಈ ಬೆಳವಣಿಗೆ ಬೆನ್ನಲ್ಲೇ ರಾಕೇಶ್ ಶೆಟ್ಟಿ, ನಿರೀಕ್ಷಣಾ ಜಾಮೀನು ಕೋರಿ ಕೋರ್ಟ್ ಮೊರೆ ಹೋಗಿದ್ದರು.

ಮೈಸೂರಿನ ಖಾಸಗಿ ಹೋಟೆಲ್ ನಲ್ಲಿ ಕಳೆದ ನಾಲ್ಕು ದಿನಗಳಿಂದ ವಾಸ್ತವ್ಯ ಹೂಡಿದ್ದ ರಾಕೇಶ್ ಅವರನ್ನು ಪೊಲೀಸರು ಬುಧವಾರ ರಾತ್ರಿ ವಶಕ್ಕೆ ಪಡೆದು ಗುರುವಾರ ಮುಂಜಾನೆ ನಗರಕ್ಕೆ ಕರೆತಂದಿದ್ದರು ಎಂದು ಮೂಲಗಳು ತಿಳಿಸಿವೆ.

ಸ್ಟಿಂಗ್ ಆಪರೇಷನ್ ಪ್ರಕರಣದ ಪ್ರಮುಖ ಆರೋಪಿ ರಾಕೇಶ್ ಶೆಟ್ಟಿ ಬಂಧಿಸುವಂತೆ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು ನಗರ ಪೊಲೀಸ್ ಆಯುಕ್ತರು ಹಾಗೂ ರಾಜ್ಯ ಪೊಲೀಸ್ ಮಹಾನಿರ್ದೇಶಕರಿಗೆ ದೂರು ನೀಡಿದ್ದರು. ಅಲ್ಲದೇ ಕಚೇರಿಗಳ ಮುಂದೆ ಪ್ರತಿಭಟನೆ ನಡೆಸಿ ಕ್ರಮಕ್ಕೆ ಒತ್ತಾಯಿಸಿ ಗಡುವು ನೀಡಿದ್ದರು. ಇದೇ ಪ್ರಕರಣದಲ್ಲಿ ಇನ್ನೂ ಇಬ್ಬರ ಪಾತ್ರವಿದೆ ಎಂದು ಆರೋಪಿಸಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನನ್ನ ಪರ HDK ಏಕೆ ನಿಲ್ಲಬೇಕು?: 'ಸ್ಟಿಂಗ್ ಆಪರೇಷನ್' ಕಟ್ಟುಕಥೆ, ಬ್ಲ್ಯಾಕ್‌ಮೇಲ್ ಉದ್ದೇಶ- ನಿಷ್ಪಕ್ಷಪಾತ ತನಿಖೆಗೆ ಸಿದ್ದರಾಮಯ್ಯ ಆಗ್ರಹ

ಕರ್ನಾಟಕದಲ್ಲಿ 43.82 ಲಕ್ಷ SIR ನೋಟಿಸ್‌ ವಿಚಾರಣೆ ಪೂರ್ಣ; ಅ.27ಕ್ಕೆ ಅಂತಿಮ ಮತದಾರರ ಪಟ್ಟಿ ಪ್ರಕಟ

'ಈಗಲೂ ಬಿಡಲ್ಲ, ಶೀಘ್ರದಲ್ಲೇ ಮುಖವಾಡ ಕಳಚುತ್ತೇನೆ'; ತಾರಕಕ್ಕೇರಿದ 'ಪೋಸ್ಟ್' ವಾರ್, ಪೊಲೀಸ್ ಕೇಸ್ ಕುರಿತು ನಟ ಧನ್ವೀರ್‌ ಪರೋಕ್ಷ ವಾರ್ನಿಂಗ್‌?

ಪುತ್ತೂರು ಟಿಕೆಟ್ ಪಡೆಯಲು ಬ್ಲ್ಯಾಕ್‌ಮೇಲ್‌ ಯತ್ನ; ಸಿದ್ದರಾಮಯ್ಯ ಸ್ಟಿಂಗ್ ನಲ್ಲಿ ಕಾಂಗ್ರೆಸ್ ನವರ ಕೈವಾಡ: ಯತೀಂದ್ರ ಹೊಸ ಬಾಂಬ್; Video

SIR ವಿರುದ್ಧ ಸಿಜೆಪಿ ಪ್ರತಿಭಟನೆ ಮುಂದುವರಿಕೆ: ಶೀಘ್ರದಲ್ಲೇ ಮುಂದಿನ ಘೋಷಣೆ!