ಸಾಂದರ್ಭಿಕ ಚಿತ್ರ 
ರಾಜ್ಯ

ಎಸ್ ಎಸ್ ಎಲ್ ಸಿ ಮತ್ತು ಪಿಯುಸಿ ವಾರ್ಷಿಕ ಪಬ್ಲಿಕ್ ಪರೀಕ್ಷೆ ಮುಂದೂಡಿಕೆ ಸಾಧ್ಯತೆ!

ಕೇಂದ್ರ ಸರ್ಕಾರದ ಯೋಜನೆಯಂತೆ ಜನಗಣತಿಯ ಎರಡನೇ ಸುತ್ತಿನ ಕಾರ್ಯಚರಣೆಯು ಜನವರಿ 25ರಿಂದ ಆರಂಭಗೊಂಡು ಫೆಬ್ರವರಿ 28ರವರೆಗೆ ನಡೆಯಲಿದೆ.

ಬೆಂಗಳೂರು: ರಾಜ್ಯದಲ್ಲಿ ಮುಂಬರುವ ಎಸ್‌ಎಸ್‌ಎಲ್‌ಸಿ ಮತ್ತು ದ್ವಿತೀಯ ಪಿಯುಸಿ ವಾರ್ಷಿಕ ಪಬ್ಲಿಕ್ ಪರೀಕ್ಷೆಗಳು ಮುಂದೂಡಲ್ಪಡುವ ಸಾಧ್ಯತೆ ದಟ್ಟವಾಗಿದೆ. ಕೇಂದ್ರ ಸರ್ಕಾರದ ಜನಗಣತಿ ಕಾರ್ಯಕ್ರಮದ ಎರಡನೇ ಹಂತದ ಕಾರ್ಯಾಚರಣೆ ಜನವರಿಯಿಂದ ಆರಂಭವಾಗುತ್ತಿರುವುದೇ ಇದಕ್ಕೆ ಮುಖ್ಯ ಕಾರಣವಾಗಿದೆ.

ಶಾಲಾ ಶಿಕ್ಷಕರು ಜನಗಣತಿ ಕಾರ್ಯದಲ್ಲಿ ಸಕ್ರಿಯವಾಗಿ ಭಾಗವಹಿಸಬೇಕಿರುವುದರಿಂದ, ಪರೀಕ್ಷೆಗಳ ದಿನಾಂಕಗಳಲ್ಲಿ ಬದಲಾವಣೆ ಮಾಡುವಂತೆ ಶಾಲಾ ಶಿಕ್ಷಣ ಇಲಾಖೆಗೆ 'ಕೇಂದ್ರ ಜನಗಣತಿ ಕಾರ್ಯಾಚರಣೆ ನಿರ್ದೇಶನಾಲಯ' ಅಧಿಕೃತ ಪತ್ರ ಬರೆದು ಮನವಿ ಮಾಡಿದೆ. ಕೇಂದ್ರದ ನಿರ್ದೇಶನದಂತೆ ಪರೀಕ್ಷಾ ಮಂಡಳಿಯು ಶೀಘ್ರದಲ್ಲೇ ಹೊಸ ವೇಳಾಪಟ್ಟಿಯನ್ನು ಪ್ರಕಟಿಸುವ ನಿರೀಕ್ಷೆಯಿದೆ.

ಕೇಂದ್ರ ಸರ್ಕಾರದ ಯೋಜನೆಯಂತೆ ಜನಗಣತಿಯ ಎರಡನೇ ಸುತ್ತಿನ ಕಾರ್ಯಚರಣೆಯು ಜನವರಿ 25ರಿಂದ ಆರಂಭಗೊಂಡು ಫೆಬ್ರವರಿ 28ರವರೆಗೆ ನಡೆಯಲಿದೆ.

ತದನಂತರ ಮಾರ್ಚ್ 1 ರಿಂದ ಮಾರ್ಚ್ 5ರವರೆಗೆ ಪರಿಷ್ಕರಣಾ ಸುತ್ತು ನಡೆಯಲಿದೆ. ಈ ಸಮಯದಲ್ಲೇ ಪರೀಕ್ಷೆಗಳೂ ಎದುರಾಗುವುದರಿಂದ ಶಿಕ್ಷಕರ ನಿಯೋಜನೆ ಹಾಗೂ ಪರೀಕ್ಷಾ ನಿರ್ವಹಣೆಗೆ ತೊಡಕಾಗಬಾರದೆಂಬ ಉದ್ದೇಶದಿಂದ ಪರೀಕ್ಷೆಗಳನ್ನು ಮುಂದೂಡುವಂತೆ ಮನವಿ ಸಲ್ಲಿಕೆಯಾಗಿದೆ.

ಈ ಹಿಂದೆ ಪ್ರಕಟಿಸಲಾಗಿದ್ದ ತಾತ್ಕಾಲಿಕ ವೇಳಾಪಟ್ಟಿ ವಿವರ:

ಎಸ್‌ಎಸ್‌ಎಲ್‌ಸಿ ಪರೀಕ್ಷೆ-1: ಮಾರ್ಚ್ 22 ರಿಂದ ಏಪ್ರಿಲ್ 5

ಎಸ್‌ಎಸ್‌ಎಲ್‌ಸಿ ಪರೀಕ್ಷೆ-2: ಮೇ 24 ರಿಂದ ಮೇ 31

ದ್ವಿತೀಯ ಪಿಯುಸಿ ಪರೀಕ್ಷೆ-1: ಫೆಬ್ರವರಿ 27 ರಿಂದ ಮಾರ್ಚ್ 17

ದ್ವಿತೀಯ ಪಿಯುಸಿ ಪರೀಕ್ಷೆ-2: ಮೇ 3 ರಿಂದ ಮೇ 15

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಚುನಾವಣಾ ಆಯೋಗದೊಳಗೆ ತೀವ್ರ ಮುಸುಕಿನ ಗುದ್ದಾಟ: ಉಪ ಚುನಾವಣಾ ಆಯುಕ್ತರ ವಿರುದ್ಧ ಕ್ಯಾಬಿನೆಟ್ ಕಾರ್ಯದರ್ಶಿಗೆ ದೂರು ನೀಡಿದ ಆಯುಕ್ತರು, ಕೇಂದ್ರ ಹೇಳಿದ್ದೇನು?

ಟಿಬೆಟ್‌ನಲ್ಲಿ ಪ್ರಬಲ ಭೂಕಂಪ: ನೂರಾರು ಮನೆಗಳು ಧರಾಶಾಹಿ; ಕನಿಷ್ಟ 16 ಮಂದಿ ಸಾವು, 54ಕ್ಕೂ ಹೆಚ್ಚು ಜನರಿಗೆ ಗಂಭೀರ ಗಾಯ..!

ಮೆಟ್ರೋ ನಿಲ್ದಾಣಗಳಿಗೆ ಜಯಲಲಿತಾ, ಕರುಣಾನಿಧಿ, ಎಂ.ಜಿ.ಆರ್. ಹೆಸರು! ಬೆಂಗಳೂರು-ಹೊಸೂರು ಮೆಟ್ರೋಗೆ ಕನ್ನಡ ಸಂಘಟನೆಗಳ ವಿರೋಧ: ಮಿನಿ ತಮಿಳುನಾಡು ಆಗುತ್ತಾ ಸಿಲಿಕಾನ್ ಸಿಟಿ?

ಇಸ್ರೋದ ಉಪಗ್ರಹ ಉಡಾವಣೆ ವೈಫಲ್ಯಕ್ಕಿಂತ ಕಾಂಗ್ರೆಸ್ ನಾಯಕನ ರೀ ಲಾಂಚ್ ಫೈಲ್ಯೂರ್ ಹೆಚ್ಚಾಗಿದೆ : ಪ್ರಧಾನಿ ಮೋದಿ ವ್ಯಂಗ್ಯ; Video

ರಾಜ್ಯದಲ್ಲಿ ಭೀಕರ ಬರ: 62,481 ಕೋಟಿ ರೂ. ಬೆಳೆ ನಷ್ಟ, ನೆರವು ಕೋರಿ ಪ್ರಧಾನಿ ಮೋದಿಗೆ DCM ಪರಮೇಶ್ವರ್ ಪತ್ರ