ಬೆಂಗಳೂರು: ನಟ ಧನ್ವೀರ್ ವಿರುದ್ಧ ದರ್ಶನ್ ಪತ್ನಿ ವಿಜಯಲಕ್ಷ್ಮಿ ಅವರ ಮ್ಯಾನೇಜರ್ ನಾಗರಾಜ್ ಬೆಂಗಳೂರಿನ ಆರ್.ಆರ್. ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ನಾಗರಾಜ್ ಅವರನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿದ ಆರೋಪದ ಹಿನ್ನೆಲೆಯಲ್ಲಿ ಪೊಲೀಸರು ಧನ್ವೀರ್ ವಿರುದ್ಧ ಎನ್‌ಸಿಆರ್ ದಾಖಲಿಸಿಕೊಂಡಿದ್ದಾರೆ. ನಾಗರಾಜ್ ನೀಡಿರುವ ದೂರಿನ ಆಧಾರದ ಮೇಲೆ ಆರ್.ಆರ್. ನಗರ ಪೊಲೀಸರು ಪ್ರಕರಣದ ಕುರಿತು ಮಾಹಿತಿ ಕಲೆಹಾಕುತ್ತಿದ್ದಾರೆ.
ನಟ ಧನ್ವೀರ್ ವಿರುದ್ಧ ಕೇಳಿಬಂದಿರುವ ಆರೋಪಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸಿ ಮುಂದಿನ ಕ್ರಮ ಕೈಗೊಳ್ಳಲು ಪೊಲೀಸರು ಮುಂದಾಗಿದ್ದಾರೆ. ಕೆಲ ವಿಚಾರಗಳ ಬಗ್ಗೆ ಮಾತನಾಡಲು ಧನ್ವೀರ್ ಮನೆಗೆ ನಾಗರಾಜ್ ಹೋಗಿದ್ದಾರೆ.
ಆದರೆ, ಆಗ ಮನೆಯಲ್ಲಿ ಇಲ್ಲದ ಧ್ವನೀರ್ ಪೋನ್ ಸಂಭಾಷಣೆ ವೇಳೆಯಲ್ಲಿ ಅವಾಚ್ಯವಾಗಿ ನಿಂದಿಸಿದ್ದಾರೆ ಎನ್ನಲಾಗಿದೆ.
ಇತ್ತೀಚೆಗೆ ಧನ್ವೀರ್ ತಮ್ಮ ಇನ್‌ಸ್ಟಾಗ್ರಾಮ್ ಅಕೌಂಟ್‌ನಲ್ಲಿ ಹಂಚಿಕೊಂಡಿದ್ದ ಸ್ಟೋರಿ ಒಂದು ಭಾರೀ ವೈರಲ್ ಆಗಿತ್ತು. ಚಿತ್ರರಂಗದ ಪ್ರಸ್ತುತ ಬೆಳವಣಿಗೆಗಳು, ಹಬ್ಬದ ಸಂಭ್ರಮ ಹಾಗೂ ನಟ ದರ್ಶನ್ ತೂಗುದೀಪ ಅವರ ಅಭಿಮಾನಿ ಬಳಗದಲ್ಲಿ ಈ ಪೋಸ್ಟ್ ಹೊಸ ಚರ್ಚೆಯನ್ನ ಹುಟ್ಟುಹಾಕಿತ್ತು.
“ಕೆಲವರಿರುತ್ತಾರೆ ಶಕುನಿ ಅಂತವರು ಕೊನೆವರೆಗೂ ಆಟವಾಡಿ ಕೊನೆಗೆ ತಾವೆ ಸಂತ್ರಸ್ತರಂತೆ ನಟಿಸುತ್ತಾರೆ. ಸತ್ಯಕ್ಕೆ ಯಾವತ್ತೂ ಸಾಕ್ಷಿ ಬೇಕಾಗಿಲ್ಲ, ಕಾಲವೇ ಉತ್ತರ ಕೊಡುತ್ತೆ" ಎಂದು ಧನ್ವೀರ್ ಗೌಡ ಪೋಸ್ಟ್ ಶೇರ್ ಮಾಡಿಕೊಂಡಿದ್ದರು.
ಈ ಪೋಸ್ಟ್ ವೈರಲ್ ಆದ ಬೆನ್ನಲ್ಲೇ, ಯಾರನ್ನ ಉದ್ದೇಶಿಸಿ ಈ ಪೋಸ್ಟ್ ಹಾಕಿದ್ದಾರೆ ಧನ್ವೀರ್? ಈ ಟಾಂಗ್ ಯಾರಿಗೆ? ಎಂದೆಲ್ಲಾ ಸೋಶಿಯಲ್ ಮೀಡಿಯಾದಲ್ಲಿ ಚರ್ಚೆಯಾಗ್ತಿದೆ.