ಯತೀಂದ್ರ ಸಿದ್ದರಾಮಯ್ಯ 
ರಾಜ್ಯ

ಜಂಬೂ ಸವಾರಿಗೆ ಪುಷ್ಪಾರ್ಚನೆ ಪ್ರೋಟೋಕಾಲ್‌ನಲ್ಲಿ ಸಿಎಂ ಪತ್ನಿ ಹೆಸರು ಇರಲಿಲ್ಲ: ಶಿಷ್ಟಾಚಾರ ಉಲ್ಲಂಘನೆಯಾದ್ರೂ ತಪ್ಪೇನಿಲ್ಲ; ಯತೀಂದ್ರ

ದಸರಾ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಸಿಎಂ ಪತ್ನಿ ಪುಷ್ಪಾರ್ಚನೆ ಮಾಡಿದ್ದು, ಇದು ಶಿಷ್ಟಾಚಾರದ ಉಲ್ಲಂಘನೆಯಾಗಿದೆ ಎಂಬ ಆರೋಪ ಕೇಳಿಬಂದಿದೆ.

ಮೈಸೂರು: ಮುಖ್ಯಮಂತ್ರಿಯಾಗಿ ಡಿಕೆ ಶಿವಕುಮಾರ್ ಅವರು ಮೊದಲ ಬಾರಿಗೆ ಜಂಜೂಸವಾರಿಗೆ ಪುಷ್ಪಾರ್ಚನೆ ಮಾಡಿದ್ದು, ದಸರಾ ಕೂಡ ಯಶಸ್ವಿಯಾಗಿ ನೆರವೇರಿದೆ.

ದಸರಾ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಸಿಎಂ ಪತ್ನಿ ಪುಷ್ಪಾರ್ಚನೆ ಮಾಡಿದ್ದು, ಇದು ಶಿಷ್ಟಾಚಾರದ ಉಲ್ಲಂಘನೆಯಾಗಿದೆ ಎಂಬ ಆರೋಪ ಕೇಳಿಬಂದಿದೆ.

ಈ ಸಂಬಂಧ ಪ್ರತಿಕ್ರಿಯಿಸಿರುವ ಯತೀಂದ್ರ ಸಿದ್ದರಾಮಯ್ಯ, ಶಿಷ್ಟಾಚಾರ ಪಟ್ಟಿಯಲ್ಲಿ ಮುಖ್ಯಮಂತ್ರಿಗಳ ಪತ್ನಿ ಹೆಸರು ಇರಲಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಪ್ರೋಟೋಕಾಲ್ ಪಟ್ಟಿಯಲ್ಲಿ ಸಿಎಂ ಪತ್ನಿ ಹೆಸರು ಇರಲಿಲ್ಲ. ಆದ್ರೂ ಸಿಎಂ ಪತ್ನಿ ಉಷಾ ಶಿವಕುಮಾರ್‌ ಅವರು ಪುಷ್ಪಾರ್ಚನೆ ಮಾಡಿರುವುದು ತಪ್ಪೇನಿಲ್ಲ. ಅವರು ದೇವಿಗೆ ಪುಷ್ಪಾರ್ಚನೆ ಮಾಡಿದ್ದಾರೆ ಅಷ್ಟೇ. ಸರ್ಕಾರದ ಕೆಲಸವನ್ನೇನು ಮಾಡಿಲ್ವಲ್ಲ? ಹೀಗಾಗಿ ಶಿಷ್ಟಾಚಾರ ಉಲ್ಲಂಘನೆಯಾದ್ರೂ ತಪ್ಪೇನಿಲ್ಲ ಎಂದು ಸಮರ್ಥನೆ ಮಾಡಿಕೊಂಡಿದ್ದಾರೆ.

ಇನ್ನೂ ನಂದಿ ಕಂಬ ಪೂಜೆ ವೇಳೆ ಸಚಿವರನ್ನ ತಡೆದ ವಿಚಾರ ಕುರಿತು ಮಾತನಾಡಿ, ಸಚಿವರನ್ನ ತಡೆಯಬಾರದಿತ್ತು. ಐಜಿಪಿ ದರ್ಜೆಯ ಅಧಿಕಾರಿ ಯಾಕೆ ಈ ರೀತಿ ಮಾಡಿದ್ರು ಗೊತ್ತಿಲ್ಲ. ಪೊಲೀಸರು ಓವರ್ ಬೋರ್ಡ್ ಆಗಿ ವರ್ತಿದ್ದಾರೆ. ಸರ್ಕಾರ ತನಿಖೆಗೆ ಸೂಚನೆ ನೀಡಿದೆ, ತನಿಖೆ ನಡೆಯುತ್ತಿದೆ. ಶಿಷ್ಟಾಚಾರದ ಪ್ರಕಾರ ಮಂತ್ರಿಗಳನ್ನ ತಡೆಯಬಾರದಿತ್ತು ಎಂದಿದ್ದಾರೆ.

ಸಚಿವರನ್ನ ತಡೆಯಲು ಯಾರಾದರೂ ಸೂಚನೆ ಕೊಟಿದ್ರಾ ಎಂಬ ಪ್ರಶ್ನೆಗೆ ಉತ್ತರಿಸಿ, ಈ ಬಗ್ಗೆ ನಮಗೆ ಗೊತ್ತಿಲ್ಲ. ಈ ವಿಚಾರವಾಗಿಯೇ ತನಿಖೆ ನಡೆಯುತ್ತಿದೆ. ತನಿಖಾ ತಂಡದ ಮುಂದೆ ಅಧಿಕಾರಿ ಉತ್ತರ ಕೊಡುತ್ತಾರೆ. ಮೂವರು ಕೂಡ ದಲಿತ ಸಚಿವರು. ಸಚಿವರಾದ ಬಾಲಕೃಷ್ಣ, ಪುಟ್ಟರಂಗಶೆಟ್ಟಿ ಅವರನ್ನೂ ತಡೆದಿದ್ರು. ನಾನೇ ಸಿಎಂಗೆ ಹೇಳಿ ಬಿಡಿಸಿದ್ದೇನೆ ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಪುತ್ತೂರು ಟಿಕೆಟ್ ಪಡೆಯಲು ಬ್ಲ್ಯಾಕ್‌ಮೇಲ್‌ ಯತ್ನ: ಸಿದ್ದರಾಮಯ್ಯ ಸ್ಟಿಂಗ್ ನಲ್ಲಿ ಕಾಂಗ್ರೆಸ್ ನವರ ಕೈವಾಡ; ಯತೀಂದ್ರ ಹೊಸ ಬಾಂಬ್

ಸ್ಟಿಂಗ್ ಮಾಡಿರೋನು ಡಿಕೆಶಿ ಬಲಗೈ ಬಂಟ: ಖಾಸಗಿ ಮಾಧ್ಯಮದ ಮುಖ್ಯಸ್ಥನ ಜೊತೆ ಕೆಲಸ ಮಾಡುತ್ತಿದ್ದ ವಿಕ್ಕಿ ಎಂಬ ವ್ಯಕ್ತಿ ಅನುಮಾಸ್ಪದ ಸಾವು; HDK

ಚುನಾವಣಾ ಆಯೋಗದೊಳಗೆ ತೀವ್ರ ಮುಸುಕಿನ ಗುದ್ದಾಟ: ಉಪ ಚುನಾವಣಾ ಆಯುಕ್ತರ ವಿರುದ್ಧ ಕ್ಯಾಬಿನೆಟ್ ಕಾರ್ಯದರ್ಶಿಗೆ ದೂರು ನೀಡಿದ ಆಯುಕ್ತರು, ಕೇಂದ್ರ ಹೇಳಿದ್ದೇನು?

ವಿಧಾನ ಪರಿಷತ್ ಚುನಾವಣೆಗೆ ಮತದಾನ ಆರಂಭ: ಅಕ್ಟೋಬರ್ 27 ರಂದು ಫಲಿತಾಂಶ ಪ್ರಕಟ

ಕಾರ್ಗಿಲ್‌ನಲ್ಲಿ ಮಡಿದ ಸೈನಿಕರ ಶವಗಳನ್ನೇ ತಿರಸ್ಕರಿಸಿದ್ದು ನೀವು: ಪಾಕ್ ಯೋಧರಿಗೆ ಸಂಪ್ರದಾಯಬದ್ಧ ಅಂತ್ಯಕ್ರಿಯೆ ಮಾಡಿದ್ದು ನಾವು; ಉಪದೇಶ ಮಾಡುವ ನೈತಿಕತೆಯಿಲ್ಲ!