ದರ್ಶನ್, ವಿಜಯಲಕ್ಷ್ಮೀ, ಧನ್ವೀರ್ ಗೌಡ 
ರಾಜ್ಯ

ದರ್ಶನ್ ಜೈಲಿಂದ ಹೊರಬರೋದು ಪತ್ನಿ ವಿಜಯಲಕ್ಷ್ಮಿಗೆ ಇಷ್ಟ ಇಲ್ವಾ? ಧನ್ವೀರ್ ಆಡಿಯೋ ಬೆನ್ನಲ್ಲೇ ಸ್ನೇಹಿತನ ಆಡಿಯೋ ವೈರಲ್!

ಇನ್ನು ದರ್ಶನ್ ಆಪ್ತ ವಲಯದಲ್ಲಿ ಗುರುತಿಸಿಕೊಂಡಿರುವ ನಟ ಧನ್ವೀರ್ ಗೌಡ ಹಾಗೂ ದರ್ಶನ್ ಪತ್ನಿ ವಿಜಯಲಕ್ಷ್ಮೀ ನಡುವಿನ ಒಳ ಜಗಳ ಇದೀಗ ಪೊಲೀಸ್ ಠಾಣೆ ಮೆಟ್ಟಿಲೇರಿದ್ದು, ಇಬ್ಬರೂ ದೂರು, ಪ್ರತಿ ದೂರು ದಾಖಲಿಸಿದ್ದಾರೆ.

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ A2 ಆರೋಪಿಯಾಗಿರುವ ನಟ ದರ್ಶನ್ ಪ್ರಸ್ತುತ ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದಾರೆ.

ಇನ್ನು ದರ್ಶನ್ ಆಪ್ತ ವಲಯದಲ್ಲಿ ಗುರುತಿಸಿಕೊಂಡಿರುವ ನಟ ಧನ್ವೀರ್ ಗೌಡ ಹಾಗೂ ದರ್ಶನ್ ಪತ್ನಿ ವಿಜಯಲಕ್ಷ್ಮೀ ನಡುವಿನ ಒಳ ಜಗಳ ಇದೀಗ ಪೊಲೀಸ್ ಠಾಣೆ ಮೆಟ್ಟಿಲೇರಿದ್ದು, ಇಬ್ಬರೂ ದೂರು, ಪ್ರತಿ ದೂರು ದಾಖಲಿಸಿದ್ದಾರೆ.

ಈ ಎಲ್ಲಾ ಬೆಳವಣಿಗೆಗಳ ನಡುವೆಯೇ ನಟ ಧನ್ವೀರ್ ಮಾತನಾಡಿದ್ದಾರೆ ಎನ್ನಲಾದ ಆಡಿಯೋ ವೈರಲ್ ಆದ ಬೆನ್ನಲ್ಲೇ ಆತನ ಸ್ನೇಹಿತ ಶಶಿ ಮಾತನಾಡಿದ್ದಾರೆ ಎನ್ನಲಾದ ಮತ್ತೊಂದು ಆಡಿಯೋವೊಂದು ಇದೀಗ ವೈರಲ್ ಆಗಿದೆ.

ಆಡಿಯೋದಲ್ಲಿ ಏನಿದೆ?

ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ ಎನ್ನಲಾದ ಆಡಿಯೋದಲ್ಲಿ ಧನ್ವೀರ್ ಸ್ನೇಹಿತ ಶಶಿ ಮತ್ತು ಅನಾಮಿಕ ವ್ಯಕ್ತಿಯ ನಡುವಿನ ಸಂಭಾಷಣೆ ಇದೆ ಎಂದು ಹೇಳಲಾಗುತ್ತಿದೆ.

ಕಾರು ವಿಚಾರಕ್ಕೆ ಸಂಬಂಧಿಸಿದ ಪ್ರಕರಣದ ಕುರಿತು ಮಾತನಾಡುವಾಗ ಧನ್ವೀರ್ ಹೆಸರನ್ನು ಪ್ರಸ್ತಾಪಿಸಲಾಗಿದೆ ಎಂಬ ಮಾಹಿತಿ ಹರಿದಾಡುತ್ತಿದೆ. ಸಣ್ಣ ಮೊತ್ತದ ಕಾರು ಪ್ರಕರಣದಲ್ಲಿ ಧನ್ವೀರ್ ನ ಸಿಲುಕಿಸುವ ಪ್ರಯತ್ನ ನಡೆಯುತ್ತಿದೆ ಎಂಬರ್ಥದ ಮಾತುಗಳು ಆಡಿಯೋದಲ್ಲಿವೆ ಎನ್ನಲಾಗಿದೆ.

ವೈರಲ್ ಆಡಿಯೋ ಕುರಿತ ಚರ್ಚೆಯಲ್ಲಿ ಸುಮಾರು ಒಂದೂವರೆ ಲಕ್ಷ ರೂಪಾಯಿ ಮೌಲ್ಯದ ಕಾರಿನ ವಿಚಾರವೂ ಪ್ರಸ್ತಾಪವಾಗುತ್ತಿದೆ. ಆ ಕಾರಿಗೂ ಧನ್ವೀರ್ ಗೂ ಯಾವುದೇ ಸಂಬಂಧವಿಲ್ಲದಿದ್ದರೂ, ಅವರನ್ನು ಪ್ರಕರಣದಲ್ಲಿ ಸಿಲುಕಿಸುವ ಪ್ರಯತ್ನ ನಡೆಯುತ್ತಿದೆ ಎಂಬ ಆರೋಪದ ರೀತಿಯಲ್ಲಿ ಸಂಭಾಷಣೆ ನಡೆದಿದೆ ಎಂದು ಹೇಳಲಾಗುತ್ತಿದೆ.

ಹಾಗೆಯೇ ದರ್ಶನ್ ಜೈಲಿನಿಂದ ಹೊರಬರುವುದು ವಿಜಯಲಕ್ಷ್ಮೀಗೆ ಇಷ್ಟವಿಲ್ಲ ಎಂಬ ಹೇಳಿಕೆ ಸಹ ಆಡಿಯೋದಲ್ಲಿ ಕೇಳಿ ಬಂದಿದೆ. ಆದರೆ ಈ ವಿಷ್ಯ ಎಷ್ಟರ ಮಟ್ಟಿಗೆ ಸತ್ಯ ಎಂಬುದು ಇನ್ನೂ ತಿಳಿದುಬಂದಿಲ್ಲ. ಹೀಗಾಗಿ ಇದು ಬರೀ ಉಹಾಪೋಹಗಳಷ್ಟೇ ಎನ್ನಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಸ್ಟಿಂಗ್ ಪ್ರಕರಣದಲ್ಲಿ ನಾಪತ್ತೆಯಾದವರು HDK ಎಡಗೈ-ಬಲಗೈ ಬಂಟರೇ; ಇಂದಲ್ಲ, ನಾಳೆ ಸತ್ಯ ಆಚೆ ಬರುತ್ತೆ: ಪ್ರಿಯಾಂಕ್ ಖರ್ಗೆ

ಸಿಜೆಪಿ ಪ್ರತಿಭಟನೆ: ಪೆಲೆಟ್ ಗನ್ ಬಳಕೆ ಕುರಿತು ಸಾಕ್ಷ್ಯಗಳ ಮಾಹಿತಿ ಕಲೆಹಾಕಲಿರುವ ಸುಪ್ರೀಂ ಕೋರ್ಟ್ ಉನ್ನತ ಸಮಿತಿ!

ಸಿದ್ದರಾಮಯ್ಯ ವಿರುದ್ಧ ಸ್ಟಿಂಗ್ ಆಪರೇಷನ್ ಪ್ರಕರಣ: ದೆಹಲಿ ಮೂಲದ ರಿತೇಶ್ ಪಾಂಡೆ ಬಂಧನ!

ಮಾತೃಭಾಷೆ ಕನ್ನಡ ಅಂದ್ರೆ ಕೆಲಸ ಕೊಡಲ್ಲ, ಬೆಂಗಳೂರಿನ ಐಟಿ ಕಂಪನಿಗೆ ಕನ್ನಡ ಬೇಡ್ವಂತೆ: ವಿಡಿಯೋ ಮೂಲಕ ನೋವು ಹೇಳಿಕೊಂಡ ಯುವತಿ!

ಜಾರಂಗೆ ಆಡಿಯೋ ಕ್ಲಿಪ್ ಪ್ರಕರಣ: ಸಂಜಯ್ ರಾವತ್, ರಾಹುಲ್ ಗಾಂಧಿ ವಿರುದ್ಧ ಬಿಜೆಪಿ ಆರೋಪವೇನು?