ಸಂಗ್ರಹ ಚಿತ್ರ 
ರಾಜ್ಯ

ವಿಜಯದಶಮಿ ಹಿನ್ನೆಲೆ ರಾಜ್ಯದ ವಿವಿಧೆಡೆ ಪಥಸಂಚಲನಕ್ಕೆ RSS ಸಜ್ಜು: ಕೆಲವೆಡೆ ಷರತ್ತುಬದ್ಧ ಅನುಮತಿ..!

ಕಲಬುರಗಿಯಲ್ಲಿ ನಾಳೆ ಮಧ್ಯಾಹ್ನ 3.30ಕ್ಕೆ ಆರ್‌ಎಸ್‌ಎಸ್ ಪಥಸಂಚಲನ ಆರಂಭವಾಗಲಿದ್ದು, ನಗರ ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಡಿಸಿಪಿ ಶಾಲೂ ಅವರು ಷರತ್ತುಬದ್ಧ ಅನುಮತಿ ನೀಡಿದ್ದಾರೆ.

ಬೆಂಗಳೂರು: ವಿಜಯದಶಮಿ ಹಿನ್ನೆಲೆಯಲ್ಲಿ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಪಥಸಂಚಲನ ಹಾಗೂ ಸಾರ್ವಜನಿಕ ಕಾರ್ಯಕ್ರಮಗಳ ಆಯೋಜನೆಗೆ ಸಿದ್ಧತೆಗಳು ಚುರುಕುಗೊಂಡಿವೆ.

ಕಲಬುರಗಿ, ರಾಮನಗರ ಮತ್ತು ಹುಬ್ಬಳ್ಳಿಯಲ್ಲಿ ಪಥಸಂಚಲನಕ್ಕೆ ಷರತ್ತುಬದ್ಧ ಅನುಮತಿ ದೊರೆತಿದ್ದು, ಕೋಲಾರ ಮತ್ತು ಮೈಸೂರಿನಲ್ಲಿಯೂ ಕಾರ್ಯಕ್ರಮಗಳಿಗಾಗಿ ಸಿದ್ಧತೆ ನಡೆಯುತ್ತಿದೆ. ಆದರೆ, ಚುನಾವಣಾ ನೀತಿ ಸಂಹಿತೆ ಹಿನ್ನೆಲೆಯಲ್ಲಿ ತುಮಕೂರಿನಲ್ಲಿ ಪಥಸಂಚಲನಕ್ಕೆ ಇನ್ನೂ ಅನುಮತಿ ದೊರೆತಿಲ್ಲ ಎಂದು ತಿಳಿದುಬಂದಿದೆ.

ಕಲಬುರಗಿಯಲ್ಲಿ ನಾಳೆ ಮಧ್ಯಾಹ್ನ 3.30ಕ್ಕೆ ಆರ್‌ಎಸ್‌ಎಸ್ ಪಥಸಂಚಲನ ಆರಂಭವಾಗಲಿದ್ದು, ನಗರ ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಡಿಸಿಪಿ ಶಾಲೂ ಅವರು ಷರತ್ತುಬದ್ಧ ಅನುಮತಿ ನೀಡಿದ್ದಾರೆ.

ಗೃಹ ಇಲಾಖೆಯ ಫಾರ್ಮ್ 1 ಮತ್ತು 2 ಅನ್ನು ಭರ್ತಿ ಮಾಡಿ ಸಲ್ಲಿಸಿದ ಹಿನ್ನೆಲೆಯಲ್ಲಿ ಅನುಮತಿ ನೀಡಲಾಗಿದೆ ಎಂದು ತಿಳಿದುಬಂದಿದೆ.

ಪಥಸಂಚಲನವು ನಿಗದಿತ ಮಾರ್ಗದಲ್ಲೇ ಸಾಗಬೇಕು ಹಾಗೂ ಪ್ರಚೋದನಕಾರಿ ಭಾಷಣಗಳಿಗೆ ಅವಕಾಶವಿಲ್ಲ ಎಂದು ಪೊಲೀಸರು ಷರತ್ತು ವಿಧಿಸಿದ್ದು, ನಗರದ ನಗರೆಶ್ವರ ಶಾಲೆಯಿಂದ ಆರಂಭವಾಗುವ ಪಥಸಂಚಲನ ಶರಣಬಸವೇಶ್ವರ ಜಾತ್ರಾ ಮೈದಾನದಲ್ಲಿ ಮುಕ್ತಾಯಗೊಳ್ಳಲಿದೆ.

ರಾಮನಗರದಲ್ಲಿಯೂ ಆರ್‌ಎಸ್‌ಎಸ್ ಪಥಸಂಚಲನಕ್ಕೆ ಪೊಲೀಸ್ ಇಲಾಖೆ ಅನುಮತಿ ನೀಡಿದೆ. ನಾಳೆ ಬೆಳಿಗ್ಗೆ 9.30ಕ್ಕೆ ಸಂಘದ ಕಚೇರಿಯಿಂದ ಆರಂಭವಾಗುವ ಪಥಸಂಚಲನವು ಅಗ್ರಹಾರದವರೆಗೆ ಸುಮಾರು ಎರಡು ಕಿಲೋಮೀಟರ್ ಸಾಗಲಿದೆ.

ಹುಬ್ಬಳ್ಳಿಯ ನೆಹರು ಮೈದಾನದಲ್ಲಿ ಅಕ್ಟೋಬರ್ 25ರಂದು ನಡೆಯಲಿರುವ ಪಥಸಂಚಲನ ಮತ್ತು ಸಾರ್ವಜನಿಕ ಸಭೆಗೂ ಅನುಮತಿ ದೊರೆತಿದೆ. ಕಾರ್ಯಕ್ರಮದಲ್ಲಿ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಸೇರಿದಂತೆ ಬಿಜೆಪಿ ಶಾಸಕರು ಭಾಗವಹಿಸಲಿದ್ದಾರೆಂದು ತಿಳಿದುಬಂದಿದೆ.

ಇನ್ನು ಕೋಲಾರ ಮತ್ತು ಮೈಸೂರಿನಲ್ಲಿಯೂ ಆರ್‌ಎಸ್‌ಎಸ್ ಪಥಸಂಚಲನ ಹಾಗೂ ಬೌದ್ಧಿಕ್ ಕಾರ್ಯಕ್ರಮಗಳ ಆಯೋಜನೆಗೆ ಸಿದ್ಧತೆಗಳು ನಡೆಯುತ್ತಿವೆ.

ಇನ್ನೊಂದೆಡೆ, ತುಮಕೂರು ಜಿಲ್ಲೆಯಲ್ಲಿ ಆರ್‌ಎಸ್‌ಎಸ್ ಪಥಸಂಚಲನಕ್ಕೆ ಈವರೆಗೂ ಪೊಲೀಸ್ ಅನುಮತಿ ದೊರೆತಿಲ್ಲ. ತುಮಕೂರು ನಗರ, ಗ್ರಾಮಾಂತರ, ಕುಣಿಗಲ್ ಮತ್ತು ಗುಬ್ಬಿಯಲ್ಲಿ ಪಥಸಂಚಲನ ಆಯೋಜಿಸಲು ಸಿದ್ಧತೆ ನಡೆಸಲಾಗಿದೆ. ಪದವೀಧರರ ಕ್ಷೇತ್ರದ ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿರುವ ಹಿನ್ನೆಲೆಯಲ್ಲಿ ಅನುಮತಿ ಪ್ರಕ್ರಿಯೆ ವಿಳಂಬವಾಗಿರುವ ಸಾಧ್ಯತೆಯಿದೆ ಎಂದು ತಿಳಿದುಬಂದಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನವೆಂಬರ್ 1ರ ರ‍್ಯಾಲಿ ಮುಂದೂಡುವಂತೆ ರಾಹುಲ್ ಗಾಂಧಿಗೆ CTI ಒತ್ತಾಯ; 10 ಸಾವಿರ ಕೋಟಿ ರೂ. ನಷ್ಟದ ಎಚ್ಚರಿಕೆ!

ಬರೀ ವೈಭವ್​, ವೈಭವ್​ ಅಂದ್ರೆ ಹೇಗೆ? ನಿಮ್ಮಿಷ್ಟದಂತೆ ತಂಡ ಆಯ್ಕೆ ಮಾಡಲು ಸಾಧ್ಯವಿಲ್ಲ: ಟೀಂ​ ಇಂಡಿಯಾ ಬ್ಯಾಟಿಂಗ್​ ಕೋಚ್ ಶಾಕಿಂಗ್ ಹೇಳಿಕೆ!

ಗಡಿಯಲ್ಲಿ ಚೀನಾ ಕ್ಯಾತೆ: ITBP ಮಹಾನಿರ್ದೇಶಕರ ಹೇಳಿಕೆ ತೀವ್ರ ಆತಂಕಕಾರಿ: ಮೋದಿ ಸರ್ಕಾರದ ವಿರುದ್ಧ ಕಾಂಗ್ರೆಸ್ ವಾಗ್ದಾಳಿ

ಮತ್ತೆ ಚೀನಾ ಕ್ಯಾತೆ, ಗಲ್ವಾನ್ ರೀತಿಯ ಸಂಘರ್ಷ; ಅರುಣಾಚಲ ಪ್ರದೇಶದಲ್ಲಿ ಚೀನಾ ಸೇನೆಯೊಂದಿಗೆ ಮತ್ತೆ ಮುಖಾಮುಖಿ?

'ಪರ್ಫೆಕ್ಟ್ ಪರ್ಯಾಯ': ನಮನ್‌ ಧೀರ್‌ ಆಲ್ರೌಂಡ್ ಆಟಕ್ಕೆ ಅಶ್ವಿನ್‌ ಫಿದಾ, ಪ್ರತಿಭೆ ಗುರುತಿಸಿದ ಆಯ್ಕೆ ಸಮಿತಿಗೆ ಮೆಚ್ಚುಗೆ!