ಬೆಂಗಳೂರು: ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಮತ್ತು ನಟ ಧನ್ವೀರ್ ಗೌಡ ನಡುವಿನ ಕೋಲ್ಡ್ ವಾರ್ ಈಗ ಮತ್ತೊಂದು ಮಜಲನ್ನು ಪಡೆದುಕೊಂಡಿದೆ. ಸಿಎಂ ಡಿ.ಕೆ ಶಿವಕುಮಾರ್ ಹಾಗೂ ಸಚಿವ ಝಮೀರ್ ಅಹ್ಮದ್ ಖಾನ್ ಅವರ ಪುತ್ರ ಝೇದ್ ಖಾನ್ ಬಗ್ಗೆ ನಟ ಧ್ವನ್ವೀರ್ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆಂದು ಆರೋಪಿಸಿ NSUI ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿಗೆ ದೂರು ನೀಡಿದೆ. ಮತ್ತೊಂದೆಡೆ ಜಮೀರ್ ಅಭಿಮಾನಿಗಳು, ಚನ್ನಪಟ್ಟಣದಲ್ಲಿ ಪ್ರತಿಭಟನೆ ನಡೆಸಿ ಧನ್ವೀರ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಜಮೀರ್ ಅಹ್ಮದ್ ಖಾನ್ ಪುತ್ರ ಝೈದ್ ಖಾನ್ ಬಗ್ಗೆ ಧನ್ವೀರ್ ಹಗುರವಾಗಿ ಮಾತನಾಡಿದ್ದಾರೆ ಎಂಬ ಆರೋಪ ಪ್ರತಿಭಟನಾಕಾರರ ಆಕ್ರೋಶಕ್ಕೆ ಕಾರಣವಾಗಿದೆ. ಈ ಹಿನ್ನೆಲೆಯಲ್ಲಿ ಜಮೀರ್ ಅಭಿಮಾನಿಗಳು ಚನ್ನಪಟ್ಟಣ ನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ ಎಂದು ವರದಿಯಾಗಿದೆ. ಜಮೀರ್ ಅಭಿಮಾನಿ ಬಳಗದ ಅಧ್ಯಕ್ಷ ಮಹಮದ್ ತೌಸಿಫ್ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಧನ್ವೀರ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಲಾಯಿತು. ನಗರದ ಟೌನ್ ಪೊಲೀಸ್ ಠಾಣೆಯ ಬಳಿ ಜಮಾಯಿಸಿದ ಅಭಿಮಾನಿಗಳು, ಝೈದ್ ಖಾನ್ ಬಗ್ಗೆ ಮಾತನಾಡುವಾಗ ಜವಾಬ್ದಾರಿಯಿಂದ ವರ್ತಿಸಬೇಕು ಎಂದು ಆಗ್ರಹಿಸಿದರು.