ಶಾಸಕ ಪ್ರದೀಪ್ ಈಶ್ವರ್ 
ರಾಜ್ಯ

'ನಮ್ಮ ಊರಿಗೆ ನಮ್ಮ ಶಾಸಕರು' ಅಭಿಯಾನ; 302 ಹಳ್ಳಿಗಳಿಗೆ ಭೇಟಿ ನೀಡಿದ ಶಾಸಕ ಪ್ರದೀಪ್ ಈಶ್ವರ್, ಜನರ ಸಮಸ್ಯೆಗಳಿಗೆ ಸ್ಪಂದನೆ..!

ಗ್ರಾಮಗಳಿಗೆ ಭೇಟಿ ನೀಡಿದ ಸಂದರ್ಭದಲ್ಲಿ ಸಾರ್ವಜನಿಕರ ಸಮಸ್ಯೆಗಳನ್ನು ಆಲಿಸಲು ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳನ್ನು ಸ್ಥಳಕ್ಕೆ ಕರೆಯಿಸಲಾಗುತ್ತದೆ. ಈ ಮೂಲಕ ಹಲವು ಸಮಸ್ಯೆಗಳಿಗೆ ಸ್ಥಳದಲ್ಲೇ ಪರಿಹಾರ ಕಲ್ಪಿಸಲಾಗಿದೆ.

ಬೆಂಗಳೂರು: ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಅವರು ಜನರಿಗೆ ಸರ್ಕಾರಿ ಸೇವೆಗಳನ್ನು ಹತ್ತಿರವಾಗಿಸುವ ಉದ್ದೇಶದಿಂದ ಆರಂಭಿಸಿರುವ ‘ನಮ್ಮ ಊರಿಗೆ ನಮ್ಮ ಶಾಸಕರು’ ಕಾರ್ಯಕ್ರಮದಡಿ 302ನೇ ಗ್ರಾಮಕ್ಕೆ ಭೇಟಿ ನೀಡುವ ಮೂಲಕ ಹೊಸ ಮೈಲಿಗಲ್ಲು ತಲುಪಿದ್ದಾರೆ.

ಶಾಸಕರಾಗಿ ಆಯ್ಕೆಯಾದ ತಕ್ಷಣವೇ ಈ ಕಾರ್ಯಕ್ರಮವನ್ನು ಆರಂಭಿಸಿದ್ದಾಗಿ ತಿಳಿಸಿದ ಅವರು, ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲು ಗ್ರಾಮಸ್ಥರು ಸರ್ಕಾರಿ ಕಚೇರಿಗಳಿಗೆ ಅಲೆಯುವ ಬದಲು ಆಡಳಿತವೇ ದೂರದ ಹಳ್ಳಿಗಳಿಗೆ ತಲುಪಬೇಕು ಎಂಬ ಉದ್ದೇಶದಿಂದ ಈ ಉಪಕ್ರಮ ಕೈಗೊಂಡಿದ್ದಾಗಿ ಹೇಳಿದರು.

ಗ್ರಾಮಗಳಿಗೆ ಭೇಟಿ ನೀಡಿದ ಸಂದರ್ಭದಲ್ಲಿ ಸಾರ್ವಜನಿಕರ ಸಮಸ್ಯೆಗಳನ್ನು ಆಲಿಸಲು ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳನ್ನು ಸ್ಥಳಕ್ಕೆ ಕರೆಯಿಸಲಾಗುತ್ತದೆ. ಈ ಮೂಲಕ ಹಲವು ಸಮಸ್ಯೆಗಳಿಗೆ ಸ್ಥಳದಲ್ಲೇ ಪರಿಹಾರ ಕಲ್ಪಿಸಲಾಗಿದೆ ಎಂದು ತಿಳಿಸಿದರು.

ರಸ್ತೆ, ಕುಡಿಯುವ ನೀರು, ಚರಂಡಿ ವ್ಯವಸ್ಥೆ, ವಿದ್ಯುತ್, ಮೂಲಸೌಕರ್ಯ ಹಾಗೂ ಸಾರ್ವಜನಿಕ ಸೇವೆಗಳಿಗೆ ಸಂಬಂಧಿಸಿದ ಸಮಸ್ಯೆಗಳಿಗೆ ಆದ್ಯತೆ ನೀಡಲಾಗುತ್ತಿದೆ ಎಂದರು.

ಜಾತಿ, ಧರ್ಮ ಅಥವಾ ಸಮುದಾಯದ ಭೇದವಿಲ್ಲದೆ ಎಲ್ಲ ಗ್ರಾಮಸ್ಥರಿಗೂ ಸೇವೆ ಸಲ್ಲಿಸುವುದು ಈ ಕಾರ್ಯಕ್ರಮದ ಉದ್ದೇಶವಾಗಿದೆ ಎಂದು ಪ್ರದೀಪ್ ಈಶ್ವರ್ ಹೇಳಿದರು.

ರಾಜಕೀಯವೆಂದರೆ ಜನರ ಸೇವೆ ಮಾಡುವ ಜವಾಬ್ದಾರಿಯಾಗಿದ್ದು, ಗ್ರಾಮೀಣ ಪ್ರದೇಶಗಳ ಸಮಸ್ಯೆಗಳನ್ನು ಪರಿಹರಿಸಲು ಅಧಿಕಾರಿಗಳೊಂದಿಗೆ ಸಮನ್ವಯ ಸಾಧಿಸುವ ಪ್ರಯತ್ನ ಮುಂದುವರಿಯಲಿದೆ ಎಂದು ತಿಳಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

"ಮೋದಿ ಕಾ ಬಾಪ್ ಭಿ ಜಾಯೇಗಾ" ಹೇಳಿಕೆ: ಮಲ್ಲಿಕಾರ್ಜುನ ಖರ್ಗೆ ಹೇಳಿಕೆಗೆ BJPತೀವ್ರ ಆಕ್ರೋಶ, ದೇಶಾದ್ಯಂತ ಸಮರಕ್ಕೆ ಮುಂದು..!

ಕೈ ಪಾಳಯದಲ್ಲಿ 'ಸ್ಟಿಂಗ್ ಆಪರೇಷನ್' ಕೋಲಾಹಲ: ನ.2ಕ್ಕೆ ದೆಹಲಿಗೆ ಮಾಜಿ ಸಿಎಂ ಸಿದ್ದರಾಮಯ್ಯ, ರಾಹುಲ್ ಗಾಂಧಿಗೆ ದೂರು ಸಲ್ಲಿಕೆ..?

ಸ್ಟಿಂಗ್ ಆಪರೇಷನ್ ವಿವಾದ: ನಮ್ಮ ಸಮಸ್ಯೆ ನಾವೇ ಬಗೆಹರಿಸಿಕೊಳ್ಳುತ್ತೇವೆ, ಹೈಕಮಾಂಡ್ ಮಧ್ಯಪ್ರವೇಶ ಅಗತ್ಯವಿಲ್ಲ; DCM ಪರಮೇಶ್ವರ್ ಸ್ಪಷ್ಟನೆ

ವಾಯುವ್ಯ ಸಾರಿಗೆ ಸಂಸ್ಥೆಗೆ ರಾಣಿ ಚೆನ್ನಮ್ಮನ ಹೆಸರು ಮರು ನಾಮಕರಣ: ಸಿಎಂ ಡಿಕೆ ಶಿವಕುಮಾರ್!

'ಮೋದಿ ಏನ್ ಅವರ ಅಪ್ಪನೂ ಹೋಗ್ತಾರೆ': 'ಚುನಾವಣಾ ಸೋಲುಗಳಿಂದ ಹತಾಶೆ'- ಖರ್ಗೆ ಹೇಳಿಕೆ ವಿರುದ್ಧ ಅಮಿತ್ ಶಾ ಕಿಡಿ!