ಉಡುಪಿ: ಸೈಕಲ್‌ನಲ್ಲಿ ರಸ್ತೆ ದಾಟುತ್ತಿದ್ದ ಆರ್‌ಎಸ್‌ಎಸ್‌ನ ಹಿರಿಯ ಮುಖಂಡರೊಬ್ಬರಿಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಅವರು ಮೃತಪಟ್ಟಿರುವ ಘಟನೆ ಉಡುಪಿಯ ಕೋಟ ಜಂಕ್ಷನ್‌ನಲ್ಲಿ ಸೋಮವಾರ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಮೃತರನ್ನು ಉಡುಪಿ ಜಿಲ್ಲೆಯ ಕೋಟ ಮಣೂರು ನಿವಾಸಿ ಗುರುದಾಸ್ ಶೆಣೈ (65) ಎಂದು ಗುರುತಿಸಲಾಗಿದೆ. ಅವರು ಅಮೃತೇಶ್ವರಿ ದೇವಸ್ಥಾನಕ್ಕೆ ತೆರಳುತ್ತಿದ್ದಾಗ ಈ ಅಪಘಾತ ಸಂಭವಿಸಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಉಡುಪಿಯಿಂದ ಕುಂದಾಪುರದ ಕಡೆಗೆ ಸಾಗುತ್ತಿದ್ದ ಕಾರೊಂದು ಅವರ ಸೈಕಲ್‌ಗೆ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ.
ಡಿಕ್ಕಿಯ ರಭಸಕ್ಕೆ ಕಾರು ಪಲ್ಟಿಯಾಗಿದೆ. ಕಾರು ಚಾಲಕನಿಗೆ ಗಂಭೀರ ಗಾಯಗಳಾಗಿದ್ದು, ಅವರನ್ನು ಬ್ರಹ್ಮಾವರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಅಲ್ಲಿ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.