ಬೆಳಗಾವಿಯ ಸುವರ್ಣ ವಿಧಾನ ಸೌಧ 
ರಾಜ್ಯ

ಬೆಳಗಾವಿ ಚಳಿಗಾಲದ ಅಧಿವೇಶನಕ್ಕೆ ಮುಹೂರ್ತ ಫಿಕ್ಸ್: ಡಿಸೆಂಬರ್ 7 ರಿಂದ ಕಲಾಪ ಆರಂಭ

ಈ ಕುರಿತು ಅಗತ್ಯ ಸಿದ್ಧತೆಗಳನ್ನು ಕೈಗೊಳ್ಳುವಂತೆ ಕರ್ನಾಟಕ ವಿಧಾನ ಪರಿಷತ್ತಿನ ಕಾರ್ಯದರ್ಶಿ ಜ್ಯೋತಿ ಅವರಿಗೆ ಶಾಲಿನಿ ರಜನೀಶ್ ಅವರು ಪತ್ರ ಬರೆದಿದ್ದಾರೆ.

ಬೆಂಗಳೂರು: ಕರ್ನಾಟಕ ವಿಧಾನಮಂಡಲದ ಉಭಯ ಸದನಗಳ 10 ದಿನಗಳ ಚಳಿಗಾಲದ ಅಧಿವೇಶನಕ್ಕೆ ಮುಹೂರ್ತ ಫಿಕ್ಸ್ ಆಗಿದ್ದು, ಬೆಳಗಾವಿಯ ಸುವರ್ಣ ವಿಧಾನ ಸೌಧದಲ್ಲಿ ಡಿಸೆಂಬರ್ 7 ರಿಂದ 10 ದಿನಗಳ ಕಾಲ ಕಲಾಪ ನಡೆಯುವ ಸಾಧ್ಯತೆಯಿದೆ ಎಂದು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರು ಮಂಗಳವಾರ ತಿಳಿಸಿದ್ದಾರೆ.

ಈ ಕುರಿತು ಅಗತ್ಯ ಸಿದ್ಧತೆಗಳನ್ನು ಕೈಗೊಳ್ಳುವಂತೆ ಕರ್ನಾಟಕ ವಿಧಾನ ಪರಿಷತ್ತಿನ ಕಾರ್ಯದರ್ಶಿ ಜ್ಯೋತಿ ಅವರಿಗೆ ಶಾಲಿನಿ ರಜನೀಶ್ ಅವರು ಪತ್ರ ಬರೆದಿದ್ದಾರೆ.

ಅಕ್ಟೋಬರ್ 15, 2026 ರಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿದಂತೆ, ಕರ್ನಾಟಕ ವಿಧಾನಮಂಡಲದ ಉಭಯ ಸದನಗಳ ಚಳಿಗಾಲದ ಅಧಿವೇಶನವನ್ನು ಡಿಸೆಂಬರ್ 7, 2026 ರಿಂದ ಬೆಳಗಾವಿಯ ಸುವರ್ಣ ವಿಧಾನ ಸೌಧದಲ್ಲಿ ನಡೆಸಲು ತಾತ್ಕಾಲಿಕವಾಗಿ ನಿರ್ಧರಿಸಲಾಗಿದೆ ಎಂದು ಮುಖ್ಯ ಕಾರ್ಯದರ್ಶಿ ತಮ್ಮ ಪತ್ರದಲ್ಲಿ ತಿಳಿಸಿದ್ದಾರೆ.

"ಇದರನ್ವಯ, ಡಿಸೆಂಬರ್ 7 ರಿಂದ ಬೆಳಗಾವಿಯ ಸುವರ್ಣ ವಿಧಾನ ಸೌಧದಲ್ಲಿ ಕರ್ನಾಟಕ ವಿಧಾನಮಂಡಲದ ಉಭಯ ಸದನಗಳ 10 ದಿನಗಳ ಅಧಿವೇಶನವನ್ನು ನಡೆಸಲು ಅಗತ್ಯವಿರುವ ಪೂರ್ವ ಸಿದ್ಧತೆಗಳನ್ನು ಕೈಗೊಳ್ಳುವಂತೆ" ಎಂದು ಶಾಲಿನಿ ರಜನೀಶ್ ಸೂಚಿಸಿದ್ದಾರೆ.

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಕಚೇರಿಯು ಈ ಪತ್ರವನ್ನು ಮಾಧ್ಯಮಗಳೊಂದಿಗೆ ಹಂಚಿಕೊಂಡಿದೆ.

ಉತ್ತರ ಕರ್ನಾಟಕದ ಹಲವು ಜಿಲ್ಲೆಗಳು ಎದುರಿಸುತ್ತಿರುವ ಬರ, ನೀರಾವರಿ, ಕೃಷಿ, ಉದ್ಯೋಗ, ಕೈಗಾರಿಕೆ, ಶಿಕ್ಷಣ, ಆರೋಗ್ಯ, ರಸ್ತೆ ಸಂಪರ್ಕ, ಕುಡಿಯುವ ನೀರು ಸೇರಿದಂತೆ ವಿವಿಧ ಸಮಸ್ಯೆಗಳು ಅಧಿವೇಶನದಲ್ಲಿ ಪ್ರಮುಖವಾಗಿ ಪ್ರಸ್ತಾಪವಾಗುವ ಸಾಧ್ಯತೆ ಇದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಕಾಂಗ್ರೆಸ್ ಗೆ ಮುಖಭಂಗ: ಬ್ಯಾಲೆಟ್ ಪೇಪರ್ ಮೂಲಕ ನಡೆದ MLC ಚುನಾವಣೆಯಲ್ಲಿ 4 ಸ್ಥಾನ NDA ತೆಕ್ಕೆಗೆ!

MLC Election: ಈಶಾನ್ಯ ಶಿಕ್ಷಕರ ಕ್ಷೇತ್ರದಲ್ಲಿ BJPಯ ಶಶೀಲ್‌ ನಮೋಶಿ ಜಯಭೇರಿ; ಕಾಂಗ್ರೆಸ್‌ನ ಮಟ್ಟೂರುಗೆ ಮುಖಭಂಗ!

'ಯಾವ ರೀತಿಯ ಕ್ರಿಕೆಟ್‌ ಆಡುತ್ತಿದ್ದರೋ ಗೊತ್ತಿಲ್ಲ, 12 ಎಸೆತಗಳಲ್ಲಿ 50 ರನ್‌.. ಖಂಡಿತಾ ಸುಲಭವಲ್ಲ'; ಗುರುವಿನ ಕೊಂಡಾಡಿದ ಅಭಿಷೇಕ್ ಶರ್ಮಾ!

MLC election: BJP-JDS ಮೈತ್ರಿ ಅಭ್ಯರ್ಥಿ ರಂಗನಾಥ್ ಭರ್ಜರಿ ಗೆಲುವು; ಪುಟ್ಟಣ್ಣಗೆ ಹೀನಾಯ ಸೋಲು, ಕಾಂಗ್ರೆಸ್​ಗೆ ಮುಖಭಂಗ!

ನನ್ನ ಫ್ಯಾಮಿಲಿ ಬಗ್ಗೆ ಮಾತಾಡೋಕೆ ಯಾರಿಗೂ ಅಧಿಕಾರ ಇಲ್ಲ: ಜೈಲಿನಿಂದಲೇ ಧನ್ವೀರ್​ಗೆ ದರ್ಶನ್ ವಾರ್ನಿಂಗ್!