ಬೆಂಗಳೂರು: ಡಿಸಿಎಂ ಜಿ. ಪರಮೇಶ್ವರ್ ಅವರು ಇದ್ದಕ್ಕಿದ್ದಂತೆ ತೀವ್ರ ಅನಾರೋಗ್ಯಕ್ಕೆ ತುತ್ತಾಗಿದ್ದು, ಚಿಕಿತ್ಸೆಗಾಗಿ ಬೆಂಗಳೂರಿನ ವೈದೇಹಿ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಪರಮೇಶ್ವರ್ ಅವರಿಗೆ ಹೃದಯಾಘಾತವಾಗಿದೆ ಎಂಬ ಪ್ರಾಥಮಿಕ ಮಾಹಿತಿಗಳು ಹೊರಬಿದ್ದ ಬೆನ್ನಲ್ಲೇ, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಆಸ್ಪತ್ರೆಗೆ ಭೇಟಿ ನೀಡಿ ಸಚಿವರ ಆರೋಗ್ಯ ವಿಚಾರಿಸಿದ್ದಾರೆ.
ಸದ್ಯ ವೈದ್ಯರ ತಂಡವು ಅವರ ಆರೋಗ್ಯ ಸ್ಥಿತಿಯನ್ನು ತೀವ್ರವಾಗಿ ಮೇಲ್ವಿಚಾರಣೆ ಮಾಡುತ್ತಿದ್ದು, ಚಿಕಿತ್ಸೆ ಮುಂದುವರಿದಿದೆ.
ಬ್ಯಾಡ್ಮಿಂಟನ್ ಉದ್ಘಾಟನಾ ಕಾರ್ಯಕ್ರಮಕ್ಕೆ ಆಗಮಿಸಿದ್ದ DCM ಜಿ. ಪರಮೇಶ್ವರ್ ಅವರ ಆರೋಗ್ಯದಲ್ಲಿ ಏಕಾಏಕಿ ಏರುಪೇರು ಉಂಟಾದಾಗ, ಜೊತೆಯಲ್ಲಿದ್ದ MLC ಗೋವಿಂದರಾಜು ಅವರು ಸಮಯಪ್ರಜ್ಞೆ ಮೆರೆದು ಆಸ್ಪತ್ರೆಗೆ ದಾಖಲಿಸಿದ್ದಾರೆ.