ಶರದ್ ಕಟಿಯಾರ್ 
ರಾಜ್ಯ

ಬೆಂಗಳೂರು: ಅಪಾರ್ಟ್ಮೆಂಟ್ ಮೇಲಿಂದ ಜಿಗಿದು DRDO ವಿಜ್ಞಾನಿ ಆತ್ಮಹತ್ಯೆ; ಕೆಲಸದ ಒತ್ತಡವೇ ಸಾವಿಗೆ ಕಾರಣ ಎಂದ ಕುಟುಂಬ!

ಕೆಲಸಕ್ಕೆ ಸಂಬಂಧಿಸಿದ ಒತ್ತಡದಿಂದಾಗಿ ಅವರು ತೀವ್ರ ಮಾನಸಿಕ ಒತ್ತಡದಲ್ಲಿದ್ದರು ಎಂದು ಶರದ್ ಕುಟುಂಬದವರು ಪೊಲೀಸರಿಗೆ ತಿಳಿಸಿದ್ದಾರೆ.

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆಯ(DRDO) 47 ವರ್ಷದ ಹಿರಿಯ ವಿಜ್ಞಾನಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ದಾರಣ ಘಟನೆ ನಡೆದಿದೆ.

ನಗರದ ವೈಟ್‌ಫೀಲ್ಡ್ ಠಾಣೆ ವ್ಯಾಪ್ತಿಯ ಸೀಗೇಹಳ್ಳಿಯಲ್ಲಿ ಈ ಘಟನೆ ನಡೆದಿದ್ದು, ಎಡಿಎ ಗ್ರೇಡ್ ಎಫ್‌ನ ವಿಜ್ಞಾನಿ ಶರದ್ ಕಟಿಯಾರ್(47) ಅವರು ಆತ್ಮಹತ್ಯೆಗೆ ಶರಣಾಗಿದ್ದಾರೆ.

ಶರದ್‌ ಅವರು ವಾಸವಾಗಿದ್ದ ನಾಲ್ಕನೇ ಅಂತಸ್ತಿನ ಅಪಾರ್ಟ್ಮೆಂಟ್ ಮೇಲಿಂದ ಜಿಗಿದು, ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕಳೆದ ಒಂದು ತಿಂಗಳಿಂದ ಮಾನಸಿಕ ಖಿನ್ನತೆಗೆ ಒಳಗಾಗಿದ್ದ ವಿಜ್ಞಾನಿ ಶರದ್‌ ಅವರು ಹಲವು ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆತ್ಮಹತ್ಯೆ ದಿನವೂ ಕೂಡ ಚಿಕಿತ್ಸೆ ಪಡೆದು ಬಂದಿದ್ದರು. 21ರ ಸಂಜೆ 7:30ರ ಸುಮಾರಿಗೆ ಅಪಾರ್ಟ್ಮೆಂಟ್‌ ಮೇಲಿಂದ ಜಿಗಿದಿದ್ದರು.

ಗಂಭೀರವಾಗಿ ಗಾಯಗೊಂಡಿದ್ದ ಶರದ್ ಅವರನ್ನು ಆಸ್ಪತ್ರೆಗೆ ದಾಖಲಿಸುವಷ್ಟರಲ್ಲಿ ಸಾವನ್ನಪ್ಪಿದ್ದಾರೆ.

ಕೆಲಸಕ್ಕೆ ಸಂಬಂಧಿಸಿದ ಒತ್ತಡದಿಂದಾಗಿ ಅವರು ತೀವ್ರ ಮಾನಸಿಕ ಒತ್ತಡದಲ್ಲಿದ್ದರು ಎಂದು ಶರದ್ ಕುಟುಂಬದವರು ಪೊಲೀಸರಿಗೆ ತಿಳಿಸಿದ್ದಾರೆ.

ಈ ಸಂಬಂಧ ವೈಟ್‌ಫೀಲ್ಡ್ ಠಾಣೆಯಲ್ಲಿ ಅಸಹಜ ಸಾವು ಪ್ರಕರಣ ದಾಖಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

MLC election: BJP-JDS ಮೈತ್ರಿ ಅಭ್ಯರ್ಥಿ ರಂಗನಾಥ್ ಭರ್ಜರಿ ಗೆಲುವು; ಪುಟ್ಟಣ್ಣಗೆ ಹೀನಾಯ ಸೋಲು, ಕಾಂಗ್ರೆಸ್​ಗೆ ಮುಖಭಂಗ!

ಕರ್ನಾಟಕದ ಅಂತಿಮ ಮತದಾರರ ಪಟ್ಟಿ ಪ್ರಕಟ; ಒಟ್ಟು ಮತದಾರರು 4.55 ಕೋಟಿ, 99 ಲಕ್ಷಕ್ಕೂ ಹೆಚ್ಚು ಹೆಸರು ಡಿಲೀಟ್!

ವೈಭವ್-ಅಭಿಷೇಕ್ ಅಬ್ಬರದ ಬ್ಯಾಟಿಂಗ್: ಅವರದ್ದೆ ನೆಲದಲ್ಲಿ ಕಿವೀಸ್‌ಗೆ ಸೋಲುಣಿಸಿದ ಭಾರತ, T20 ಸರಣಿ ಕೈವಶ!

ಯುದ್ಧ, ಜೀವನ ವೆಚ್ಚ ಏರಿಕೆ ನಡುವೆ ಇಸ್ರೇಲ್ ಚುನಾವಣೆ: ಪ್ರಧಾನಿ ರೇಸ್‌ನಲ್ಲಿ ಮಾಜಿ ಸೇನಾ ಮುಖ್ಯಸ್ಥ; ನೆತನ್ಯಾಹುಗೆ ಬಿಗ್ ಶಾಕ್​!

ಸ್ಟಿಂಗ್ ಫ್ಯಾಕ್ಟರಿಗಳು ಎಲ್ಲಾ ಕಡೆ ಓಪನ್ ಆಗಿವೆ; ನೋಡಲೂ ಅಸಹ್ಯ, ಕೇಳಲೂ ಅಸಹ್ಯ: ಕೆಎನ್ ರಾಜಣ್ಣ ಸ್ಫೋಟಕ ಹೇಳಿಕೆ