ಸಿಎಂ ಡಿಕೆ ಶಿವಕುಮಾರ್ ಮತ್ತು ವಿಧಾನಸೌಧ (ಸಂಗ್ರಹ ಚಿತ್ರ) 
ರಾಜ್ಯ

ಕರ್ನಾಟಕದಲ್ಲಿ ಮೇಜರ್ ಸರ್ಜರಿ: ಬರೊಬ್ಬರಿ 87 KAS ಅಧಿಕಾರಿಗಳ ವರ್ಗಾವಣೆ; CM ಮಾಸ್ಟರ್‌ ಪ್ಲ್ಯಾನ್‌?

ಆಡಳಿತ ವ್ಯವಸ್ಥೆಯನ್ನು ಬಲಪಡಿಸುವುದು, ದಕ್ಷತೆ ಹೆಚ್ಚಿಸುವುದು ಹಾಗೂ ಸರ್ಕಾರದ ಅಭಿವೃದ್ಧಿ ಕಾರ್ಯಕ್ರಮಗಳ ಪರಿಣಾಮಕಾರಿ ಅನುಷ್ಠಾನಕ್ಕೆ ವೇಗ ನೀಡುವುದು ಈ ವರ್ಗಾವಣೆಯ ಪ್ರಮುಖ ಉದ್ದೇಶವಾಗಿದೆ ಎಂದು ಮುಖ್ಯಮಂತ್ರಿ ಕಚೇರಿ (ಸಿಎಂಒ) ಬುಧವಾರ ತಿಳಿಸಿದೆ.

ಬೆಂಗಳೂರು: ರಾಜ್ಯದ ಆಡಳಿತ ಯಂತ್ರವನ್ನು ಮತ್ತಷ್ಟು ಬಲಪಡಿಸಿ, ಸರ್ಕಾರಿ ಕೆಲಸಗಳ ದಕ್ಷತೆ ಹೆಚ್ಚಿಸುವ ಉದ್ದೇಶದಿಂದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಅವರು 87 ಕರ್ನಾಟಕ ಆಡಳಿತ ಸೇವೆ (ಕೆಎಎಸ್‌) ಅಧಿಕಾರಿಗಳ ವರ್ಗಾವಣೆಗೆ ಆದೇಶಿಸಿದ್ದಾರೆ.

ಆಡಳಿತ ವ್ಯವಸ್ಥೆಯನ್ನು ಬಲಪಡಿಸುವುದು, ದಕ್ಷತೆ ಹೆಚ್ಚಿಸುವುದು ಹಾಗೂ ಸರ್ಕಾರದ ಅಭಿವೃದ್ಧಿ ಕಾರ್ಯಕ್ರಮಗಳ ಪರಿಣಾಮಕಾರಿ ಅನುಷ್ಠಾನಕ್ಕೆ ವೇಗ ನೀಡುವುದು ಈ ವರ್ಗಾವಣೆಯ ಪ್ರಮುಖ ಉದ್ದೇಶವಾಗಿದೆ ಎಂದು ಮುಖ್ಯಮಂತ್ರಿ ಕಚೇರಿ (ಸಿಎಂಒ) ಬುಧವಾರ ತಿಳಿಸಿದೆ.

ರಾಜ್ಯ ಸರ್ಕಾರ ನಗರ ಮತ್ತು ಗ್ರಾಮೀಣ ಪ್ರದೇಶಗಳ ಅಭಿವೃದ್ಧಿ ಕಾರ್ಯಗಳಿಗೆ ಹೆಚ್ಚಿನ ಆದ್ಯತೆಯನ್ನು ನೀಡಿದ್ದು, ಸಾರ್ವಜನಿಕ ಸೇವೆಗಳ ವಿತರಣೆಯಲ್ಲಿ ದಕ್ಷತೆ ಹೆಚ್ಚಿಸಲು ಕ್ರಮ ತೆಗೆದುಕೊಂಡಿದೆ. ಜಿಲ್ಲೆ ಹಾಗೂ ಉಪವಿಭಾಗ ಮಟ್ಟದಲ್ಲಿ ಆಡಳಿತ ಸುಧಾರಣೆಗೆ ಸರ್ಕಾರ ಒತ್ತು ನೀಡಿದ್ದು, ಸರ್ಕಾರಿ ಯೋಜನೆಗಳ ಅನುಷ್ಠಾನದಲ್ಲಿ ವಿಳಂಬ ತಪ್ಪಿಸಿ, ಜನರಿಗೆ ತ್ವರಿತ ಸೇವೆ ಒದಗಿಸುವ ಗುರಿಯನ್ನು ಹೊಂದಿದೆ ಎನ್ನಲಾಗಿದೆ.

ಮೂಲಗಳ ಪ್ರಕಾರ ವರ್ಗಾವಣೆ ವೇಳೆ 9 ಅಧಿಕಾರಿಗಳನ್ನು ಉಪವಿಭಾಗಾಧಿಕಾರಿಗಳ (AC) ಆಗಿ, 4 ಅಧಿಕಾರಿಗಳನ್ನು ಅಪರ ಜಿಲ್ಲಾಧಿಕಾರಿಗಳ (ADC) ನೇಮಕ ಮಾಡಲಾಗಿದೆ. ಜೊತೆಗೆ ನಗರಾಭಿವೃದ್ಧಿ ಇಲಾಖೆಗೆ 15 ಅಧಿಕಾರಿಗಳ ನೇಮಕ ಮಾಡಿ ಆದೇಶಿಸಲಾಗಿದೆ. ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಗೆ 13 ಅಧಿಕಾರಿಗಳನ್ನು ವರ್ಗಾಯಿಸಲಾಗಿದೆ. ಉಳಿದ ಅಧಿಕಾರಿಗಳನ್ನು ವಿವಿಧ ಪ್ರಮುಖ ಇಲಾಖೆಗಳು ಹಾಗೂ ಆಡಳಿತಾತ್ಮಕ ಹುದ್ದೆಗಳಿಗೆ ನಿಯೋಜಿಸಲಾಗಿದೆ.

9 ಸಹಾಯಕ ಆಯುಕ್ತರು, 4 ಹೆಚ್ಚುವರಿ ಜಿಲ್ಲಾಧಿಕಾರಿಗಳ ನೇಮಕ

ವರ್ಗಾವಣೆ ಪ್ರಕ್ರಿಯೆಯ ಭಾಗವಾಗಿ ಒಂಬತ್ತು ಕೆಎಎಸ್‌ ಅಧಿಕಾರಿಗಳನ್ನು ಸಹಾಯಕ ಆಯುಕ್ತರನ್ನಾಗಿ ಹಾಗೂ ನಾಲ್ವರನ್ನು ಹೆಚ್ಚುವರಿ ಜಿಲ್ಲಾಧಿಕಾರಿಗಳನ್ನಾಗಿ ನೇಮಕ ಮಾಡಲಾಗಿದೆ. ನಗರಾಭಿವೃದ್ಧಿ ಹಾಗೂ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಇಲಾಖೆಗಳ ಆಡಳಿತ ಸಾಮರ್ಥ್ಯವನ್ನು ಹೆಚ್ಚಿಸುವುದು, ಅಭಿವೃದ್ಧಿ ಕಾಮಗಾರಿಗಳನ್ನು ತ್ವರಿತಗೊಳಿಸುವುದು ಮತ್ತು ಸಾರ್ವಜನಿಕ ಸೇವೆಗಳ ವಿತರಣೆಯನ್ನು ಸುಧಾರಿಸುವುದು ಈ ಕ್ರಮದ ಉದ್ದೇಶವಾಗಿದೆ ಎಂದು ಸಿಎಂಒ ತಿಳಿಸಿದೆ.

ನಗರಾಭಿವೃದ್ಧಿ ಇಲಾಖೆಗೆ 15, ಗ್ರಾಮೀಣಾಭಿವೃದ್ಧಿ ಇಲಾಖೆಗೆ 13 ಅಧಿಕಾರಿಗಳು

ಒಟ್ಟು 87 ಅಧಿಕಾರಿಗಳ ಪೈಕಿ 15 ಮಂದಿಯನ್ನು ನಗರಾಭಿವೃದ್ಧಿ ಇಲಾಖೆಗೆ ಹಾಗೂ 13 ಮಂದಿಯನ್ನು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಇಲಾಖೆಗೆ ನಿಯೋಜಿಸಲಾಗಿದೆ. ಉಳಿದ ಅಧಿಕಾರಿಗಳನ್ನು ರಾಜ್ಯದ ವಿವಿಧ ಪ್ರಮುಖ ಇಲಾಖೆಗಳು ಮತ್ತು ಆಡಳಿತಾತ್ಮಕ ಹುದ್ದೆಗಳಿಗೆ ವರ್ಗಾವಣೆ ಮಾಡಲಾಗಿದೆ.

ಜನರ ಸಮಸ್ಯೆಗಳಿಗೆ ತ್ವರಿತ ಪರಿಹಾರಕ್ಕೆ ಒತ್ತು

ಜಿಲ್ಲೆ ಹಾಗೂ ಉಪವಿಭಾಗಗಳ ಮಟ್ಟದಲ್ಲಿ ಆಡಳಿತಾತ್ಮಕ ಸಮನ್ವಯವನ್ನು ಸುಧಾರಿಸುವುದು, ಕಲ್ಯಾಣ ಯೋಜನೆಗಳ ಅನುಷ್ಠಾನವನ್ನು ತ್ವರಿತಗೊಳಿಸುವುದು ಮತ್ತು ಸಾರ್ವಜನಿಕರ ಅಹವಾಲುಗಳಿಗೆ ಶೀಘ್ರ ಪರಿಹಾರ ಒದಗಿಸುವುದೂ ಈ ವರ್ಗಾವಣೆಯ ಉದ್ದೇಶವಾಗಿದೆ ಎಂದು ಮುಖ್ಯಮಂತ್ರಿ ಕಚೇರಿ ತಿಳಿಸಿದೆ.

ರಾಜ್ಯದ ವಿವಿಧ ಇಲಾಖೆಗಳ ಕಾರ್ಯನಿರ್ವಹಣೆಯಲ್ಲಿ ದಕ್ಷತೆ, ಪಾರದರ್ಶಕತೆ ಮತ್ತು ಹೊಣೆಗಾರಿಕೆಯನ್ನು ಹೆಚ್ಚಿಸಲು ಸರ್ಕಾರ ಬದ್ಧವಾಗಿದೆ. ಜನಸ್ನೇಹಿ, ಪರಿಣಾಮಕಾರಿ ಹಾಗೂ ಫಲಿತಾಂಶ ಆಧಾರಿತ ಆಡಳಿತವನ್ನು ಒದಗಿಸುವ ನಿಟ್ಟಿನಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಸಿಎಂಒ ಹೇಳಿದೆ.

ಈ ವರ್ಗಾವಣೆಗಳು ರಾಜ್ಯದ ವಿವಿಧ ಇಲಾಖೆಗಳಲ್ಲಿ ಹೊಸ ಬದಲಾವಣೆಗಳನ್ನು ತಂದಿವೆ. ಪ್ರಮುಖ ಕ್ಷೇತ್ರಗಳಲ್ಲಿ ಹೊಸ ಅಧಿಕಾರಿಗಳು ಜವಾಬ್ದಾರಿ ವಹಿಸಿಕೊಂಡಿದ್ದಾರೆ. ಸರ್ಕಾರ ಆಡಳಿತದ ಸಮರ್ಪಕತೆಗಾಗಿ ಈ ಬದಲಾವಣೆಗಳನ್ನು ಮಾಡಿದೆ.

ಹೊಸ ಹುದ್ದೆಗಳಲ್ಲಿ ಅಧಿಕಾರಿಗಳು ತಮ್ಮ ಜವಾಬ್ದಾರಿಗಳನ್ನು ಪರಿಣಾಮಕಾರಿಯಾಗಿ ನಿರ್ವಹಿಸುವ ನಿರೀಕ್ಷೆಯಿದೆ. ರಾಜ್ಯದ ಆಡಳಿತ ಯಂತ್ರ ಸುಗಮವಾಗಿ ನಡೆಯಲು ಇಂತಹ ವರ್ಗಾವಣೆಗಳು ಸಹಾಯಕವಾಗುತ್ತವೆ ಎನ್ನಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಕರ್ನಾಟಕದಲ್ಲಿ 'ಶೂನ್ಯ'; ಬ್ಯಾಲೆಟ್ ಪೇಪರ್‌ನಲ್ಲಿ ನಡೆದ 28 MLC ಚುನಾವಣೆಯಲ್ಲಿ ಕಾಂಗ್ರೆಸ್ ಗೆದ್ದಿದ್ದೆಷ್ಟು? ಪ್ರಧಾನಿ ಮೋದಿ ಲೇವಡಿ

ವೃತ್ತಿಜೀವನಕ್ಕೆ ತಂದೆ ಯಾವುದೇ ಸಹಾಯ ಮಾಡಿಲ್ಲ; ಸಿಂಗಲ್ ಮದರ್ ಜತೆ ವಾಸಿಸುತ್ತಿದ್ದೇನೆ: ಸೈಫ್ ವಿರುದ್ಧ ಸಿಡಿದೆದ್ದ ಸಾರಾ ಅಲಿ ಖಾನ್

ಟೀಮ್ ಇಂಡಿಯಾಗೆ ಆಘಾತ; ಗಾಯದ ಸಮಸ್ಯೆಯಿಂದ ನ್ಯೂಜಿಲೆಂಡ್‌ ಏಕದಿನ ಸರಣಿಯಿಂದ Prasidh Krishna ಔಟ್!

ಮಾಜಿ ಶಾಸಕನಿಗೆ ಹನಿಟ್ರ್ಯಾಪ್​​ ಆತಂಕ, ವಿಡಿಯೋ ಪ್ರಸಾರ ಮಾಡುವ ಬೆದರಿಕೆ: ನಿರ್ಬಂಧಕಾಜ್ಞೆ ಕೋರಿ ಹೈಕೋರ್ಟ್​​ಗೆ ರಿಟ್ ಅರ್ಜಿ ಸಲ್ಲಿಕೆ!

ಪಾಕಿಸ್ತಾನಕ್ಕೆ ಮತ್ತೆ ICC ಶಾಕ್: ಸ್ಟಾರ್ ವೇಗಿಗೆ ದುಬಾರಿ ದಂಡ, ಡಿಮೆರಿಟ್ ಅಂಕ ಏರಿಕೆ, ಅಮಾನತು ಭೀತಿ!