ಹಾಸನಾಂಬ ದೇವಸ್ಥಾನ 
ರಾಜ್ಯ

ನಾಳೆ ಹಾಸನಾಂಬ ದೇವಿ ಗರ್ಭಗುಡಿ ಬಾಗಿಲು ಓಪನ್; ಒಂದು ಗೋಲ್ಡ್ ಪಾಸ್‌ಗೆ ಒಬ್ಬರಿಗೆ ಮಾತ್ರ ಪ್ರವೇಶ: ಸಚಿವ ಶಿವಲಿಂಗೇಗೌಡ

ಬೆಳಗ್ಗೆ 10.30 ರಿಂದ 12.30 ರ ನಡುವೆ ಎರಡು ಗಂಟೆಗಳ ಕಾಲ ಗಣ್ಯರಿಗೆ ದರ್ಶನಕ್ಕೆ ಅವಕಾಶ ಇರಲಿದೆ ಎಂದು ಸಚಿವರು ತಿಳಿಸಿದ್ದಾರೆ.

ಹಾಸನ: ಪ್ರಸಿದ್ಧ ಹಾಸನಾಂಬೆ ದೇವಿ ದರ್ಶನೋತ್ಸವ ಗುರುವಾರದಿಂದ 14 ದಿನಗಳ ಕಾಲ ನಡೆಯಲಿದೆ. ಹಾಸನಾಂಬೆ ದರ್ಶನ ಸುಸೂತ್ರವಾಗಿ ನಡೆಯಲು ಜಿಲ್ಲಾಡಳಿತ ಸಕಲ ಸಿದ್ಧತೆ ಮಾಡಿಕೊಂಡಿದೆ.

ನಾಳೆ ಹಾಸನಾಂಬ ದೇವಿ ಗರ್ಭಗುಡಿ ಬಾಗಿಲು ತೆರೆಯಲಿದ್ದು, ಒಂದು ಗೋಲ್ಡ್ ಪಾಸ್‌ನಲ್ಲಿ ಒಬ್ಬರಿಗೆ ಮಾತ್ರ ದರ್ಶನಕ್ಕೆ ಅವಕಾಶ ಕಲ್ಪಿಸಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಂ.ಶಿವಲಿಂಗೇಗೌಡ ಅವರು ಹೇಳಿದ್ದಾರೆ.

ಇಂದು ಹಾಸನದಲ್ಲಿ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಸಚಿವರು, ನಾಳೆ ಹಾಸನಾಂಬ ದೇವಿ ಗರ್ಭಗುಡಿ ಬಾಗಿಲು ತೆರೆಯಲಿದೆ. ಕರ್ನಾಟಕ ರಾಜ್ಯದ ಜನರಿಗೆ ಸುಗಮ ದೇವಿ ದರ್ಶನಕ್ಕೆ ಜಿಲ್ಲಾಡಳಿತ ತಯಾರಿ ನಡೆಸಿದೆ ಎಂದರು.

ಹಾಸನಾಂಬ ಜಾತ್ರಾ ಮಹೋತ್ಸವ ಇಡೀ ಕರ್ನಾಟಕ ರಾಜ್ಯ ನೋಡುವ ರೀತಿ ನಾಡಹಬ್ಬವಾಗಿ ಪರಿವರ್ತನೆಗೊಂಡು ಜನಮನ ಸೆಳೆದಿದೆ. ಕಳೆದ ವರ್ಷದ ರೀತಿಯಲ್ಲೂ ಈ ಬಾರಿಯೂ ಕಾರ್ಯಕ್ರಮ, ವ್ಯವಸ್ಥೆ ಮಾಡಿದ್ದೀನಿ. ಮೈಸೂರು ದಸರಾಗೆ ಬಂದಂತಹ ಜನಗಳಿಗೆ ಸಾಂಸ್ಕೃತಿಕ, ಕ್ರೀಡಾ ಚಟುವಟಿಕೆಗಳನ್ನು ಆಯೋಜಿಸಿದ್ದರು. ಅದೇ ರೀತಿ ಹಾಸನದ ನಗರಸಭೆ ವಸ್ತು ಪ್ರದರ್ಶನದ ಆವರಣದಲ್ಲಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಮಹಿಳೆಯರು ಮತ್ತು ಪುರುಷರಿಗೆ ಕುಸ್ತಿ ಪಂದ್ಯಾವಳಿ ಆಯೋಜಿಸಲಾಗಿದೆ. 400ಕ್ಕೂ ಹೆಚ್ಚು ಕುಸ್ತಿಪಟುಗಳು ಭಾಗವಹಿಸಲಿದ್ದಾರೆ ಎಂದರು.

ಗಣ್ಯರ ದರ್ಶನಕ್ಕೆ ಜಿಲ್ಲಾಡಳಿತದಿಂದಲೇ ವ್ಯವಸ್ಥೆ

ಜಿಲ್ಲಾಡಳಿತದ ವತಿಯಿಂದಲೇ ಗಣ್ಯರನ್ನು ಕರೆತಂದು ದೇವಿಯ ದರ್ಶನ ಮಾಡಿಸಲು ತೀರ್ಮಾನಿಸಲಾಗಿದ್ದು, ಬೆಳಗ್ಗೆ 10.30 ರಿಂದ 12.30 ರ ನಡುವೆ ಎರಡು ಗಂಟೆಗಳ ಕಾಲ ಗಣ್ಯರಿಗೆ ದರ್ಶನಕ್ಕೆ ಅವಕಾಶ ಇರಲಿದೆ ಎಂದು ಸಚಿವರು ತಿಳಿಸಿದ್ದಾರೆ.

ಒಂದು ಗೋಲ್ಡ್ ಪಾಸ್‌ಗೆ ಒಬ್ಬರಿಗೆ ಮಾತ್ರ ಪ್ರವೇಶ

ಇನ್ನು ಗೋಲ್ಡ್ ಪಾಸ್ ಪಡೆದವರಿಗೆ ಬೆಳಗ್ಗೆ 8 ರಿಂದ 10 ಗಂಟೆವರೆಗೆ ದರ್ಶನಕ್ಕೆ ಅವಕಾಶ ಇರಲಿದ್ದು, ಒಬ್ಬರು ಮಾತ್ರ ಇದರ ಪ್ರಯೋಜನ ಪಡೆಯಬಹುದು. ಮೊದಲ ಹಾಗೂ ಕೊನೆಯ ದಿನ ಯಾವುದೇ ಶಿಷ್ಟಾಚಾರ, ಪಾಸ್ ವ್ಯವಸ್ಥೆ ಇರುವುದಿಲ್ಲ ಎಂದು ಸಚಿವರು ಸ್ಪಷ್ಟಪಡಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಈ ಫಲಿತಾಂಶ ಆಶ್ಚರ್ಯವೇನಲ್ಲ, ಮೋದಿಗೂ ಇದು ಎಚ್ಚರಿಕೆ ಸಂಕೇತ': MLC ಚುನಾವಣೆಯಲ್ಲಿ 'ಕೈ' ಶೂನ್ಯ ಸಾಧನೆ ಬಗ್ಗೆ BK ಹರಿಪ್ರಸಾದ್

MLC ಚುನಾವಣೆ: ವಾರಣಾಸಿಯ ಎರಡೂ ಸ್ಥಾನಗಳಲ್ಲಿ SP ಜಯಭೇರಿ; ಪ್ರಧಾನಿ ಮೋದಿ ಕ್ಷೇತ್ರದಲ್ಲೇ BJPಗೆ ಮುಖಭಂಗ!

'ಸಾವಿರಾರು ಪೋಸ್ಟ್‌ಗಳು ಮಾಯ': 'ಖಾತೆಗಳನ್ನು ತೆಗೆದುಹಾಕಿದ ಮಾತ್ರಕ್ಕೆ ಪ್ರಶ್ನೆಗಳು ಮಾಯವಾಗಲ್ಲ'; ಕೇಂದ್ರದ ವಿರುದ್ಧ ಅಭಿಜಿತ್ ದೀಪ್ಕೆ!

'ದಕ್ಷಿಣ ಭಾರತದ ಸಿನಿಮಾ ಇಂಡಸ್ಟ್ರಿಗೆ ನಟಿಯರ ಮೈ ಬಣ್ಣದ ಗೀಳು; ಬಾಲಿವುಡ್‌ಗೆ ವಿದೇಶಿಯರೇ ಬೇಕು'!

ಟಾಟಾ ಸಮೂಹದಲ್ಲಿ ಬಿಕ್ಕಟ್ಟು: ಭಾರತೀಯ ಉದ್ಯಮಗಳು ನಿಮ್ಮ ಆಟದ ವಸ್ತುಗಳಲ್ಲ; ಪ್ರಧಾನಿ ಮೋದಿ-ಅಮಿತಾ ಶಾ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ