ಸಿದ್ದರಾಮಯ್ಯ 
ರಾಜ್ಯ

ಗಣಿಗಾರಿಕೆಗೆ ಅಕ್ರಮ ಪರವಾನಗಿ: ಸಿದ್ದರಾಮಯ್ಯ ವಿರುದ್ಧದ PIL ವಜಾ

ಈ ಸಂಬಂಧ ಉದ್ಯಮಿ ಎಂ.ಪಿ.ವೇಣುಗೋಪಾಲ್‌ ಸಲ್ಲಿಸಿದ್ದ ಮಧ್ಯಂತರ ಅರ್ಜಿಯನ್ನು ನ್ಯಾಯಮೂರ್ತಿ ಅನು ಶಿವರಾಮನ್‌ ನೇತೃತ್ವದ ದ್ವಿಸದಸ್ಯ ನ್ಯಾಯಪೀಠ ಮಂಗಳವಾರ ವಿಚಾರಣೆ ನಡೆಸಿತು.

ಬೆಂಗಳೂರು: ಗಣಿಗಾರಿಕೆಗೆ ಅಕ್ರಮವಾಗಿ ಪರವಾನಗಿ ಮಂಜೂರು, ನವೀಕರಣ ಮಾಡಿದ ಆರೋಪ ಸಂಬಂಧ ಮಾಜಿ ಮುಖ್ಯಮಂತ್ರಿ ಸಿದ್ಧರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್‌ಗೆ ಪೂರ್ವಾನುಮತಿ ನೀಡಲು ರಾಜ್ಯ ಸರ್ಕಾರ ಹಾಗೂ ರಾಜ್ಯಪಾಲರಿಗೆ ನಿರ್ದೇಶಿಸುವಂತೆ ಕೋರಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಜಾ ಆದೇಶವನ್ನು ಹೈಕೋರ್ಟ್ ವಜಾಗೊಳಿಸಿದೆ.

ಈ ಸಂಬಂಧ ಉದ್ಯಮಿ ಎಂ.ಪಿ.ವೇಣುಗೋಪಾಲ್‌ ಸಲ್ಲಿಸಿದ್ದ ಮಧ್ಯಂತರ ಅರ್ಜಿಯನ್ನು ನ್ಯಾಯಮೂರ್ತಿ ಅನು ಶಿವರಾಮನ್‌ ನೇತೃತ್ವದ ದ್ವಿಸದಸ್ಯ ನ್ಯಾಯಪೀಠ ಮಂಗಳವಾರ ವಿಚಾರಣೆ ನಡೆಸಿತು.

ವಿಚಾರಣೆ ವೇಳೆ ಸರ್ಕಾರದ ಪರ ರಾಜ್ಯ ಅಡ್ವೊಕೇಟ್‌ ಜನರಲ್‌ ಕೆ.ಶಶಿಕಿರಣ್‌ ಶೆಟ್ಟಿ, ಇದೇ ವಿಚಾರವಾಗಿ ಈ ಹಿಂದೆ ಅರ್ಜಿದಾರರು ದಾಖಲಿಸಿದ್ದ ಖಾಸಗಿ ದೂರನ್ನು ವಿಚಾರಣಾ ನ್ಯಾಯಾಲಯ ವಜಾಗೊಳಿಸಿತ್ತು.

ಹೀಗಿದ್ದರೂ ಆ ಅಂಶಗಳನ್ನೇ ಆಧರಿಸಿ 2025ರ ಏಪ್ರಿಲ್‌ನಲ್ಲಿ ಅರ್ಜಿದಾರರು ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದರು. ಅವರು ವಿಚಾರಣೆಗೆ ಸತತವಾಗಿ ಗೈರಾಗಿದ್ದಕ್ಕೆ 2025ರ ಸೆ.19ರಂದು ಹೈಕೋರ್ಟ್‌ ಅರ್ಜಿಯನ್ನು ವಜಾಗೊಳಿಸಿತ್ತು. ಅದನ್ನು ಹಿಂಪಡೆಯುವಂತೆ ಕೋರಿ ಅರ್ಜಿದಾರರು ಈ ಮಧ್ಯಂತರ ಅರ್ಜಿ ಸಲ್ಲಿಸಿದ್ದು, ಅದನ್ನು ವಜಾಗೊಳಿಸಬೇಕು ಎಂದು ಕೋರಿದರು.

ಮತ್ತೊಂದೆಡೆ ಅರ್ಜಿದಾರರ ಪರ ವಕೀಲರು, ಪ್ರಕರಣ ಸಂಬಂಧ ತಮಗೆ ಅರ್ಜಿದಾರರು ಸೂಕ್ತ ಸ್ಪಂದಿಸುತ್ತಿಲ್ಲ. ಹಾಗಾಗಿ, ಅರ್ಜಿಯಿಂದ ತಾವು ಹಿಂದೆ ಸರಿಯುತ್ತೇವೆ ಎಂದು ತಿಳಿಸಿ ಮೆಮೊ ಸಲ್ಲಿಸಿದರು. ಅದನ್ನು ಪರಿಗಣಿಸಿದ ಪೀಠ, ಮಧ್ಯಂತರ ಅರ್ಜಿ ವಜಾಗೊಳಿಸಿತು.

2015ರಲ್ಲಿ ಮುಖ್ಯಮಂತ್ರಿಯಾಗಿದ್ದ ಸಿದ್ದರಾಮಯ್ಯ ಅವರು, ಗಣಿ ಮತ್ತು ಖನಿಜ (ಅಭಿವೃದ್ಧಿ ಮತ್ತು ನಿಯಂತ್ರಣ) ಕಾಯ್ದೆಯ ನಿಯಮಗಳನ್ನು ಉಲ್ಲಂಘಿಸಿ ಅನೇಕ ಕಂಪನಿಗಳಿಗೆ ಅಕ್ರಮವಾಗಿ ಗಣಿಗಾರಿಕೆ ಪರವಾನಗಿ ನೀಡಿದ್ದಾರೆ ಹಾಗೂ ಕೆಲ ಕಂಪನಿಗಳ ಪರವಾನಗಿ ನವೀಕರಿಸಿದ್ದಾರೆ.

ಭ್ರಷ್ಟಾಚಾರ ನಿಯಂತ್ರಣ ಕಾಯ್ದೆಯಡಿ ಲೋಕಾಯುಕ್ತ ಪೊಲೀಸರಿಂದ ತನಿಖೆಗೆ ಆದೇಶಿಸಿ, ತನಿಖಾ ವರದಿ ಪಡೆದುಕೊಳ್ಳಬೇಕು. ಅಕ್ರಮವಾಗಿ ಪರವಾನಗಿ ನೀಡಿದರ ಪರಿಣಾಮ ಸರ್ಕಾರದ ಬೊಕ್ಕಸಕ್ಕೆ ಉಂಟಾಗಿರುವ ನಷ್ಟ ವಸೂಲಿ ಮಾಡಬೇಕು. ಸಿದ್ದರಾಮಯ್ಯ ವಿರುದ್ಧದ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಲು ಸರ್ಕಾರ ಮತ್ತು ರಾಜ್ಯಪಾಲರಿಗೆ ನಿರ್ದೇಶಿಸಬೇಕು ಎಂದು ಕೋರಿ ಅರ್ಜಿದಾರರು ಪಿಐಎಲ್ ಸಲ್ಲಿಸಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Cyclone Arnab: ಆಂಧ್ರಪ್ರದೇಶ ಕರಾವಳಿಗೆ ಅಪ್ಪಳಿಸಿದ 'ಅರ್ನಬ್' ಚಂಡಮಾರುತ; ಗಂಟೆಗೆ 150 ಕಿಮೀ ವೇಗದಲ್ಲಿ ಬಿರುಗಾಳಿ; Video

ಭೀಕರ ಬರಕ್ಕೆ ನಲುಗಿದ ಗದಗ: ಹೊಂಬಾಳ ಗ್ರಾಮದಲ್ಲಿ ರೈತರ ಆಕ್ರಂದನ, ಬದುಕಿಗಾಗಿ ನಗರಗಳತ್ತ ಮುಖ ಮಾಡಿದ ಅನ್ನದಾತ..!

"ಮೋದಿ ಕಾ ಬಾಪ್ ಭಿ ಜಾಯೇಗಾ" ಹೇಳಿಕೆ ವಿವಾದ: ನಿಂದಿಸಿಲ್ಲ, ಪ್ರಚೋದನೆಗೆ ಉತ್ತರಿಸಿದ್ದಾರೆ: ಖರ್ಗೆ ಬೆನ್ನಿಗೆ ನಿಂತ 'ಕೈ' ಪಡೆ..!

ಬೆಂಗಳೂರು ಅಭಿವೃದ್ಧಿಗೆ 10 ವರ್ಷಗಳ ಮೆಗಾ ಪ್ಲ್ಯಾನ್‌; ₹1 ಲಕ್ಷ ಕೋಟಿ ವೆಚ್ಚದ ಯೋಜನೆಗಳ ಘೋಷಣೆ..!

ತ್ಯಾಜ್ಯ ವಿಲೇವಾರಿ ಕೇಂದ್ರಗಳ ಟೆಂಡರ್‌ನಲ್ಲಿ ಬರೋಬ್ಬರಿ 133 ಕೋಟಿ ರೂ. ಅಕ್ರಮ ಆರೋಪ: ಲೋಕಾಯುಕ್ತ ತನಿಖೆಗೆ BJP ಆಗ್ರಹ..!