ಬಿ.ವೈ.ವಿಜಯೇಂದ್ರ, ಆರ್.ಅಶೋಕ್ ಸಾಂದರ್ಭಿಕ ಚಿತ್ರ 
ರಾಜ್ಯ

ರೈತರಿಗೆ ಕೊಡಲು ಸರ್ಕಾರದ ಬಳಿ ದುಡ್ಡಿಲ್ವಾ? ಸತ್ಯ ಮುಚ್ಚಿಡದೆ ರಾಜ್ಯದ ಆರ್ಥಿಕ ಪರಿಸ್ಥಿತಿ ಬಗ್ಗೆ ಶ್ವೇತಪತ್ರ ಹೊರಡಿಸಿ..!

ಭ್ರಷ್ಟ ಕಾಂಗ್ರೆಸ್ ಸರ್ಕಾರ ರಾಜ್ಯದ ಖಜಾನೆಯನ್ನು ಖಾಲಿ ಮಾಡಿದ್ದು, ಹಣಕಾಸಿನ ಕೊರತೆಯಿಂದಾಗಿ ರೈತರ ಸಂಕಷ್ಟಕ್ಕೆ ಸ್ಪಂದಿಸಲು ಸಾಧ್ಯವಾಗದಿರುವುದು ನಾಚಿಕೆಗೇಡಿನ ಸಂಗತಿ.

ಬೆಂಗಳೂರು: ಹಣಕಾಸಿನ ಕೊರತೆಯ ನೆಪ ಹೇಳುವುದನ್ನು ನಿಲ್ಲಿಸಿ, ರಾಜ್ಯದ ನೈಜ ಆರ್ಥಿಕ ಸ್ಥಿತಿಗತಿ ಕುರಿತು ಶ್ವೇತಪತ್ರ ಹೊರಡಿಸಿ ಎಂದು ರಾಜ್ಯ ಸರ್ಕಾರಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ಆಗ್ರಹಿಸಿದ್ದಾರೆ.

ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಣಕಾಸಿನ ಕೊರತೆಯ ನೆಪ ಹೇಳುವುದನ್ನು ನಿಲ್ಲಿಸಿ, ರಾಜ್ಯದ ನೈಜ ಆರ್ಥಿಕ ಸ್ಥಿತಿಗತಿ ಕುರಿತು ಶ್ವೇತಪತ್ರ ಹೊರಡಿಸಿ. ಇದರಿಂದ ಸರ್ಕಾರದ ಆರ್ಥಿಕ ಪರಿಸ್ಥಿತಿ ಹೇಗಿದೆ ಎಂಬುದು ರೈತರಿಗೆ ತಿಳಿಯಲಿದೆ. ಸರ್ಕಾರ ನೀಡಿರುವ ಭರವಸೆಗಳು ಮತ್ತು ಅವುಗಳ ಅನುಷ್ಠಾನದ ನಡುವಿನ ವ್ಯತ್ಯಾಸವನ್ನು ಜನರು ಅರಿಯಲು ಸಾಧ್ಯವಾಗಲಿದೆ ಎಂದು ಹೇಳಿದ್ದಾರೆ.

ಭ್ರಷ್ಟ ಕಾಂಗ್ರೆಸ್ ಸರ್ಕಾರ ರಾಜ್ಯದ ಖಜಾನೆಯನ್ನು ಖಾಲಿ ಮಾಡಿದ್ದು, ಹಣಕಾಸಿನ ಕೊರತೆಯಿಂದಾಗಿ ರೈತರ ಸಂಕಷ್ಟಕ್ಕೆ ಸ್ಪಂದಿಸಲು ಸಾಧ್ಯವಾಗದಿರುವುದು ನಾಚಿಕೆಗೇಡಿನ ಸಂಗತಿ.

ಕಬ್ಬು ಬೆಳೆಗಾರರಿಗೆ ಹಣ ನೀಡಲು ಸರ್ಕಾರದ ಬಳಿ ಅನುದಾನವಿಲ್ಲ ಎಂದು ಮುಖ್ಯಮಂತ್ರಿ ಹೇಳಿದ್ದಾರೆ. “ನನ್ನ ಸ್ವಂತ ಹಣದಿಂದ ಕೊಡಬೇಕೇ?” ಎಂದು ಅವರು ಪ್ರಶ್ನಿಸಿರುವುದು ಸರ್ಕಾರದ ದಿವಾಳಿತನವನ್ನು ತೋರಿಸುತ್ತದೆ. ರೈತರ ಎದುರು ತನ್ನ ವೈಫಲ್ಯ ಮತ್ತು ಅಸಹಾಯಕತೆಯನ್ನು ಸರ್ಕಾರ ಒಪ್ಪಿಕೊಂಡಂತಾಗಿದೆ ಎಂದು ಟೀಕಿಸಿದ್ದಾರೆ.

ರಾಜ್ಯದ ಖಜಾನೆ ಖಾಲಿಯಾಗಿದೆ ಎಂದು ಮುಖ್ಯಮಂತ್ರಿ ಅಸಹಾಯಕತೆ ವ್ಯಕ್ತಪಡಿಸಿರುವುದು ದುರದೃಷ್ಟಕರ. ಅವರ ಈ ನಡೆ ಖಂಡನೀಯ. ರಾಜ್ಯದಲ್ಲಿ ಅಭಿವೃದ್ಧಿ ಕಾಮಗಾರಿಗಳು ನಡೆಯುತ್ತಿಲ್ಲ. ಕಾಂಗ್ರೆಸ್ ಸರ್ಕಾರ ಖಜಾನೆಯನ್ನು ಲೂಟಿ ಮಾಡಿದ್ದು, ರೈತರ ಕೆಲಸಗಳಿಗೆ ಹಣ ಪಾವತಿಸಲು ಸಾಧ್ಯವಾಗದಿರುವುದು ನಾಚಿಕೆಗೇಡಿನ ಸಂಗತಿ. ಭರವಸೆ ನೀಡಿದಂತೆ ಕೆಲಸ ಮಾಡುತ್ತಿದ್ದೇವೆ ಎಂದು ಸರ್ಕಾರ ಹೇಳಿಕೊಳ್ಳುತ್ತಿದ್ದರೂ, ವಾಸ್ತವದಲ್ಲಿ ಹಾಗಿಲ್ಲ ಎಂದು ಆರೋಪಿಸಿದ್ದಾರೆ.

ಇದೇ ವೇಳೆ, ಕಾಂಗ್ರೆಸ್ ಕಾರ್ಯಕರ್ತರನ್ನು ಸಮಾಧಾನಪಡಿಸಲು ಸರ್ಕಾರ ಗ್ಯಾರಂಟಿ ಅನುಷ್ಠಾನ ಸಮಿತಿಗಳನ್ನು ಬಳಸಿಕೊಳ್ಳುತ್ತಿದೆ ಎಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕ ಆರ್. ಅಶೋಕ ಆರೋಪಿಸಿದ್ದಾರೆ.

ತಮ್ಮ ಅಹಂ ತೃಪ್ತಿಪಡಿಸಿಕೊಳ್ಳಲು ಸರ್ಕಾರ ಸಾಧನಾ ಸಮಾವೇಶ ಆಯೋಜಿಸಿತು. ಮಂಡಳಿ ಮತ್ತು ನಿಗಮಗಳ ಹೆಸರಿನಲ್ಲಿ ಹಣ ಲೂಟಿ ಮಾಡಲಾಗಿದೆ. ಇದರಿಂದ ರೈತರಿಗೆ ಹಣ ಪಾವತಿಸಲು ಸಾಧ್ಯವಾಗುತ್ತಿಲ್ಲ. ರೈತರಿಗೆ ನೆರವಾಗುವ ಬದಲು ಮುಖ್ಯಮಂತ್ರಿ ಬೇಜವಾಬ್ದಾರಿಯುತ ಹೇಳಿಕೆ ನೀಡುತ್ತಿದ್ದಾರೆ ಎಂದು ಟೀಕಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಈ ಫಲಿತಾಂಶ ಆಶ್ಚರ್ಯವೇನಲ್ಲ, ಮೋದಿಗೂ ಇದು ಎಚ್ಚರಿಕೆ ಸಂಕೇತ': MLC ಚುನಾವಣೆಯಲ್ಲಿ 'ಕೈ' ಶೂನ್ಯ ಸಾಧನೆ ಬಗ್ಗೆ BK ಹರಿಪ್ರಸಾದ್

ಬೆಂಗಳೂರಿನ ಚಿತ್ರಣವನ್ನೇ ಬದಲಿಸಿದ SIR; ಮತದಾರರ ಸಂಖ್ಯೆ ಶೇ.43ರಷ್ಟು ಇಳಿಕೆ, 1.03 ಕೋಟಿಯಿಂದ 59.08 ಲಕ್ಷಕ್ಕೆ ಕುಸಿತ!

'ಯಾವುದೇ ಕಾರಣಕ್ಕೂ ಕ್ಷಮೆ ಕೇಳಲ್ಲ, ರಾಜಮಾತೆ ಪ್ರಮೋದಾ ದೇವಿ ಜತೆ ಮಾತನಾಡುವ ಅಗತ್ಯವೂ ನನಗಿಲ್ಲ: ಯತೀಂದ್ರ ಸಿದ್ದರಾಮಯ್ಯ

MLC ಚುನಾವಣೆ: ವಾರಣಾಸಿಯ ಎರಡೂ ಸ್ಥಾನಗಳಲ್ಲಿ SP ಜಯಭೇರಿ; ಪ್ರಧಾನಿ ಮೋದಿ ಕ್ಷೇತ್ರದಲ್ಲೇ BJPಗೆ ಮುಖಭಂಗ!

ಯಾವುದೇ ಚುನಾವಣೆ ಒಂದು ಎಚ್ಚರಿಕೆಯ ಗಂಟೆ; 2028ಕ್ಕೆ ನಾವೇ ಗೆಲ್ಲುತ್ತೇವೆ: ಪ್ರಿಯಾಂಕ್ ಖರ್ಗೆ; Video