ಡಿಕೆ ಶಿವಕುಮಾರ್ 
ರಾಜ್ಯ

ನವ ಬೆಂಗಳೂರು ನಿರ್ಮಾಣದತ್ತ ಡಿಕೆಶಿ ದೃಢ ಹೆಜ್ಜೆ: ₹1 ಲಕ್ಷ ಕೋಟಿ ಯೋಜನೆ; ಟನಲ್ ರೋಡ್ ಸೇರಿ 500 ಕಿ.ಮೀ ಹೊಸ ರಸ್ತೆ ನಿರ್ಮಾಣ!

ಬೆಂಗಳೂರಿನ ಭವಿಷ್ಯದ ಅಗತ್ಯಗಳನ್ನು ಗಮನದಲ್ಲಿಟ್ಟುಕೊಂಡು, ರಸ್ತೆ, ಸುರಂಗ ಮಾರ್ಗ, ಎಲಿವೇಟೆಡ್‌ ಕಾರಿಡಾರ್, ಮೆಟ್ರೋ, ಬಸ್ ಹಾಗೂ ಉಪನಗರ ರೈಲು ಸೇರಿದಂತೆ ಸಮಗ್ರ ಮೂಲಸೌಕರ್ಯ ಅಭಿವೃದ್ಧಿಗೆ ಆದ್ಯತೆ ನೀಡಿ, ಮುಂದಿನ 10 ವರ್ಷಗಳ ದೂರದೃಷ್ಟಿಯ ಯೋಜನೆಯನ್ನು ರೂಪಿಸಲಾಗಿದೆ.

ಬೆಂಗಳೂರು: ಡಿಕೆ ಶಿವಕುಮಾರ್ ಅವರು ಮುಖ್ಯಮಂತ್ರಿ ಆಗಿ ಅಧಿಕಾರ ವಹಿಸಿಕೊಂಡ ದಿನದಿಂದಲೂ ರಾಜಧಾನಿ ಬೆಂಗಳೂರಿನ ಅಭಿವೃದ್ಧಿಗೆ ಹೆಚ್ಚು ಮಹತ್ವ ಕೊಡುತ್ತಿದ್ದು, ಇದೀಗ ನವ ಬೆಂಗಳೂರು ನಿರ್ಮಾಣಕ್ಕಾಗಿ ಬರೋಬ್ಬರಿ 1 ಲಕ್ಷ ಕೋಟಿ ರೂಪಾಯಿ ಮೌಲ್ಯದ ಯೋಜನೆಗಳನ್ನು ಘೋಷಿಸಿದ್ದಾರೆ.

ಬೆಂಗಳೂರಿನ ಜನಸಂಖ್ಯೆ ಮತ್ತು ವಾಹನಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ, ಇಲ್ಲಿನ ಸಂಚಾರ ದಟ್ಟಣೆಯನ್ನು ಕಡಿಮೆ ಮಾಡಲು ಉದ್ದೇಶಿಸಿರುವ ಹಲವಾರು ಮೂಲಸೌಕರ್ಯ ಯೋಜನೆಗಳನ್ನು ಜಾರಿಗೊಳಿಸುವುದಾಗಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಮಾಹಿತಿ ನೀಡಿದರು.

ಬೆಂಗಳೂರಿನ ಮೂಲಸೌಕರ್ಯವನ್ನು ಮೇಲ್ದರ್ಜೆಗೇರಿಸಲು ರಾಜ್ಯ ಸರ್ಕಾರ ಬದ್ಧವಾಗಿದೆ ಮತ್ತು ನಗರದ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ ನೀಡಲಾಗಿದೆ ಎಂದು ಸಿಎಂ ತಿಳಿಸಿದ್ದಾರೆ.

ಈ ಸಂಬಂಧ ಮುಖ್ಯಮಂತ್ರಿಗಳ ಗೃಹ ಕಚೇರಿ 'ಕೃಷ್ಣ'ದಲ್ಲಿ, ಬೆಂಗಳೂರಿನ ಶಾಸಕರು ಹಾಗೂ ವಿಧಾನ ಪರಿಷತ್ ಸದಸ್ಯರೊಂದಿಗೆ ನಡೆಸಿದ ಸಭೆಯಲ್ಲಿ ಬೆಂಗಳೂರಿನ ಅಭಿವೃದ್ಧಿಗೆ ಸಂಬಂಧಿಸಿದ ಹಲವು ವಿಷಯಗಳ ಕುರಿತು ಚರ್ಚಿಸಿದ್ದಾರೆ.

ಮುಖ್ಯಮಂತ್ರಿಗಳ ಕಚೇರಿ ಬಿಡುಗಡೆ ಮಾಡಿದ ಹೇಳಿಕೆಯ ಪ್ರಕಾರ, ಭಾರತದ ಇತರ ಪ್ರಮುಖ ನಗರಗಳಿಗೆ ಹೋಲಿಸಿದರೆ ಬೆಂಗಳೂರಿನಲ್ಲಿ ಜನಸಂಖ್ಯೆ ಮತ್ತು ವಾಹನಗಳ ಸಂಖ್ಯೆ ವೇಗವಾಗಿ ಹೆಚ್ಚಾಗುತ್ತಿದ್ದು, ರಸ್ತೆಗಳ ಸಾಮರ್ಥ್ಯವು ಅದಕ್ಕೆ ತಕ್ಕಂತಿಲ್ಲ ಎಂದು ಡಿಕೆ ಶಿವಕುಮಾರ್ ಹೇಳಿದ್ದಾರೆ.

ಆದ್ದರಿಂದ, ಸರ್ಕಾರವು ರಸ್ತೆ ನಿರ್ಮಾಣಕ್ಕೆ ಆದ್ಯತೆ ನೀಡಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ನವ ಬೆಂಗಳೂರು ನಿರ್ಮಾಣದತ್ತ ದೃಢ ಹೆಜ್ಜೆ

ಬೆಂಗಳೂರಿನ ಭವಿಷ್ಯದ ಅಗತ್ಯಗಳನ್ನು ಗಮನದಲ್ಲಿಟ್ಟುಕೊಂಡು, ರಸ್ತೆ, ಸುರಂಗ ಮಾರ್ಗ, ಎಲಿವೇಟೆಡ್‌ ಕಾರಿಡಾರ್, ಮೆಟ್ರೋ, ಬಸ್ ಹಾಗೂ ಉಪನಗರ ರೈಲು ಸೇರಿದಂತೆ ಸಮಗ್ರ ಮೂಲಸೌಕರ್ಯ ಅಭಿವೃದ್ಧಿಗೆ ಆದ್ಯತೆ ನೀಡಿ, ಮುಂದಿನ 10 ವರ್ಷಗಳ ದೂರದೃಷ್ಟಿಯ ಯೋಜನೆಯನ್ನು ರೂಪಿಸಲಾಗಿದೆ ಎಂದು ಸಿಎಂ ಡಿಕೆ ಶಿವಕುಮಾರ್ ಅವರು ಎಕ್ಸ್ ನಲ್ಲಿ ಪೋಸ್ಟ್ ಮಾಡಿದ್ದಾರೆ.

ತಾರತಮ್ಯವಿಲ್ಲದೆ ಎಲ್ಲಾ ಕ್ಷೇತ್ರಗಳಿಗೆ ಅಗತ್ಯ ಅನುದಾನ ಒದಗಿಸಿ, ಸುಗಮ ಸಂಚಾರ, ಶಾಶ್ವತ ಕುಡಿಯುವ ನೀರು, ಒಳಚರಂಡಿ ಹಾಗೂ ವೈಜ್ಞಾನಿಕ ಕಸ ನಿರ್ವಹಣೆಯ ಮೂಲಕ ಬೆಂಗಳೂರು ನಗರವನ್ನು ಇನ್ನಷ್ಟು ಆಧುನಿಕ, ಸುಸಜ್ಜಿತ ಹಾಗೂ ವಾಸಯೋಗ್ಯ ನಗರವನ್ನಾಗಿಸುವುದೇ ಸರ್ಕಾರದ ಗುರಿಯಾಗಿದೆ ಎಂದು ತಿಳಿಸಿದ್ದಾರೆ.

ಸಿಎಂ ಡಿಕೆಶಿಯ ಯೋಜನೆಗಳು

• ಸಾರಿಗೆ ಮತ್ತು ಮೆಟ್ರೋ ವಿಸ್ತರಣೆ: ಬೆಂಗಳೂರಿನಲ್ಲಿ 350 ಕಿ.ಮೀ ಮೆಟ್ರೋ ಜಾಲವನ್ನು ನಿರ್ಮಿಸಲಾಗಿದ್ದು, ಇದನ್ನು ಮುಂದಿನ ವರ್ಷದೊಳಗೆ 500 ಕಿ.ಮೀ.ಗೆ ವಿಸ್ತರಿಸುವ ಗುರಿ ಹೊಂದಲಾಗಿದೆ.

• ರಸ್ತೆ ಹಾಗೂ ಸುರಂಗ ಮಾರ್ಗಗಳು: ನಗರದಲ್ಲಿ 500 ಕಿ.ಮೀ ಹೊಸ ರಸ್ತೆಗಳ ನಿರ್ಮಾಣ, 1,500 ಕಿ.ಮೀ ಮೇಲ್ದರ್ಜೆ ರಸ್ತೆಗಳು, 40 ಕಿ.ಮೀ ಸುರಂಗ ಮಾರ್ಗ ಮತ್ತು ಡಬಲ್ ಡೆಕ್ಕರ್ ಫ್ಲೈಓವರ್ ಯೋಜನೆಗಳನ್ನು ರೂಪಿಸಲಾಗಿದೆ.

• ಯಲಹಂಕ ಎಲಿವೇಟೆಡ್ ರೈಲ್ವೆ ಟರ್ಮಿನಲ್: ದೇಶದಲ್ಲೇ ಮೊದಲ ಬಾರಿಗೆ ಸುಮಾರು ₹5,754 ರಿಂದ ₹6,000 ಕೋಟಿ ವೆಚ್ಚದಲ್ಲಿ ಎಲಿವೇಟೆಡ್ ರೈಲ್ವೆ ಕೋಚಿಂಗ್ ಟರ್ಮಿನಲ್ ಅನ್ನು ಯಲಹಂಕದಲ್ಲಿ ನಿರ್ಮಿಸಲು ಯೋಜನೆ ಸಿದ್ಧಪಡಿಸಲಾಗಿದೆ.

• ಕುಡಿಯುವ ನೀರು ಮತ್ತು ಕಸ ನಿರ್ವಹಣೆ: ಕಾವೇರಿ 6ನೇ ಹಂತದ (Cauvery Stage-6) ಯೋಜನೆ ಮೂಲಕ ಶಾಶ್ವತ ಕುಡಿಯುವ ನೀರು ಮತ್ತು ವೈಜ್ಞಾನಿಕವಾಗಿ ದಿನಕ್ಕೆ 9,000 ಟನ್ ಕಸ ವಿಲೇವಾರಿ ಮಾಡಲು ಕ್ರಮ ಕೈಗೊಳ್ಳಲಾಗುತ್ತಿದೆ.

• 10 ವರ್ಷಗಳ ಅಭಿವೃದ್ಧಿ ನೀಲನಕ್ಷೆ: 2037ರಲ್ಲಿ ಬರುವ ಬೆಂಗಳೂರಿನ 500ನೇ ವಾರ್ಷಿಕೋತ್ಸವದ ಹಿನ್ನೆಲೆಯಲ್ಲಿ ₹1 ಲಕ್ಷ ಕೋಟಿಗೂ ಅಧಿಕ ವೆಚ್ಚದಲ್ಲಿ ಸಮಗ್ರ 10 ವರ್ಷಗಳ ಅಭಿವೃದ್ಧಿ ಯೋಜನೆಯನ್ನು ಅನುಷ್ಠಾನಗೊಳಿಸಲಾಗುತ್ತಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

CEC ವಿರುದ್ಧ ಇಂಡಿಯಾ ಒಕ್ಕೂಟದಿಂದ ಸಾರ್ವಜನಿಕ ದೋಷಾರೋಪಣೆ: ಮಾಜಿ ಲೋಕಸಭಾ ಸ್ಪೀಕರ್ ಮೀರಾ ಕುಮಾರ್ ಅಧ್ಯಕ್ಷತೆ!

KPSC: ರಾಜ್ಯ ಸರ್ಕಾರಕ್ಕೆ ಭಾರಿ ಶಾಕ್; ಸುಪ್ರೀಂ ನಲ್ಲಿ 2022 ರ ವಿಶೇಷ ಕಾಯ್ದೆ ರದ್ದು! 362 ಕೆಎಎಸ್ ಅಧಿಕಾರಿಗಳ ನೌಕರಿಗೆ ಕುತ್ತು!

ಬೇರೆಯವರಿಗೆ ಉಪದೇಶ ನೀಡುವುದು ನಿಲ್ಲಿಸಿ; ವಾರಾಣಸಿ, ನಾಗ್ಪುರ ಬಿಜೆಪಿ ಸೋಲಿನ ಆತ್ಮಾವಲೋಕನ ಮಾಡಿಕೊಳ್ಳಿ: ಪ್ರಧಾನಿ ಮೋದಿಗೆ ಕಾಂಗ್ರೆಸ್‌ ತಿರುಗೇಟು

Israel polls: ಅರಬ್ ಪಾರ್ಟಿಗಳೇ 'ಕಿಂಗ್ ಮೇಕರ್' ಆಗೋ ಸಾಧ್ಯತೆ; ಅಧಿಕಾರದಿಂದ ನೆತನ್ಯಾಹು ಕಿತ್ತೆಸೆಯಲು ಪ್ಲಾನ್!

ಇಸ್ರೇಲ್ ಚುನಾವಣೆ ಫಲಿತಾಂಶ: ಬಹುಮತ ಪಡೆಯುವಲ್ಲಿ ನೆತನ್ಯಾಹು, ಗಾಡಿ ಐಸೆನ್‌ಕೋಟ್‌ ವಿಫಲ, ಮೈತ್ರಿ ಅಗತ್ಯ!