ಗ್ಯಾರಂಟಿ ಅನುಷ್ಠಾನ ಸಮಿತಿ ಜೊತೆ ಸಭೆ  
ರಾಜ್ಯ

ಗ್ಯಾರಂಟಿ ಯೋಜನೆಗಳ ಫಲಾನುಭವಿಗಳ ಮನೆಗಳಿಗೆ ಭೇಟಿ ನೀಡಿ: ಸಮಿತಿ ಸದಸ್ಯರಿಗೆ ಸಿಎಂ ಡಿ ಕೆ ಶಿವಕುಮಾರ್‌ ಸೂಚನೆ; Video

ಯೋಜನೆಗಳ ಕುರಿತು ನಿಯಮಿತವಾಗಿ ಮಾಹಿತಿ ಹಾಗೂ ಫಲಾನುಭವಿಗಳ ಅಭಿಪ್ರಾಯಗಳನ್ನು ಹಂಚಿಕೊಳ್ಳುವುದರಿಂದ ಗ್ಯಾರಂಟಿ ಯೋಜನೆಗಳ ವಿರುದ್ಧ ಹರಡಲಾಗುತ್ತಿರುವ ತಪ್ಪು ಮಾಹಿತಿ ಮತ್ತು ಅಪಪ್ರಚಾರವನ್ನು ಎದುರಿಸಲು ಸಾಧ್ಯವಾಗುತ್ತದೆ ಎಂದು ಹೇಳಿದರು.

ಬೆಂಗಳೂರು: ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳ ಪರಿಣಾಮಕಾರಿ ಅನುಷ್ಠಾನವನ್ನು ಖಚಿತಪಡಿಸಿಕೊಳ್ಳಲು ಪಂಚಾಯಿತಿ ಮಟ್ಟದಲ್ಲಿ ಗ್ಯಾರಂಟಿ ಅನುಷ್ಠಾನ ಸಮಿತಿಗಳನ್ನು ರಚಿಸಲಾಗುತ್ತಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ತಿಳಿಸಿದ್ದಾರೆ.

ಸಮಿತಿಯ ಸದಸ್ಯರು ಫಲಾನುಭವಿಗಳೊಂದಿಗೆ ನಿರಂತರ ಸಂಪರ್ಕದಲ್ಲಿರಬೇಕು ಹಾಗೂ ಯೋಜನೆಗಳ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ನಿಯಮಿತವಾಗಿ ಮಾಹಿತಿ ಹಂಚಿಕೊಳ್ಳಬೇಕು ಎಂದು ಅವರು ಸೂಚಿಸಿದರು.

ನಿನ್ನೆ ತಮ್ಮ ಅಧಿಕೃತ ಗೃಹ ಕಚೇರಿ ‘ಕೃಷ್ಣಾ’ದಲ್ಲಿ ರಾಜ್ಯ ಗ್ಯಾರಂಟಿ ಅನುಷ್ಠಾನ ಸಮಿತಿಯ ಡ್ಯಾಶ್‌ಬೋರ್ಡ್‌ ಹಾಗೂ ಸಾಮಾಜಿಕ ಜಾಲತಾಣಗಳ ಖಾತೆಗಳಿಗೆ ಚಾಲನೆ ನೀಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯೋಜನೆಗಳ ಕುರಿತು ನಿಯಮಿತವಾಗಿ ಮಾಹಿತಿ ಹಾಗೂ ಫಲಾನುಭವಿಗಳ ಅಭಿಪ್ರಾಯಗಳನ್ನು ಹಂಚಿಕೊಳ್ಳುವುದರಿಂದ ಗ್ಯಾರಂಟಿ ಯೋಜನೆಗಳ ವಿರುದ್ಧ ಹರಡಲಾಗುತ್ತಿರುವ ತಪ್ಪು ಮಾಹಿತಿ ಮತ್ತು ಅಪಪ್ರಚಾರವನ್ನು ಎದುರಿಸಲು ಸಾಧ್ಯವಾಗುತ್ತದೆ ಎಂದು ಹೇಳಿದರು.

ಸಮಿತಿಯ ಸದಸ್ಯರು ಪ್ರತಿಯೊಬ್ಬ ಫಲಾನುಭವಿಯ ಮನೆಗೆ ಭೇಟಿ ನೀಡಿ, ಮನೆಯ ಬಾಗಿಲಿಗೆ ‘ಗ್ಯಾರಂಟಿ ಮನೆ’ ಎಂಬ ಸ್ಟಿಕ್ಕರ್‌ ಅಂಟಿಸಬೇಕು ಎಂದು ಸೂಚಿಸಿದರು.

‘ಸರ್ಕಾರದ ಗ್ಯಾರಂಟಿ ಯೋಜನೆಗಳಿಂದ ದೊರೆಯುತ್ತಿರುವ ಪ್ರಯೋಜನಗಳ ಕುರಿತು ಫಲಾನುಭವಿಗಳಿಗೆ ಮನವರಿಕೆ ಮಾಡಿಕೊಡಬೇಕು. ಎಲ್ಲ ಹಂತಗಳಲ್ಲಿಯೂ ಸಾಮಾಜಿಕ ಜಾಲತಾಣಗಳನ್ನು ಪರಿಣಾಮಕಾರಿಯಾಗಿ ಬಳಸಿಕೊಳ್ಳಬೇಕು ಎಂದು ತಿಳಿಸಿದರು.

ರಾಜ್ಯ ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಎಚ್‌.ಎಂ. ರೇವಣ್ಣ, ‘ಸಮಿತಿಯ ಡ್ಯಾಶ್‌ಬೋರ್ಡ್‌ನಲ್ಲಿ ಗ್ಯಾರಂಟಿ ಯೋಜನೆಗಳಿಗಾಗಿ ಸರ್ಕಾರ ಮಾಡಿರುವ ವೆಚ್ಚದ ಕುರಿತು ಜಿಲ್ಲಾವಾರು ಹಾಗೂ ತಾಲ್ಲೂಕುವಾರು ಮಾಹಿತಿ ಲಭ್ಯವಿದೆ. ಯೋಜನೆಗಳಿಗೆ ಸಂಬಂಧಿಸಿದ ಸರ್ಕಾರಿ ಆದೇಶಗಳು ಹಾಗೂ ಅಧಿಕಾರಿಗಳ ಸಂಪರ್ಕ ವಿವರಗಳನ್ನೂ ಪೋರ್ಟಲ್‌ನಲ್ಲಿ ಒದಗಿಸಲಾಗಿದೆ ಎಂದು ಹೇಳಿದರು.

ಡ್ಯಾಶ್‌ಬೋರ್ಡ್‌ನಲ್ಲಿ ಗ್ಯಾರಂಟಿ ಯೋಜನೆಗಳ ಯಶೋಗಾಥೆಗಳ ಸಂಗ್ರಹವೂ ಇದೆ. ಸಮಿತಿಯ ಸದಸ್ಯರು ಫಲಾನುಭವಿಗಳೊಂದಿಗೆ ಸಂವಾದ ನಡೆಸಲು ಹಾಗೂ ಅವರ ಅಭಿಪ್ರಾಯಗಳನ್ನು ಹಂಚಿಕೊಳ್ಳಲು ಅನುಕೂಲವಾಗುವಂತೆ ‘ಗ್ಯಾರಂಟಿ ಕಟ್ಟೆ’ ಎಂಬ ವೇದಿಕೆಯನ್ನೂ ರೂಪಿಸಲಾಗುವುದು ಎಂದು ತಿಳಿಸಿದರು.

ಗ್ಯಾರಂಟಿ ಅನುಷ್ಠಾನ ಸಮಿತಿಯ ಉಪಾಧ್ಯಕ್ಷರಾದ ಪಿ.ಟಿ. ಪರಮೇಶ್ವರ ನಾಯ್ಕ್‌, ದಿನೇಶ್‌ ಗೂಳಿಗೌಡ, ಎಸ್‌.ಆರ್‌. ಮೆಹರೋಜ್‌ ಖಾನ್‌, ಬಿಬಿಎಂಪಿ ವ್ಯಾಪ್ತಿಯ ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಜಿ. ಕೃಷ್ಣಪ್ಪ, ಮುಖ್ಯಮಂತ್ರಿಯವರ ಸಂವಹನ ಸಲಹೆಗಾರ ದೀಪಕ್‌ ತಿಮ್ಮಯ್ಯ, ಇ-ಆಡಳಿತ ಕೇಂದ್ರದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಬೂ ಬಾಲನ್‌ ಸೇರಿದಂತೆ ಹಲವರು ಸಭೆಯಲ್ಲಿ ಭಾಗವಹಿಸಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಹಾಸನಾಂಬ ದರ್ಶನಕ್ಕೆ ಕ್ಷಣಗಣನೆ, ಇಂದು ಗರ್ಭಗುಡಿ ಬಾಗಿಲು ಓಪನ್! ಈ ಬಾರಿ ಸುಮಾರು 30 ಲಕ್ಷ ಭಕ್ತರು ಆಗಮಿಸುವ ನಿರೀಕ್ಷೆ

ದೇವರಿಲ್ಲ ಎಂದು ನಾನು ಹೇಳಿಲ್ಲ: ಕೆಟ್ಟ ಕೆಲಸ ಮಾಡಿ ಪೂಜೆ ಮಾಡಿದರೆ ದೇವರು ಒಳ್ಳೆಯದು ಮಾಡಲ್ಲ; ಸಿದ್ದರಾಮಯ್ಯ

ಎಕ್ಸ್‌ಪ್ರೆಸ್‌ವೇನಲ್ಲಿ 120 ಕಿ.ಮೀ ವೇಗದಲ್ಲಿ ವಾಹನ ಚಲಾಯಿಸಿದರೆ ದಂಡವಿಲ್ಲ: ನಿತಿನ್‌ ಗಡ್ಕರಿ ಮಹತ್ವದ ಘೋಷಣೆ!

MLC Election: ಫಡ್ನವೀಸ್, ಆರ್‌ಎಸ್‌ಎಸ್‌ನ ತವರು ನಾಗ್ಪುರದಲ್ಲಿ ಕಾಂಗ್ರೆಸ್‌ಗೆ ಗೆಲುವು, ಬಿಜೆಪಿಗೆ ಭಾರಿ ಹಿನ್ನಡೆ!

ಜೆಡಿಎಸ್‌–ಬಿಜೆಪಿ ಮೈತ್ರಿಯಿಂದ ಕಾಂಗ್ರೆಸ್‌ಗೆ ಸವಾಲು, ಪಕ್ಷ ಕಾರ್ಯತಂತ್ರ ರೂಪಿಸುತ್ತದೆ : ಬಿ.ಕೆ. ಹರಿಪ್ರಸಾದ್‌