ಬಿ.ವೈ. ವಿಜಯೇಂದ್ರ 
ರಾಜ್ಯ

MLC ಎಲೆಕ್ಷನ್ ನಲ್ಲಿ 4 ಸ್ಥಾನ NDA ತೆಕ್ಕೆಗೆ: 2028ರ ವಿಧಾನಸಭಾ ಚುನಾವಣೆಗೆ ದಿಕ್ಸೂಚಿ ಎಂದ ಬಿ.ವೈ. ವಿಜಯೇಂದ್ರ!

ಈ ಫಲಿತಾಂಶ ಹಲವು ರಾಜಕೀಯ ವಿಶ್ಲೇಷಣೆಗಳಿಗೆ ಎಡೆಮಾಡಿಕೊಟ್ಟಿವೆ. ಕಾಂಗ್ರೆಸ್ ಸರ್ಕಾರವು ತನ್ನ ‘ಗ್ಯಾರಂಟಿ’ ಯೋಜನೆಗಳಿಂದ ಸೃಷ್ಟಿಯಾದ ಭ್ರಮೆಯಲ್ಲಿದೆ ಮತ್ತು ಅಧಿಕಾರದ ಅಮಲಿನಲ್ಲಿದೆ ಎಂದು ಬಿ.ವೈ. ವಿಜಯೇಂದ್ರ ಟೀಕಿಸಿದರು.

ಮೈಸೂರು: ವಿಧಾನ ಪರಿಷತ್ತಿನ ನಾಲ್ಕು ಕ್ಷೇತ್ರಗಳಲ್ಲಿ ಎನ್‌ಡಿಎ ಅಭ್ಯರ್ಥಿಗಳ ಗೆಲುವು ಮುಂಬರುವ ವಿಧಾನಸಭಾ ಚುನಾವಣೆಗೆ ಸ್ಪಷ್ಪ ದಿಕ್ಸೂಚಿಯಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಬುಧವಾರ ಹೇಳಿದ್ದಾರೆ. ಅಲ್ಲದೆ, 2028ರ ವಿಧಾನಸಭಾ ಚುನಾವಣೆಯ ನಂತರ ರಾಜ್ಯದಲ್ಲಿ ಎನ್‌ಡಿಎ ಸರ್ಕಾರ ರಚನೆಯಾಗಲಿದೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಮೈಸೂರಿನಲ್ಲಿ ಬುಧವಾರ ನಡೆದ ‘ಪ್ರಜಾಪ್ರಭುತ್ವ ಉಳಿಸಿ, ಅರಾಜಕತೆ ತೊಲಗಿಸಿ’ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ವಿಜಯೇಂದ್ರ, ಬಿಜೆಪಿ-ಜೆಡಿಎಸ್ ಮೈತ್ರಿಕೂಟವನ್ನು ಬೆಂಬಲಿಸಿದ ಪದವೀಧರ ಹಾಗೂ ಶಿಕ್ಷಕ ಮತದಾರರಿಗೆ ಧನ್ಯವಾದ ಅರ್ಪಿಸಿದರು ಮತ್ತು ವಿಜೇತ ಅಭ್ಯರ್ಥಿಗಳಿಗೆ ಅಭಿನಂದನೆ ಸಲ್ಲಿಸಿದರು.

ಈ ಫಲಿತಾಂಶ ಹಲವು ರಾಜಕೀಯ ವಿಶ್ಲೇಷಣೆಗಳಿಗೆ ಎಡೆಮಾಡಿಕೊಟ್ಟಿವೆ. ಕಾಂಗ್ರೆಸ್ ಸರ್ಕಾರವು ತನ್ನ ‘ಗ್ಯಾರಂಟಿ’ ಯೋಜನೆಗಳಿಂದ ಸೃಷ್ಟಿಯಾದ ಭ್ರಮೆಯಲ್ಲಿದೆ ಮತ್ತು ಅಧಿಕಾರದ ಅಮಲಿನಲ್ಲಿದೆ ಎಂದು ಟೀಕಿಸಿದರು. ರೈತರ ಸಮಸ್ಯೆಗಳನ್ನು ಬಗೆಹರಿಸುವಲ್ಲಿ, ಬರ ಪರಿಹಾರ ಒದಗಿಸುವಲ್ಲಿ ಮತ್ತು ಉದ್ಯೋಗ ಸೃಷ್ಟಿಸುವಲ್ಲಿ ರಾಜ್ಯ ಸರ್ಕಾರ ವಿಫಲವಾಗಿದೆ ಎಂದು ಅವರು ಆರೋಪಿಸಿದರು.

ಪ್ರಧಾನಿಯಾಗಬೇಕೆಂಬ ಮಹತ್ವಾಕಾಂಕ್ಷೆಯಿಂದ ದೇಶದಲ್ಲಿ ಅಸ್ಥಿರತೆಯನ್ನು ಸೃಷ್ಟಿಸಲು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಪ್ರಯತ್ನಿಸುತ್ತಿದ್ದಾರೆ ಎಂದು ವಿಜಯೇಂದ್ರ ದೂರಿದರು. ಈ ಚುನಾವಣೆಗಳು ಮತಪತ್ರಗಳ (ballot papers) ಮೂಲಕ ನಡೆದಿವೆ ಎಂಬುದನ್ನು ಉಲ್ಲೇಖಿಸಿದ ಅವರು, ಕಾಂಗ್ರೆಸ್ ತಾನೇ ಪ್ರತಿಪಾದಿಸಿದ ಮತದಾನ ವಿಧಾನದಲ್ಲೇ ಸೋತಿದೆ. ಕಾಂಗ್ರೆಸ್‌ಗೆ ಚುನಾವಣಾ ಸಂಸ್ಥೆಗಳ ಮೇಲೆ ನಂಬಿಕೆಯಿಲ್ಲ ಎಂದು ಅವರು ಆರೋಪಿಸಿದರು.

ಈ ಫಲಿತಾಂಶಗಳು ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ಮತ್ತು ರಾಹುಲ್ ಗಾಂಧಿ ಅವರಿಗೆ ತಲುಪಬೇಕು. ಮುಂದಿನ ಬಾರಿ ಕರ್ನಾಟಕದಲ್ಲಿ ಎನ್‌ಡಿಎ ಖಂಡಿತವಾಗಿಯೂ ಸರ್ಕಾರ ರಚಿಸಲಿದೆ. ಯಾವುದೇ ನಕಾರಾತ್ಮಕ ಶಕ್ತಿಗಳಿಗೂ ಇದನ್ನು ತಡೆಯಲು ಸಾಧ್ಯವಿಲ್ಲ ಎಂದು ಅವರು ಹೇಳಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಹಾಸನಾಂಬ ದರ್ಶನಕ್ಕೆ ಕ್ಷಣಗಣನೆ, ಇಂದು ಗರ್ಭಗುಡಿ ಬಾಗಿಲು ಓಪನ್! ಈ ಬಾರಿ ಸುಮಾರು 30 ಲಕ್ಷ ಭಕ್ತರು ಆಗಮಿಸುವ ನಿರೀಕ್ಷೆ

ದೇವರಿಲ್ಲ ಎಂದು ನಾನು ಹೇಳಿಲ್ಲ: ಕೆಟ್ಟ ಕೆಲಸ ಮಾಡಿ ಪೂಜೆ ಮಾಡಿದರೆ ದೇವರು ಒಳ್ಳೆಯದು ಮಾಡಲ್ಲ; ಸಿದ್ದರಾಮಯ್ಯ

MLC Election: ಫಡ್ನವೀಸ್, ಆರ್‌ಎಸ್‌ಎಸ್‌ನ ತವರು ನಾಗ್ಪುರದಲ್ಲಿ ಕಾಂಗ್ರೆಸ್‌ಗೆ ಗೆಲುವು, ಬಿಜೆಪಿಗೆ ಭಾರಿ ಹಿನ್ನಡೆ!

ಜೆಡಿಎಸ್‌–ಬಿಜೆಪಿ ಮೈತ್ರಿಯಿಂದ ಕಾಂಗ್ರೆಸ್‌ಗೆ ಸವಾಲು, ಪಕ್ಷ ಕಾರ್ಯತಂತ್ರ ರೂಪಿಸುತ್ತದೆ : ಬಿ.ಕೆ. ಹರಿಪ್ರಸಾದ್‌

‘96 ಗಂಟೆಯೊಳಗೆ ದಾಳಿ’: Donald Trump ಆದೇಶಕ್ಕೆ ಕಾಯುತ್ತಿರುವ ಅಮೆರಿಕ ಸೇನೆ, ಇರಾನ್ ಮೇಲೆ ಮತ್ತೆ ಯುದ್ಧದ ಕಾರ್ಮೋಡ?