ಬೆಂಗಳೂರು: ನಂದಿನಿ ಹಾಲಿನ ದರ ಏರಿಕೆ ಶಾಕ್ ನೀಡಿದ್ದ ರಾಜ್ಯ ಸರ್ಕಾರ ಇದೀಗ ಮತ್ತೊಂದು ಬಿಗ್ ಶಾಕ್ ನೀಡಿದೆ. ಇಂದಿನ ಸಚಿವ ಸಂಪುಟದಲ್ಲಿ ಬಸ್ ಟಿಕೆಟ್ ದರ ಏರಿಕೆ ಜೊತೆಗೆ ಟಿಕೆಟ್ ದರ ಏರಿಕೆ ಬಗ್ಗೆ ಚರ್ಚೆಯಾಗಿದೆ ಎಂದು ಸಾರಿಗೆ ಸಚಿವ ಭೈರತಿ ಸುರೇಶ್ ಹೇಳಿದ್ದಾರೆ. ಈಗಾಗಲೇ ನಾವು ಬಸ್ ಪ್ರಯಾಣದ ದರ ಏರಿಕೆ ಮಾಡಬೇಕು ಅಂತ ತೀರ್ಮಾನ ಮಾಡಿದ್ವಿ. ಆದರೆ ದರ ಏರಿಕೆಯನ್ನು ಸಾರಿಗೆ ಇಲಾಖೆಗೆ ಬಿಡಲಾಗಿದೆ ಎಂದರು.
ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಇಂದು ಎಲ್ಲರ ಜೊತೆ ಚರ್ಚೆ ಮಾಡಿದ್ದು ದರ ಏರಿಕೆ ಬಗ್ಗೆ ಸಾರಿಗೆ ಇಲಾಖೆಯವರೆ ಕ್ರಮಕೈಗೊಳ್ಳಿ ಅಂತ ಹೇಳಿದ್ದಾರೆ. ಹೀಗಾಗಿ ನಾನು ಸಾರಿಗೆ ಇಲಾಖೆ ಸೆಕ್ರೆಟರಿ ಸೇರಿದಂತೆ ನಾಲ್ಕು ನಿಗಮದ ಎಂಡಿಗಳ ಜೊತೆ ನವೆಂಬರ್ 3ರಂದು ಸಭೆ ನಡೆಸುತ್ತೇನೆ. ಎಷ್ಟು ದರ ಜಾಸ್ತಿ ಮಾಡಬಹುದು ಅಂತ ಆಮೇಲೆ ನಿರ್ಧಾರ ಮಾಡುತ್ತೇವೆ. ಬಳಿಕ ನವೆಂಬರ್ 4ರಂದು ನಾನೇ ಸುದ್ದಿಗೋಷ್ಟಿ ಮಾಡಿ ಟಿಕೆಟ್ ದರ ಹೆಚ್ಚಳ ಬಗ್ಗೆ ಮಾಹಿತಿ ನೀಡುತ್ತೇನೆ ಎಂದು ಸ್ಪಷ್ಟಪಡಿಸಿದರು.